ಶಿವಮೊಗ್ಗ: ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ, ಫೆ.23 ರ ಮುಂಜಾನೆವರೆಗೆ ಕರ್ಫ್ಯೂ ಜಾರಿ

ಪ್ರಕರಣ ಹಿನ್ನೆಲೆ ಶಿವಮೊಗ್ಗ ನಗರದಾದ್ಯಂತ ಪೊಲೀಸರ ಸರ್ಪಗಾವಲು ಸುತ್ತುವರಿದಿದೆ. ಹರ್ಷನ ಮನೆ ಸುತ್ತಮುತ್ತ ಆರ್​ಎಎಫ್​​ ಸಿಬ್ಬಂದಿ ಕಾವಲು ನಿಯೋಜನೆ ಮಾಡಲಾಗಿದೆ. ತೀರ್ಥಹಳ್ಳಿ ರಸ್ತೆಯ ಸೀಗೆಹಟ್ಟಿಯಲ್ಲಿರುವ ಹರ್ಷ ನಿವಾಸದಲ್ಲಿ ಪೊಲೀಸರು ಕಾವಲಿದ್ದಾರೆ.

ಶಿವಮೊಗ್ಗ: ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ, ಫೆ.23 ರ ಮುಂಜಾನೆವರೆಗೆ ಕರ್ಫ್ಯೂ ಜಾರಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on:Feb 21, 2022 | 8:12 PM

ಶಿವಮೊಗ್ಗ: ನಗರದ ಶಾಲಾ- ಕಾಲೇಜುಗಳಿಗೆ ನಾಳೆ (ಫೆಬ್ರವರಿ 22) ರಜೆ ಘೋಷಣೆ ಮಾಡಿ ಶಿವಮೊಗ್ಗ ಜಿಲ್ಲಾಧಿಕಾರಿ ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಶಿವಮೊಗ್ಗದಲ್ಲಿ ಫೆಬ್ರವರಿ 23 ರ ಮುಂಜಾನೆಯವರೆಗೆ ಕರ್ಫ್ಯೂ ಜಾರಿ ಮಾಡಲಾಗಿದೆ. ಶಿವಮೊಗ್ಗ ಎಸ್​ಪಿ ಬಿ.ಎಂ. ಲಕ್ಷ್ಮೀಪ್ರಸಾದ್ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ ಹಿನ್ನೆಲೆ ಶಿವಮೊಗ್ಗ ನಗರದಾದ್ಯಂತ ಪೊಲೀಸರ ಸರ್ಪಗಾವಲು ಸುತ್ತುವರಿದಿದೆ. ಹರ್ಷನ ಮನೆ ಸುತ್ತಮುತ್ತ ಆರ್​ಎಎಫ್​​ ಸಿಬ್ಬಂದಿ ಕಾವಲು ನಿಯೋಜನೆ ಮಾಡಲಾಗಿದೆ. ತೀರ್ಥಹಳ್ಳಿ ರಸ್ತೆಯ ಸೀಗೆಹಟ್ಟಿಯಲ್ಲಿರುವ ಹರ್ಷ ನಿವಾಸದಲ್ಲಿ ಪೊಲೀಸರು ಕಾವಲಿದ್ದಾರೆ.

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ಕಾಸಿಫ್, ನದೀಮ್​ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹೇಳಲಾಗಿದೆ. ಉಳಿದ ಆರೋಪಿಗಳ ಪತ್ತೆಗಾಗಿ ಪೊಲೀಸರ 3 ತಂಡ ರಚನೆ ಮಾಡಲಾಗಿದೆ. ಸಿಪಿಐಗಳಾದ ಅಭಿಯಪ್ರಕಾಶ್, ಗುರುರಾಜ್, ಸತೀಶ್​ ತಂಡ ರಚಿಸಲಾಗಿದೆ. ಹರ್ಷ ಕೊಲೆ ಪ್ರಕರಣದ ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ತಿಳಿಸಲಾಗಿದೆ.

ಇತ್ತ, ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಐವರ ಸೆರೆ ಹಿಡಯಲಾಗಿದೆ ಎಂಬ ಬಗ್ಗೆ ಟಿವಿ9ಗೆ ಪೊಲೀಸ್ ಅಧಿಕಾರಿಗಳ ಉನ್ನತ ಮೂಲಗಳ ಮಾಹಿತಿ ಲಭ್ಯವಾಗಿದೆ. ಹತ್ಯೆ ನಡೆದ 24 ಗಂಟೆಗಳಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಶಿವಮೊಗ್ಗ ಜಿಲ್ಲೆ ಮೂಲದವರೇ ಎಂದು ಮಾಹಿತಿ ಲಭ್ಯವಾಗಿದೆ. ಹಂತಕರ ಪತ್ತೆಗೆ ಮೂರು ವಿಶೇಷ ತಂಡಗಳನ್ನು ಎಸ್​ಪಿ ರಚಿಸಿದ್ದಾರೆ. ಆರೋಪಿಗಳ ಸೆರೆಗಾಗಿ ತಂಡ, ಟೆಕ್ನಿಕಲ್ ಟ್ರೇಸ್‌ಗೊಂದು ಟೀಂ ರಚನೆ ಮಾಡಲಾಗಿದೆ.

ಪ್ರಕರಣದ ಗ್ರೌಂಡ್‌ ರಿಪೋರ್ಟ್‌ ತನಿಖೆಗಾಗಿ 3ನೇ ಟೀಮ್ ರಚಿಸಲಾಗಿದೆ. ನಿನ್ನೆ ರಾತ್ರಿ 8.45 ರಿಂದ 9.15 ರ ಸಮಯದಲ್ಲಿ ಕೊಲೆ ನಡೆದಿತ್ತು. ಬಜರಂಗದಳ ಸದಸ್ಯ ಹರ್ಷ ಅಲಿಯಾಸ್ ಹಿಂದೂ ಹರ್ಷ (28) ಕೊಲೆ ಆಗಿದ್ದರು. ಸೀಗೇಹಟ್ಟಿ ನಿವಾಸಿ ಹರ್ಷ ಕೊಲೆ ಕೇಸಲ್ಲಿ ಈವರೆಗೆ ಐವರ ಸೆರೆ ಹಿಡಿಯಲಾಗಿದೆ ಎಂದು ಟಿವಿ9ಗೆ ಶಿವಮೊಗ್ಗ ಪೊಲೀಸರ ಉನ್ನತ ಮೂಲಗಳ ಮಾಹಿತಿ ಲಭಿಸಿದೆ.

ಇದನ್ನೂ ಓದಿ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: ತಾಯಿ ದೂರು ಆಧರಿಸಿ ಎಫ್‌ಐಆರ್ ದಾಖಲು

ಇದನ್ನೂ ಓದಿ: ಶಿವಮೊಗ್ಗ ಗಲಭೆ ಪ್ರಕರಣ: ಇದು ಪೂರ್ವನಿಯೋಜಿತ ಷಡ್ಯಂತ್ರ; ಎನ್​ಐಎ ಮೂಲಕ ತನಿಖೆಗೆ ಆಗ್ರಹಿಸಿದ ಕೆಎಸ್ ಈಶ್ವರಪ್ಪ

Published On - 8:11 pm, Mon, 21 February 22

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ