ಶಿವಮೊಗ್ಗ: ಭದ್ರಾವತಿ ಬಳಿ ಖಾಸಗಿ ಬಸ್ ಪಲ್ಟಿಯಾಗಿ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಜಿಲ್ಲೆಯ ಭದ್ರಾವತಿ ಬಳಿ ಖಾಸಗಿ ಬಸ್ ಪಲ್ಟಿಯಾಗಿ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಕೂಡಲೇ ಗಾಯಾಳುಗಳನ್ನ ಜಿಲ್ಲೆಯ ಮೆಗ್ಗಾನ್​ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ಶಿವಮೊಗ್ಗ: ಭದ್ರಾವತಿ ಬಳಿ ಖಾಸಗಿ ಬಸ್ ಪಲ್ಟಿಯಾಗಿ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಖಾಸಗಿ ಬಸ್​ ಪಲ್ಟಿ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Apr 27, 2023 | 9:35 AM

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ಬಳಿ ಖಾಸಗಿ ಬಸ್ ಪಲ್ಟಿಯಾಗಿ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಕೂಡಲೇ ಗಾಯಾಳುಗಳನ್ನ ಜಿಲ್ಲೆಯ ಮೆಗ್ಗಾನ್​ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್ ಇದಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ತಿರುವಿನಲ್ಲಿ ಬಸ್ ಪಲ್ಟಿಯಾಗಿದೆ. ಅದೃಷ್ಟವಶಾತ್​ ಚಾಲಕ ಸೇರಿ ಬಸ್​ನಲ್ಲಿದ್ದ30ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ದ್ವಿಚಕ್ರ ವಾಹನಕ್ಕೆ ಬೊಲೆರೋ ಗೂಡ್ಸ್ ವಾಹನ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು

ತುಮಕೂರು: ದ್ವಿಚಕ್ರ ವಾಹನಕ್ಕೆ ಬೊಲೆರೋ ಗೂಡ್ಸ್ ವಾಹನ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಹೊರವಲಯದ ಶೆಟ್ಟಿಹಳ್ಳಿ ರಿಂಗ್ ರಸ್ತೆ ಬಳಿ ನಡೆದಿದೆ. ಇನ್ನೋರ್ವನಿಗೆ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಮೃತನ ಮಾಹಿತಿ ತಿಳಿದುಬಂದಿಲ್ಲ. ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ:Crime News: ಬೆಂಗಳೂರಿನಲ್ಲಿ ಅದೊಂದು ಬೆರಳಚ್ಚು ತೆರೆದಿಟ್ಟಿತು ನೇಪಾಳಿ ಗ್ಯಾಂಗ್​ನ 15 ವರ್ಷದ ಪುರಾಣ

ಸಿಲಿಕಾನ್ ಸಿಟಿಯಲ್ಲಿ ಪುಡಿ ರೌಡಿಗಳ ಪುಂಡಾಟ; ವ್ಯಕ್ತಿಗೆ ಚಾಕು ಇರಿತ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪುಡಿ ರೌಡಿಗಳ ಪುಂಡಾಟ ಜಾಸ್ತಿಯಾಗಿದ್ದು, ವ್ಯಕ್ತಿಗೆ ಚಾಕು ಇರಿದು, ಕಾರು ಗ್ಲಾಸ್ ಒಡೆದು ಪುಂಡಾಟ ಮೆರೆದಿದ್ದಾರೆ. ನರಸಿಂಹ ಅಲಿಯಾಸ್​ ಕೋಸೆ ಗ್ಯಾಂಗ್ ನಿಂದ ವೆಂಕಟೇಶ್ ಎಂಬಾತನಿಗೆ ಚಾಕುವಿನಿಂದ ಇರಿದಿದ್ದಾರೆ. ಜೊತೆಗೆ ನಿತೀಶ್ ಎಂಬಾತನ ಕಾರಿನ ಗ್ಲಾಸ್​ನ್ನ ಪೀಸ್ ಪೀಸ್ ಮಾಡಿ ಕ್ರೌರ್ಯ ಮೆರೆದಿದ್ದಾರೆ. ಏಪ್ರಿಲ್ 25 ರಂದು ತಡರಾತ್ರಿ ನಡೆದ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಐಪಿಸಿ 307, 324 ಅಡಿಯಲ್ಲಿ ಗಿರಿನಗರ ಠಾಣೆಯಲ್ಲಿ ಎರಡು ಎಫ್ಐಆರ್ ದಾಖಲು ಮಾಡಲಾಗಿದ್ದು, ನರಸಿಂಹ ಅಲಿಯಾಸ್​ ಕೋಸೆ ,ಯೋಗೇಶ್ ಅಲಿಯಾಸ್​ ಯೋಗಿ ಎನ್ನುವವರನ್ನ ಬಂಧಿಸಲಾಗಿದ್ದು, ಮತ್ತೆ ಮೂವರ ಪತ್ತೆಗಾಗಿ ಗಿರಿನಗರ ಪೊಲೀಸರು ಬಲೆ ಬೀಸಿದ್ದಾರೆ.

ಇನ್ನಷ್ಟು ಅಪಘಾತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ