AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಮಂಗನ ಕಾಯಿಲೆಗೆ 8 ವರ್ಷದ ಬಾಲಕ ಸಾವು, ವರದಿ ನೀಡಲು ಆರೋಗ್ಯ ಇಲಾಖೆಗೆ ಸೂಚನೆ

ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ) ಹೆಚ್ಚುತ್ತಿರುವ ಕಾರಣ 8 ವರ್ಷದ ಬಾಲಕನು ಮೃತಪಟ್ಟಿದ್ದಾನೆ. ಈ ಘಟನೆಯಿಂದಾಗಿ ಜಿಲ್ಲಾಧಿಕಾರಿಗಳು ಸಾವು ಪರಿಶೀಲನೆಗೆ ಆದೇಶಿಸಿದ್ದಾರೆ. ತೀರ್ಥಹಳ್ಳಿ ತಾಲೂಕಿನಲ್ಲಿ ಈ ವರ್ಷ ಇಬ್ಬರು ಕೆಎಫ್‌ಡಿಗೆ ಬಲಿಯಾಗಿದ್ದಾರೆ. ಸದ್ಯ ಹೆಚ್ಚುತ್ತಿರುವ ಕೆಎಫ್‌ಡಿಗೆ ಕಾಡಿನ ಅಂಚಿನಲ್ಲಿ ವಾಸಿಸುವ ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ಶಿವಮೊಗ್ಗ: ಮಂಗನ ಕಾಯಿಲೆಗೆ 8 ವರ್ಷದ ಬಾಲಕ ಸಾವು, ವರದಿ ನೀಡಲು ಆರೋಗ್ಯ ಇಲಾಖೆಗೆ ಸೂಚನೆ
ಪ್ರಾತಿನಿಧಿಕ ಚಿತ್ರ
Basavaraj Yaraganavi
| Updated By: ಗಂಗಾಧರ​ ಬ. ಸಾಬೋಜಿ|

Updated on: Apr 19, 2025 | 11:58 AM

Share

ಶಿವಮೊಗ್ಗ, ಏಪ್ರಿಲ್ 19: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಮಂಗನ ಕಾಯಿಲೆಗೆ (KFD) 8 ವರ್ಷದ ಬಾಲಕ ಸಾವನ್ನಪ್ಪಿರುವಂತಹ (death) ಘಟನೆ ನಡೆದಿದೆ. ದತ್ತರಾಜಪುರ ಗ್ರಾಮದ ರಾಮು ಹಾಗೂ ಮಮತಾ ಎಂಬವರ ಮಗ ರಚಿತ್ ಮೃತ ಬಾಲಕ. ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಬಾಲಕ ಸಾವನ್ನಪ್ಪಿದ್ದಾನೆ.  ಆ ಮೂಲಕ ತೀರ್ಥಹಳ್ಳಿ ತಾಲೂಕಿನಲ್ಲಿ ಈ ವರ್ಷ ಮಂಗನ ಕಾಯಿಲೆಗೆ ಇಬ್ಬರು ಸಾವನ್ನಪ್ಪಿದ್ದಾರೆ.

ಬಾಲಕ ಸಾವಿನ ಕುರಿತು ಒಂದು ವಾರದಲ್ಲಿ ಡೆತ್ ಅಡಿಟ್​ ವರದಿ ನೀಡಲು ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ ಆರೋಗ್ಯ ಇಲಾಖೆಗೆ ಸೂಚನೆ ನೀಡಿದ್ದಾರೆ. ಇನ್ನು ಬೇಸಿಗೆ ತಿಂಗಳಲ್ಲಿ ಮಂಗನ ಕಾಯಿಲೆ ಉಲ್ಬಣಗೊಳ್ಳುತ್ತಿದ್ದು, ಮಂಗನ ಕಾಯಿಲೆ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಪರದಾಡುತ್ತಿದ್ದಾರೆ. ಹೀಗಾಗಿ ಕಾಡಿನಂಚಿನಲ್ಲಿ ನೆಲಸಿರುವ ಗ್ರಾಮಸ್ಥರು ಆತಂಕದಲ್ಲಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು: ಮತ್ತೆ ಇಬ್ಬರಲ್ಲಿ ಕಾಣಿಸಿಕೊಂಡ ಮಂಗನ ಕಾಯಿಲೆ, ರೋಗಿಗಳ ಸಂಖ್ಯೆ 6ಕ್ಕೆ ಏರಿಕೆ

ಇದನ್ನೂ ಓದಿ
Image
ಚಿಕ್ಕಮಗಳೂರು: ಮತ್ತೆ ಇಬ್ಬರಲ್ಲಿ ಕಾಣಿಸಿಕೊಂಡ ಮಂಗನ ಕಾಯಿಲೆ
Image
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತೆ ಕಾಣಿಸಿಕೊಂಡ ಮಂಗನ ಕಾಯಿಲೆ
Image
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಮತ್ತೊಂದು ಬಲಿ
Image
ಚಿಕ್ಕಮಗಳೂರಲ್ಲಿ ಮಂಗನ ಕಾಯಿಲೆಗೆ ಕಾರ್ಮಿಕ ಮಹಿಳೆ ಬಲಿ

ಆರೋಗ್ಯ ಅಧಿಕಾರಿಗಳ ಪ್ರಕಾರ ರಚಿತ್ ಅವರ ಸಹೋದರಿ ರಮ್ಯಾಗೆ ಏಪ್ರಿಲ್ 4 ರಂದು ಜ್ವರ ಬಂದಿತ್ತು. ಆಕೆಯನ್ನು ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ದಾಖಲಿಸಿ ಪರೀಕ್ಷೆ ಮಾಡಿದ ಕೆಎಫ್‌ಡಿ ಪಾಸಿಟಿವ್ ದೃಢಪಟ್ಟಿತ್ತು. ಏಪ್ರಿಲ್ 5 ರಂದು, ರಚಿತ್​ಗೆ ಆಯಾಸ ಮತ್ತು ವಾಂತಿ ಹಿನ್ನಲೆ ಅದೇ ಆಸ್ಪತ್ರೆಗೆ ದಾಖಲಿಸಲಾಯಿದೆ. ಆತನಿಗೆ ಕೆಎಫ್​ಡಿ ಪಾಸಿಟಿವ್ ಬಂದಿದೆ. ರಚಿತ್​ನನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.

ಮಂಗನಕಾಯಿಲೆ ಹತೋಟಿಗೆ ತರುವಲ್ಲಿ  ಉತ್ತರ ಕನ್ನಡ ಜಿಲ್ಲಾಡಳಿತ ಯಶಸ್ಸು

ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ಮಂಗನ ಕಾಯಿಲೆ ವಿಚಾರದಲ್ಲಿ ಭಾರಿ ನಿರಾಳತೆ ಕಂಡು ಕೊಂಡಿತ್ತು. ಕಳೆದ ವರ್ಷಕ್ಕೆ ಹೊಲಿಕೆ ಮಾಡಿದರೆ ಈ ವರ್ಷ ಬೆರಳಣಿಕೆಯಷ್ಟು ಪ್ರಕರಣ ದಾಖಲಾಗಿದ್ದವು. ಜಿಲ್ಲೆಯ ಜನ ಸದ್ಯ ನಿಟ್ಟುಸಿರು ಬಿಟ್ಟಿದ್ದಾರೆ.

ರಾಜ್ಯದ ಅತಿದೊಡ್ಡ ಭೌಗೋಳಿಕ ಜಿಲ್ಲೆ ಆಗಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ಶೆಕಡಾ 72 ಪ್ರತಿಶತಕ್ಕಿಂತ ಹೆಚ್ಚು ಕಾಡು ಪ್ರದೇಶ ಹೊಂದಿರುವ ಜಿಲ್ಲೆ ಆಗಿದೆ. ಈ ಜಿಲ್ಲೆಯಲ್ಲಿ ರಾಜ್ಯದ ಜನಸಂಖ್ಯೆಯ ಕೇವಲ 3 ಪ್ರತಿಶತ ಮಾತ್ರ ಜನ ಇಲ್ಲಿ ವಾಸಿಸುತ್ತಾರೆ. ಇಂತಹ ಸಮೃದ್ಧವಾದ ಜಿಲ್ಲೆಗೆ ಬಿಟ್ಟು ಬಿಡದೆ ಕಾಡಿದ್ದ ಮಂಗನಕಾಯಿಲೆ ಈ ವರ್ಷ ಹತೋಟಿಗೆ ತರುವಲ್ಲಿ ಆರೋಗ್ಯ ಇಲಾಖೆ ಹಾಗೂ ಜಿಲ್ಲಾಡಳಿತ ಯಶಸ್ಸು ಕಂಡಿದೆ.

ಇದನ್ನೂ ಓದಿ: ಚಿಕ್ಕಮಗಳೂರು: ಮತ್ತೆ ಕಾಣಿಸಿಕೊಂಡ ಮಂಗನ ಕಾಯಿಲೆ, ಆರೋಗ್ಯ ಇಲಾಖೆ ಅಲರ್ಟ್​ ಘೋಷಣೆ

ಏಕೆಂದರೆ ಕಳೆದ ವರ್ಷದ ಮಾರ್ಚ್ ಅಂತ್ಯದವರೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ 82 ಕೇಸ್ ಪತ್ತೆ ಆಗಿತ್ತು. ಆದರೆ ಈ ವರ್ಷದ ಮಾರ್ಚ್ ಅಂತ್ಯದವರೆಗೆ ಕೇವಲ ಮೂರು ಪ್ರಕರಣ ಪತ್ತೆ ಆಗಿದ್ದು, ಎಲ್ಲರೂ ಔಟ್ ಆಫ್ ಡೆಂಜರ್ ಎಂದು ಜಿಲ್ಲಾ ವೈದ್ಯಾಧಿಕಾರಿ ನೀರಜ್ ತಿಳಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾಂಗಲ್ಯ ಭಾಗ್ಯದ ಅರ್ಥವೇನು, ಸ್ತ್ರೀಯರಿಗೆ ಇದು ಶ್ರೀರಕ್ಷೆ ಹೇಗೆ?
ಮಾಂಗಲ್ಯ ಭಾಗ್ಯದ ಅರ್ಥವೇನು, ಸ್ತ್ರೀಯರಿಗೆ ಇದು ಶ್ರೀರಕ್ಷೆ ಹೇಗೆ?
ಈ ರಾಶಿಯವರು ಇಂದು ಸ್ವಂತ ಉದ್ಯೋಗದಲ್ಲಿ ಅಧಿಕ ಲಾಭ ಪಡೆಯುವರು
ಈ ರಾಶಿಯವರು ಇಂದು ಸ್ವಂತ ಉದ್ಯೋಗದಲ್ಲಿ ಅಧಿಕ ಲಾಭ ಪಡೆಯುವರು
ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: ನಟಿ ರಮ್ಯಾ
ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: ನಟಿ ರಮ್ಯಾ
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ