ಶಿವಮೊಗ್ಗದಲ್ಲಿ ವಿದ್ಯುತ್ ತಂತಿ ಬೇಲಿ ಸ್ಪರ್ಶಸಿ 2 ಗಂಡಾನೆಗಳ ಸಾವು
ವಿದ್ಯುತ್ ತಂತಿ ಸ್ಪರ್ಶವಾಗಿ 2 ಆನೆಗಳ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ತಾಲೂಕಿನ ಆಯನೂರು ಸಮೀಪದ ಶೆಟ್ಟಿಹಳ್ಳಿ ಅಭಯಾರಣ್ಯ ವ್ಯಾಪ್ತಿಯ ಚನ್ನಹಳ್ಳಿಯಲ್ಲಿ ನಡೆದಿದೆ.
ಶಿವಮೊಗ್ಗ: ವಿದ್ಯುತ್ ತಂತಿ ಸ್ಪರ್ಶವಾಗಿ 2 ಆನೆಗಳ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ತಾಲೂಕಿನ ಆಯನೂರು ಸಮೀಪದ ಶೆಟ್ಟಿಹಳ್ಳಿ ಅಭಯಾರಣ್ಯ ವ್ಯಾಪ್ತಿಯ ಚನ್ನಹಳ್ಳಿಯಲ್ಲಿ ನಡೆದಿದೆ. ಅರಣ್ಯದಂಚಿನ ಭಾಗದ ರೈತರು ಜೋಳದ ಹೊಲಕ್ಕೆ ವಿದ್ಯುತ್ ತಂತಿ ಬೇಲಿ ಅಳವಡಿಸಿದ್ದಾರೆ. ಜೋಳದ ಹೊಲಕ್ಕೆ ಬಂದ ಕಾಡಾನೆಗಳಿಗೆ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೆ ಮೃತಪಟ್ಟಿವೆ. 20 ಮತ್ತು 22 ವರ್ಷದ ಗಂಡು ಆನೆಗಳು ಮೃತಪಟ್ಟಿವೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಡು ಹಂದಿ ಭೇಟೆಯಾಡಲು ವಿದ್ಯತ್ ತಂತಿ ಹಾಕಿರುವ ಶಂಕೆ ವ್ಯಕ್ತವಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ