ಶಿವಮೊಗ್ಗ: ಚಲಿಸುತ್ತಿದ್ದ ರೈಲಿನಿಂದ ಹಾರಿ ಯುವಕ ಆತ್ಮಹತ್ಯೆ
ಬೆಂಗಳೂರು-ಶಿವಮೊಗ್ಗ ಮಾರ್ಗವಾಗಿ ಚಲಿಸುತ್ತಿದ್ದ ರೈಲಿನಿಂದ ನದಿಗೆ ಹಾರಿ ಯುವಕನೊಬ್ಬನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನೇನು ನಿಲ್ದಾಣದ ಹತ್ತಿರ ರೈಲು ಬರುತ್ತಿದ್ದಂತೆ ಯುವಕನು ತುಂಗಾ ನದಿಗೆ ಹಾರಿ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಕೋಟೆ ಠಾಣೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಶಿವಮೊಗ್ಗ, ಏ.13: ಚಲಿಸುತ್ತಿದ್ದ ರೈಲಿನಿಂದ(train) ತುಂಗಾ ನದಿಗೆ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಸಾವಿಗೆ ಕಾರಣ ತಿಳಿದುಬಂದಿಲ್ಲ. ಮೃತವ್ಯಕ್ತಿಗೆ ಅಂದಾಜು 35 ವರ್ಷವಾಗಿರಬಹುದೆಂದು ಅಂದಾಜಿಸಲಾಗಿದೆ. ಈತ ಕೆಳಕ್ಕೆ ಬಿದ್ದಿದ್ದು ಹೇಗೆ ಎಂಬುದು ಗೊತ್ತಾಗಿಲ್ಲ. ಬಿದ್ದ ಬೆನ್ನಲ್ಲೆ ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇನ್ನು ಈ ವಿಚಾರ ತಿಳಿಯುತ್ತಲೇ, ಸ್ಥಳಕ್ಕೆ ಕೋಟೆ ಠಾಣೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಸದ್ಯದ ಮಟ್ಟಿಗೆ ಮೃತರು ಯಾರು ಎಂಬ ಗುರುತು ಪತ್ತೆಯಾಗಿಲ್ಲ.
ಬೆಳಗ್ಗೆ ಸುಮಾರು 10-30ರ ಆಸುಪಾಸಿನಲ್ಲಿ ಈ ಘಟನೆ ನಡೆದಿದ್ದು, ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ರೈಲಿನಿಂದ ಏಕಾಏಕಿ ಯುವಕನೊಬ್ಬನು ತುಂಗಾ ನದಿಗೆ ಹಾರಿದ್ದಾನೆ. ಇದನ್ನು ನೋಡಿದ ಪ್ರಯಾಣಿಕರು ರೈಲ್ವೇ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಯುವಕನು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ತುಂಗಾ ನಗರ ಪೊಲೀಸ್ ಎಂಟ್ರಿಕೊಟ್ಟಿದ್ದರು. ಸ್ಥಳೀಯರ ಸಹಾಯದಿಂದ ಯುವಕನ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ. ನದಿಯಲ್ಲಿ ನೀರು ಬತ್ತಿ ಹೋಗಿದ್ದು, ಎತ್ತರದಿಂದ ನದಿಗೆ ಹಾರಿದ ಬಳಿಕ ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ಇದರ ಪರಿಣಾಮ ವ್ಯಕ್ತಿಯು ಸ್ಥಳದಲ್ಲೆ ಮೃತಪಟ್ಟಿದ್ದಾನೆ.
ಇದನ್ನೂ ಓದಿ:ಉಡುಪಿ: ಸ್ವಿಮ್ಮಿಂಗ್ ಪೂಲ್‌ನಲ್ಲಿ ಮುಳುಗಿ ಬಾಲಕ ಸಾವು; ಕೊನೆ ಕ್ಷಣದ ವೀಡಿಯೋ ಸೆರೆ
ಅಷ್ಟಕ್ಕೂ ಆತ್ಮಹತ್ಯೆ ಮಾಡಿಕೊಂಡಿರುವ ಯುವಕನು ಯಾರು?, ಎಲ್ಲಿಗೆ ಹೋಗುತ್ತಿದ್ದನು. ಆತ್ಮಹತ್ಯೆಗೆ ಕಾರಣವೇನು ಎನ್ನುವ ಮಾಹಿತಿಗಳು ಪೊಲೀಸರಿಗೆ ಸಿಕ್ಕಿಲ್ಲ. ಸದ್ಯ ಮೃತದೇಹವನ್ನು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಮೃತವ್ಯಕ್ತಿ ಯಾರು ಎನ್ನುವುದನ್ನು ಪೊಲೀಸರು ಮೊದಲು ಪತ್ತೆ ಮಾಡಬೇಕಿದೆ. ಸದ್ಯ ತುಂಗಾ ನಗರ ಪೊಲೀಸರು ಆತ್ಮಹತ್ಯೆಯ ಹಿಂದಿನ ರಹಸ್ಯ ಬೇಧಿಸಲು ತನಿಖೆ ಚುರುಕುಗೊಳಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ