ಶಿವಮೊಗ್ಗ: ಪಾರ್ಕ್​ನಲ್ಲಿದ್ದ ಜಿಂಕೆ ಪ್ರತಿಮೆ ಉರುಳಿ ಬಿದ್ದು ಮಗು ಸಾವು

ತಾಲೂಕಿನ ಮುದ್ದಿನಕೊಪ್ಪದ ಟ್ರೀ ಪಾರ್ಕ್​ನಲ್ಲಿ ಜಿಂಕೆ ಪ್ರತಿಮೆ ಉರುಳಿಬಿದ್ದು 6 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ನಡೆದಿದೆ. ಶಿವಮೊಗ್ಗ(Shivamogga) ನಗರದ ಹರೀಶ್, ಲಕ್ಷ್ಮೀ ದಂಪತಿ‌ ಪುತ್ರಿ ಸಮೀಕ್ಷಾ ಮೃತ ರ್ದುದೈವಿ.

ಶಿವಮೊಗ್ಗ: ಪಾರ್ಕ್​ನಲ್ಲಿದ್ದ ಜಿಂಕೆ ಪ್ರತಿಮೆ ಉರುಳಿ ಬಿದ್ದು ಮಗು ಸಾವು
ಸಾಂದರ್ಭಿಕ ಚಿತ್ರ
Follow us
Basavaraj Yaraganavi
| Updated By: ಕಿರಣ್ ಹನುಮಂತ್​ ಮಾದಾರ್

Updated on:Jan 28, 2024 | 10:34 PM

ಶಿವಮೊಗ್ಗ, ಜ.28: ತಾಲೂಕಿನ ಮುದ್ದಿನಕೊಪ್ಪದ ಟ್ರೀ ಪಾರ್ಕ್​ನಲ್ಲಿ ಜಿಂಕೆ ಪ್ರತಿಮೆ ಉರುಳಿಬಿದ್ದು 6 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ನಡೆದಿದೆ. ಶಿವಮೊಗ್ಗ(Shivamogga) ನಗರದ ಹರೀಶ್, ಲಕ್ಷ್ಮೀ ದಂಪತಿ‌ ಪುತ್ರಿ ಸಮೀಕ್ಷಾ ಮೃತ ರ್ದುದೈವಿ. ಭಾನುವಾರ ಹಿನ್ನೆಲೆ ಕುಟುಂಬಸ್ಥರು ಮಕ್ಕಳೊಂದಿಗೆ ಟ್ರೀ ಪಾರ್ಕ್​ಗೆ ತೆರಳಿದ್ದರು. ಈ ವೇಳೆ ಆಟವಾಡುತ್ತಿದ್ದಾಗ ಏಕಾಏಕಿ ಜಿಂಕೆ ಪ್ರತಿಮೆ ಉರುಳಿಬಿದ್ದು ಬಾಲಕಿ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಸಿಮೆಂಟ್​ ಮಿಕ್ಸರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ದುರ್ಮರಣ

ಬೆಂಗಳೂರು: ಸಿಮೆಂಟ್​ ಮಿಕ್ಸರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ನೈಸ್ ರಸ್ತೆಯಲ್ಲಿ ನಡೆದಿದೆ. ಜೆ.ಪಿ.ನಗರದ ನಿವಾಸಿ ಸಾಯಿಮೆನನ್(30) ಮೃತ ಬೈಕ್ ಸವಾರ. ಇನ್ನು ಅಪಘಾತ ಬಳಿಕ ಸ್ಥಳದಲ್ಲೇ ಲಾರಿ ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ. ಡಿಯೋ ಕಂಪನಿಯಲ್ಲಿ ಸೌಂಡ್ ಇಂಜಿನಿಯರ್ ಆಗಿದ್ದ ಸಾಯಿಮೆನನ್ ರಜೆ ಹಿನ್ನೆಲೆ ಬೈಕ್​ನಲ್ಲಿ ಉಡುಪಿ ಪ್ರವಾಸಕ್ಕೆ ತೆರಳಿದ್ದ ಸಾಯಿಮೆನನ್, ಇಂದು ಬೆಂಗಳೂರಿಗೆ ಹಿಂದಿರುಗುವಾಗ ನೈಸ್ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ.  ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್​ನಲ್ಲಿಯೇ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ, ಸ್ವಲ್ಪ ಹೊತ್ತಲ್ಲೇ ಸಾವು

ಚಿನ್ನಿಕಟ್ಟೆ ಗ್ರಾಮದ ಬಳಿ ಟೆಂಪೋ ಪಲ್ಟಿಯಾಗಿ ಓರ್ವ ಮಹಿಳೆ ಸಾವು

ದಾವಣಗೆರೆ: ಜಿಲ್ಲೆಯ ನ್ಯಾಮತಿ ತಾಲೂಕಿನ ಚಿನ್ನಿಕಟ್ಟೆ ಗ್ರಾಮದ ಬಳಿ ಸೀಮಂತಕ್ಕೆ ಹೋಗುತ್ತಿದ್ದ ಟೆಂಪೋ ಪಲ್ಟಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿದರೆ, 19 ಜನರಿಗೆ ಗಂಭೀರ ಗಾಯವಾಗಿದೆ. ಕೂಡಲೇ ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಿವಮೊಗ್ಗದಿಂದ ಕೊಡಮಗ್ಗಿಗೆ ಸೀಮಂತ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:29 pm, Sun, 28 January 24

ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ