ಶಿವಮೊಗ್ಗ, ಜ.29: ಮೂತ್ರವಿಸರ್ಜನೆಗೆ ಹೋದ ವ್ಯಕ್ತಿಯ ಮೇಲೆ ಸಿಮೆಂಟ್ ಸ್ಲ್ಯಾಬ್ ಬಿದ್ದು ಸಾವನ್ನಪ್ಪಿದ ಘಟನೆ ಶಿವಮೊಗ್ಗ(Shivamogga)ದ ವಿನೋಬನಗರದ 3ನೇ ಕ್ರಾಸ್ ರೇಲ್ವೆ ಟ್ರ್ಯಾಕ್ ಬಳಿ ನಡೆದಿದೆ. ಮುತ್ತಪ್ಪ(42) ಮೃತ ವ್ಯಕ್ತಿ. ಸ್ಥಳಕ್ಕೆ ವಿನೋಬನಗರ ಠಾಣಾಧಿಕಾರಿ ಚಂದ್ರಕಲಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಇತ್ತ ಮೃತನ ಕುಟುಂಬಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ‘ಅಪೂರ್ಣ ಮತ್ತು ಕಳಪೆ ಕಾಮಗಾರಿಯಿಂದ ದುರ್ಘಟನೆ ನಡೆದಿದೆ ಎಂದಿದ್ದಾರೆ.
ಇನ್ನು ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಶಾಸಕ ಚನ್ನಬಸಪ್ಪ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ವೈಯಕ್ತಿಕವಾಗಿ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದರು. ಬಳಿಕ ಮಾತನಾಡಿದ ಅವರು ‘ಶಿವಮೊಗ್ಗ ಪಾಲಿಕೆಯ ಆಯುಕ್ತ ರು ಮತ್ತು ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಘಟನೆ ಕುರಿತು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಉತ್ತರ ಕನ್ನಡ: ಜಿಲ್ಲೆಯ ಕುಮಟಾ ತಾಲೂಕಿನ ಮೊಡಂಗಿ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಮೋಹನ್ ಮಾಣೇಶ್ವರ್ ಎಂಬುವರಿಗೆ ಸೇರಿದ ಮನೆ ಸಂಪೂರ್ಣ ಭಸ್ಮವಾದ ಘಟನೆ ನಡೆದಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಇನ್ನು ಐದು ಲಕ್ಷಕ್ಕೂ ಹೆಚ್ಚು ಹಾನಿ ಆಗಿರುವ ಮಾಹಿತಿ ನೀಡಿದ್ದು, ಶಾರ್ಟ್ ಸರ್ಕ್ಯೂಟ್ನಿಂದ ಆಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ಕುರಿತು ಗೋಕರ್ಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ದಕ್ಷಿಣ ಕನ್ನಡ: ವೇಣೂರಿನಲ್ಲಿ ಪಟಾಕಿ ಗೋದಾಮಿನಲ್ಲಿ ಸ್ಫೋಟ: ಮೂವರು ಕಾರ್ಮಿಕರು ಸಾವು, ಇಬ್ಬರು ವಶಕ್ಕೆ
ಕೊಡಗು: ಮಡಿಕೇರಿ ತಾಲೂಕಿನ ಸುಂಟಿಕೊಪ್ಪದಲ್ಲಿ ಹೊಗೆ ತಪಾಸಣಾ ಕೇಂದ್ರ, ಪೆಟ್ರೋಲ್ ಬಂಕ್, ಹಾಲಿನ ಡೇರಿ, ಬಟ್ಟೆ ಅಂಗಡಿ ಹಾಗೂ ಮನೆ ಸೇರಿದಂತೆ ಸರಣಿ ಕಳ್ಳತನವಾಗಿದೆ. ಬಟ್ಟೆ ಅಂಗಡಿಯಲ್ಲಿದ್ದ ಒಂದು ಲಕ್ಷ ನಗದು ಕಳ್ಳತನವಾಗಿದೆ. ಜೊತೆಗೆ ಬಟ್ಟೆ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:09 pm, Mon, 29 January 24