ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನಕಾಯಿಲೆಗೆ 18 ವರ್ಷದ ಯುವತಿ ಸಾವು

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಳಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ‌ ಬೊಪ್ಪನಮನೆ ಗ್ರಾಮದಲ್ಲಿ ಮಂಗನ ಕಾಯಿಲೆಯಿಂದ 18 ವರ್ಷದ ಯುವತಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಆ ಮೂಲಕ ಇದು ಮಂಗನ ಕಾಯಿಲೆಗೆ ಈ ವರ್ಷ ಮೃತಪಟ್ಟ ಮೊದಲ ಪ್ರಕರಣವಾಗಿದೆ. ಈ ಮಂಗನ ಕಾಯಿಲೆಯನ್ನು ಕ್ಯಾಸನೂರು ಫಾರೆಸ್ಟ್​ ಕಾಯಿಲೆ ಎಂದು ಕೂಡ ಕರೆಯುತ್ತಾರೆ. 

ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನಕಾಯಿಲೆಗೆ 18 ವರ್ಷದ ಯುವತಿ ಸಾವು
ಪ್ರಾತಿನಿಧಿಕ ಚಿತ್ರ
Follow us
Basavaraj Yaraganavi
| Updated By: ಗಂಗಾಧರ​ ಬ. ಸಾಬೋಜಿ

Updated on: Jan 08, 2024 | 3:53 PM

ಶಿವಮೊಗ್ಗ, ಜನವರಿ 08: ಮಂಗನ ಕಾಯಿಲೆ (monkey disease) ಯಿಂದ 18 ವರ್ಷದ ಯುವತಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಅರಳಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ‌ ಬೊಪ್ಪನಮನೆ ಗ್ರಾಮದಲ್ಲಿ ನಡೆದಿದೆ. ಆ ಮೂಲಕ ಇದು ಮಂಗನ ಕಾಯಿಲೆಗೆ ಈ ವರ್ಷ ಮೃತಪಟ್ಟ ಮೊದಲ ಪ್ರಕರಣವಾಗಿದೆ. ಬೊಪ್ಪನೆಮನೆ ಗ್ರಾಮದ ನಿವಾಸಿ ಅನನ್ಯ ಮೃತ ಯುವತಿ. ಚಳಿ ಜ್ವರದಿಂದ ಬಳಲುತ್ತಿದ್ದ ಯುವತಿಯನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಮೂರು ದಿನ ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಕೆಎಂಸಿ ಆಸ್ಪತ್ರೆಗೆ ಪೋಷಕರು ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಇಂದು ಮುಂಜಾನೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

ಈ ಮಂಗನ ಕಾಯಿಲೆಯನ್ನು ಕ್ಯಾಸನೂರು ಫಾರೆಸ್ಟ್​ ಕಾಯಿಲೆ ಎಂದು ಕೂಡ ಕರೆಯುತ್ತಾರೆ.

ಟಿವಿ 9ಗೆ ಶಿವಮೊಗ್ಗ ಡಿಎಓ ರಾಜೇಶ್ ಸುರಗಿಹಳ್ಳಿ ಪ್ರತಿಕ್ರಿಯೆ ನೀಡಿದ್ದು, ಕೆಎಫ್​ಡಿ ಪಾಸಿಟಿವ್ ಬಂದಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಡಿ. 27 ಕ್ಕೆ ಜ್ವರದಿಂದ ಯುವತಿ ಬಳಲುತ್ತಿದ್ದಳು. ಮೊದಲು ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇಂದು ಯುವತಿಯು ಮೃತ ಪಟ್ಟಿರುವ ಮಾಹಿತಿ ಸಿಕ್ಕಿದೆ ಎಂದಿದ್ದಾರೆ.

ಇದನ್ನೂ ಓದಿ: Chitradurga News: 13 ದಿನದ ನವಜಾತ ಶಿಶುವಿನ ಮೇಲೆ ಕೋತಿ ದಾಳಿ; ಜಿಲ್ಲಾಸ್ಪತ್ರೆಗೆ ದಾಖಲು

ತೀವ್ರ ಮೆದಳು ಜ್ವರ ಮತ್ತು ರಕ್ತ ಹೀನತೆಯಿಂದ ಯುವತಿ ಬಳಲುತ್ತಿದ್ದಳು. ಇದೊಂದು ಕೆಎಫ್​ಡಿಯಿಂದ ಮೃತ ಪಟ್ಟಿರುವುದು ವರದಿಯಿಂದ ಖಚಿತ ಆಗಬೇಕಿದೆ. ಈಗಾಗಲೇ ಎಲ್ಲ ರೀತಿಯಿಂದ ಆರೋಗ್ಯ ಇಲಾಖೆ ಮುಂಜಾಗೃತೆ ವಹಿಸಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮನೆಯ ಸದಸ್ಯನಾದ ಕೋತಿ: ಪ್ರತಿನಿತ್ಯ ಮನೆಯ ಮಕ್ಕಳ, ಯಜಮಾನನ ಜೊತೆ ಆಟ

ಗ್ರಾಮದಲ್ಲಿ ಕೆಎಫ್​ಡಿ ಕುರಿತು ಎಲ್ಲ ಮುಂಜಾಗೃತೆ ವಹಿಸಲಾಗಿದೆ. ಜ್ವರ ಕಂಡು ಬಂದ ತಕ್ಷಣ ಅವರಿಗೆ ಪರೀಕ್ಷೆ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಇಲ್ಲಿಯ ವರೆಗೆ 2911 ಕೆಎಫ್​ಡಿ ಪರೀಕ್ಷೆ ಮಾಡಲಾಗಿದೆ. ಅದರಲ್ಲಿ ಕೇವಲ ಎರಡು ಮಾತ್ರ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಅದರಲ್ಲಿ ಒಬ್ಬರು ಮೃತಪಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್