ತುಂಗಾ ನದಿ ಹಿನ್ನೀರಿನಲ್ಲಿ ಇಬ್ಬರು ಪುರುಷರು, ಓರ್ವ ಮಹಿಳೆ ಶವ ಪತ್ತೆ: ಬೆಚ್ಚಿಬಿದ್ದ ಜನ
ಶಿವಮೊಗ್ಗದ ತುಂಗಾ ನದಿಯ ಹಿನ್ನೀರಿನಲ್ಲಿ ಇಬ್ಬರು ಪುರುಷರು ಮತ್ತು ಓರ್ವ ಮಹಿಳೆಯ ಕೊಳೆತ ಮೃತದೇಹಗಳು ಪತ್ತೆಯಾಗಿವೆ. ಸಕ್ರೆಬೈಲ್ ಆನೆ ಬಿಡಾರದ ಬಳಿ ಈ ಘಟನೆ ನಡೆದಿದೆ. ತುಂಗಾನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಶಿವಮೊಗ್ಗ, ಫೆಬ್ರವರಿ 21: ತುಂಗಾ ನದಿ ಹಿನ್ನೀರಿನಲ್ಲಿ ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆಯ ಮೃತದೇಹ (dead body) ಕೊಳೆತ ಸ್ಥಿತಿಯಲ್ಲಿ ಪತ್ತೆ ಆಗಿರುವಂತಹ ಘಟನೆ ಸಕ್ರೆಬೈಲ್ ಆನೆ ಬಿಡಾರದ 10ನೇ ಮೈಲಿಕಲ್ಲಿನ ಬಳಿ ನಡೆದಿದೆ. ಮೂವರು ಆತ್ಮಹತ್ಯೆ ಮಾಡಿಕೊಂಡಿರು ಶಂಕೆ ವ್ಯಕ್ತವಾಗಿದ್ದು, ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ತುಂಗಾನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಎಸ್ಪಿ ಜಿ.ಕೆ ಮಿಥುನ್ ಕುಮಾರ್ ಹೇಳಿದ್ದಿಷ್ಟು
ಈ ಕುರಿತಾಗಿ ನಗರದಲ್ಲಿ ಎಸ್ಪಿ ಜಿ.ಕೆ ಮಿಥುನ್ ಕುಮಾರ್ ಹೇಳಿಕೆ ನೀಡಿದ್ದು, ತುಂಗಾ ಹಿನ್ನೀರಿನಲ್ಲಿ ಮೂರು ಮೃತದೇಹ ಪತ್ತೆಯಾಗಿದೆ. ಈ ಕುರಿತು ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದೇವೆ. ಕಳೆದ ಎರಡ್ಮೂರು ದಿನದ ಹಿಂದೆ ಆ ಭಾಗದಲ್ಲಿ ಮೃತರು ಓಡಾಡಿರುವುದನ್ನ ಜನ ನೋಡಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಈ ಬಗ್ಗೆ ತನಿಖೆ ಮಾಡಲಾಗುತ್ತಿದೆ. ಮೃತದೇಹಗಳನ್ನು ಮೆಗ್ಗಾನ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ. ಆತ್ಮಹತ್ಯೆಯಾ ಇಲ್ಲಾ ಕೊಲೆಯಾ ಎಂಬುದರ ಕುರಿತು ಸಹ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಆಸ್ಪತ್ರೆಯಿಂದ ನಾಪತ್ತೆಯಾದ ವ್ಯಕ್ತಿ ಶವವಾಗಿ ಪತ್ತೆ
ಆಸ್ಪತ್ರೆಯ ಹಿಂಭಾಗದ ಬಾವಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿರುವಂತಹ ಘಟನೆ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಹಾವೇರಿ ತಾಲೂಕಿನ ಚಿಕ್ಕಲಿಂಗದಳ್ಳಿ ಗ್ರಾಮದ ನಿವಾಸಿ ಶಿವಪ್ಪ ಮುದಕಪ್ಪ ಪುಜಾರ (65) ಮೃತ ವ್ಯಕ್ತಿ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
ಹೊಟ್ಟೆನೋವು ಎಂದು ಮೂರು ದಿನದ ಹಿಂದೆ ಶಿವಪ್ಪ ಮುದಕಪ್ಪ ಪುಜಾರ ಆಸ್ಪತ್ರೆಗೆ ದಾಖಲಾಗಿದ್ದ. ಮಂಗಳವಾರ ರಾತ್ರಿ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದಾರೆ. ಸಂಬಂಧಿಕರಿಗೆ ನಾನು ಮುಳ್ಳಿನ ಕಂಟೆಯಲ್ಲಿ ಬಿದಿದ್ದೇನೆ. ಎಲ್ಲಿ ಎಂದು ಗೊತ್ತಾಗುತ್ತಿಲ್ಲಾ ಎಂದು ಹೇಳಿದ್ದಾರೆ.
ಮೂರು ದಿನದಿಂದ ಆಸ್ಪತ್ರೆಯ ಸುತ್ತಮುತ್ತ ಸಂಬಂಧಿಕರು ಹುಡುಕಾಟ ನಡೆಸಿದ್ದಾರೆ. ಆದರೆ ಇಂದು ಆಸ್ಪತ್ರೆಯ ಹಿಂಭಾಗದ ಬಾವಿಯಲ್ಲಿ ಶವ ಪತ್ತೆಯಾಗಿದೆ. ಕಟ್ಟಡ ಕಾರ್ಮಿಕರು ನೋಡಿ ಆಸ್ಪತ್ರೆಯ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಕುಟುಂಬಸ್ಥ ಆಕ್ರಂದನ ಮುಗಿಲುಮುಟ್ಟಿದೆ.
ನಡು ನೀರಲ್ಲಿ ತೆಪ್ಪ ಮುಗುಚಿ ಯುವಕ ಸಾವು
ನಡು ನೀರಲ್ಲಿ ತೆಪ್ಪ ಮುಗುಚಿ ಯುವಕ ಸಾವನ್ನಪ್ಪಿರುವಂತಹ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ನಾರಿಹಳ್ಳ ಡ್ಯಾಂನಲ್ಲಿ ನಡೆದಿದೆ. ವಡ್ಡು ಗ್ರಾಮದ ನಾಗರಾಜ್ (21) ಮೃತ ಯುವಕ. ಸ್ನೇಹಿತರೊಂದಿಗೆ ಡ್ಯಾಂಗೆ ಸ್ನಾನಕ್ಕೆ ಹೋಗಿದ್ದ ನಾಗರಾಜ್, ಬಳಿಕ ತೆಪ್ಪದಲ್ಲಿ ಡ್ಯಾಂ ನಡು ನೀರಿಗೆ ಇಳಿದಿದ್ದಾನೆ. ಈ ವೇಳೆ ಏಕಾಏಕಿ ಮಗುಚಿದ ತೆಪ್ಪ, ಡ್ಯಾಂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
ಇದನ್ನೂ ಓದಿ: ಹೈದರಾಬಾದ್ನ ವೈದ್ಯ ವಿದ್ಯಾರ್ಥಿನಿ ದುರಂತ ಅಂತ್ಯ: ಮೂವತ್ತು ಗಂಟೆಗಳ ಬಳಿಕ ಶವ ಪತ್ತೆ
ಇನ್ನೊರ್ವ ಯುವಕ ಈಜಿ ದಡ ಸೇರಿದ್ದಾನೆ. 45 ಗಂಟೆಗಳ ಅಗ್ನಿಶಾಮಕ ದಳ ನಿರಂತರ ಕಾರ್ಯಾಚರಣೆ ಮಾಡಿ ಮೃತದೇಹ ಹೊರತೆಗೆಯಲಾಗಿದೆ. ತೋರಣಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:23 pm, Fri, 21 February 25