Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗದ ನೂತನ ಏರ್​ಪೋರ್ಟ್​ಗೆ ಮತ್ತೊಂದು ಫ್ಲೈಟ್ ಆಗಮನ: ವಾಯುಪಡೆ ವಿಮಾನದಲ್ಲಿ ಆಗಮಿಸಿದ ಪ್ರಧಾನ ಮಂತ್ರಿಗಳ SPG ತಂಡ

ಶಿವಮೊಗ್ಗ ನೂತನ ವಿಮಾನ‌ ನಿಲ್ದಾಣಕ್ಕೆ ಮತ್ತೊಂದು ವಿಮಾನ ಬಂದಿಳಿದೆ. ಈ ವಿಮಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಭದ್ರತಾ ಪಡೆಯ ಮೊದಲ ತಂಡ ಶಿವಮೊಗ್ಗಕ್ಕೆ ಆಗಮಿಸಿದೆ.

Follow us
ಗಂಗಾಧರ​ ಬ. ಸಾಬೋಜಿ
|

Updated on:Feb 23, 2023 | 4:17 PM

ಶಿವಮೊಗ್ಗ: ಜಿಲ್ಲೆಯ ನೂತನ ವಿಮಾನ‌ ನಿಲ್ದಾಣಕ್ಕೆ (Shivamogga Airport) ಮತ್ತೊಂದು ವಿಮಾನ ಬಂದಿಳಿದೆ. ಈ ವಿಮಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಭದ್ರತಾ ಪಡೆಯ ಮೊದಲ ತಂಡ ಶಿವಮೊಗ್ಗಕ್ಕೆ ಆಗಮಿಸಿದೆ. ವಾಯು ಪಡೆ ವಿಮಾನದಲ್ಲಿ ಸ್ಪೆಷಲ್ ಪ್ರೊಟೆಕ್ಷನ್ ಗ್ರೂಪ್ (SPG) ತಂಡ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಭಾರತೀಯ ವಾಯು ಸೇನೆಯ ಕ್ಯಾರಿಯರ್ ವಿಮಾನದಲ್ಲಿ ದೆಹಲಿಯಿಂದ ಭದ್ರತಾ ಪಡೆಗಳ ತಂಡ ಆಗಮಿಸಿದ್ದು, ವಿಮಾನದಲ್ಲಿ ನಾಲ್ಕು ಕಾರುಗಳ ಸಹಿತ ಹಲವು ಸಿಬ್ಬಂದಿ ಆಗಮಿಸಿದ್ದಾರೆ. ವಾಯುಸೇನೆಯ ಇಲ್ಯೂಷಿನ್ 76 ವಿಮಾನದಿಂದ ನಾಲ್ಕು ಕಾರುಗಳನ್ನು ಕೆಳಗಿಳಿಸಿ ಎಸ್​ಪಿಜಿ ತಂಡದ ಪರಿಶೀಲನೆ ಮಾಡಲಾಯಿತು. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ SPG ತಂಡ ಜಿಲ್ಲಾಧಿಕಾರಿ ಸೇರಿ ಪ್ರಮುಖ ಅಧಿಕಾರಿಗಳ ಭೇಟಿ ಮಾಡಿದೆ. ಬಳಿಕ ವಿಮಾನ ನಿಲ್ದಾಣದ ಟರ್ಮಿನಲ್ ಪರಿಶೀಲಿಸಿ, ಅಲ್ಲಿಂದ ನೇರವಾಗಿ ತಮ್ಮ ವಾಹನಗಳ ಮೂಲಕವೇ ಶಿವಮೊಗ್ಗ ನಗರಕ್ಕೆ SPG ತಂಡ ತೆರಳಿದೆ.

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬರುವ ಮೊದಲ ವಿಮಾನ ಪ್ರಧಾನಿ ಮೋದಿಯವರದ್ದು

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಿಂದ ಶಿವಮೊಗ್ಗಕ್ಕೆ ವಿಶೇಷ ವಿಮಾನದ ಮೂಲಕ ಬಂದಿಳಿಯಲಿದ್ದಾರೆ. ಈ ಮೂಲಕ ಪ್ರಧಾನಿಗಳ ವಿಶೇಷ ವಿಮಾನವೇ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬರುವ ಮೊಟ್ಟ ಮೊದಲ ವಿಮಾನವಾಗಲಿದೆ ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದ್ದಾರೆ.  ಇತ್ತೀಚೆಗೆ ಮಾಧ್ಯಮ ಗೋಷ್ಠಿ ನಡೆಸಿ ಮಾತನಾಡಿ, ಪ್ರಧಾನಿಗಳ ವಿಮಾನವೇ ಮೊದಲ ವಿಮಾನ, ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್​ ಆಗಲಿದೆ. ಇದು ನಮಗೆ ಬಹಳ ಸಂಸತಸ ತಂದಿದೆ. ಇದೇ ವೇಳೆ ಪ್ರಧಾನಿ ಮೋದಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಮತ್ತು ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ ವಿಮಾನ ನಿಲ್ದಾಣ ನಾಮಕರಣ ಗೊಂದಲಕ್ಕೆ ತೆರೆ; ರಾಷ್ಟಕವಿ ಕವಿ ಕುವೆಂಪು ಹೆಸರಿಡುವ ಬಗ್ಗೆ ಕೇಂದ್ರಕ್ಕೆ ಖುದ್ದು ಸಿಎಂ ಶಿಫಾರಸು

ಅವರ ಕಾರ್ಯಕ್ರಮ ವೇಳಾಪಟ್ಟಿ ಪ್ರಕಾರ, ಪ್ರಧಾನಿ ಮೋದಿ ಅವರು ಮಧ್ಯಾಹ್ನ 12:30ಕ್ಕೆ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಸಭೆಗೆ 2ಲಕ್ಷ ಜನರು ಸೇರುವ ಸಾಧ್ಯತೆ ಇದೆ. ಅಂದಿನ ಕಾರ್ಯಮದ ತಯಾರಿ ಈಗಾಗಲೇ ಪ್ರಾರಂಭವಾಗಿದೆ ಎಂದು ತಿಳಿಸಿದರು. ವಿಮಾನ ನಿಲ್ದಾಣ ಉದ್ಘಾಟನೆಯಾದ 15 ಅಥವಾ 1 ತಿಂಗಳ ನಂತರ ತನ್ನ ಕಾರ್ಯಾರಂಭ ಮಾಡಲಿದೆ. ಮತ್ತು ಆದ್ಯತೆ ಪ್ರಕಾರ ವಿಮಾನ ನಿಲ್ದಾಣದಿಂದ ಕಾರ್ಯನಿರ್ವಹಿಸುವ ವಿಮಾನಗಳ ಪಟ್ಟಿ ಸಿದ್ದವಾಗಿದೆ ಎಂದು ರಾಘವೇಂದ್ರ ತಿಳಿಸಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 600 ಕೋಟಿ ರೂ ಖರ್ಚು

ಒಟ್ಟು ವಿಮಾನ ನಿಲ್ದಾಣಕ್ಕೆ 600 ಕೋಟಿ ರೂ. ವ್ಯಯಿಸಲಾಗಿದೆ. ಇದರಲ್ಲಿ ಕಟ್ಟಡ ಕಾಮಗಾರಿಗೆ 449 ಕೋಟಿ ರೂ. ಖರ್ಚು ಮಾಡಲಾಗಿದೆ. ಇನ್ನು ಉಳಿದ ಹಣದಲ್ಲಿ ಭೂ ಖರೀದಿಗೆ ನೀಡಲಾಗಿದೆ. ಭೂಮಿಯನ್ನು ಕಳೆದುಕೊಂಡವರಿಗೆ ಕರ್ನಾಟಕ ಗೃಹ ಮಂಡಳಿ ನಿವೇಶನ ನೀಡಲಿದೆ. ಈಗಾಗಲೇ 320 ಕುಟುಂಬಗಳಿಗೆ ನೀಡಲು ನಿವೇಶನಗಳು ಸಿದ್ದವಾಗಿವೆ ಎಂದರು.

ಇದನ್ನೂ ಓದಿ: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರಿಡದಂತೆ ಸಿಎಂ ಬೊಮ್ಮಾಯಿಗೆ ಮಾಜಿ ಸಿಎಂ ಯಡಿಯೂರಪ್ಪ ಮನವಿ

ಹಾಗೇ ವಿಮಾನ ನಿಲ್ದಾಣದ ಪಕ್ಕದಲ್ಲಿ ಪ್ರಧಾನಿ ಮೋದಿ ಅವರು ಹೈವೆ, ಸ್ಮಾರ್ಟ್​ ಸಿಟಿ, ರೇಲ್ವೆ ಕಾಮಗಾರಿಗಳನ್ನು ಮತ್ತು ಹಲವು ಗ್ರಾಮಗಳಿಗೆ ನೀರಿನ ಸೌಲಭ್ಯ, ಜನ್​ ಜೀವನ್​ ಮಿಷನ್​ನ್ನು ಉದ್ಘಾಟಿಸಲಿದ್ದಾರೆ. ಮತ್ತು ಹಲವು ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:16 pm, Thu, 23 February 23

ಆಡಳಿತ ಮತ್ತು ವಿರೋಧ ಪಕ್ಷದ ನಾಯಕರಿಗೆ ಕೇವಲ ಅಧಿಕಾರದ ತೆವಲು: ಗೋವಿಂದು
ಆಡಳಿತ ಮತ್ತು ವಿರೋಧ ಪಕ್ಷದ ನಾಯಕರಿಗೆ ಕೇವಲ ಅಧಿಕಾರದ ತೆವಲು: ಗೋವಿಂದು
Live: ಆರ್​ಎಸ್​ಎಸ್ ಅಖಿಲ ಭಾರತೀಯ ಪ್ರತಿನಿಧಿ ಸಭಾ ಪತ್ರಿಕಾಗೋಷ್ಠಿ ಲೈವ್
Live: ಆರ್​ಎಸ್​ಎಸ್ ಅಖಿಲ ಭಾರತೀಯ ಪ್ರತಿನಿಧಿ ಸಭಾ ಪತ್ರಿಕಾಗೋಷ್ಠಿ ಲೈವ್
ಪರೀಕ್ಷೆ ಇಲ್ಲದಿರುವುದನ್ನು ಸಚಿವರಿಂದ ಖಚಿತಪಡಿಸಿಕೊಂಡಿದ್ದೆವು: ವಾಟಾಳ್
ಪರೀಕ್ಷೆ ಇಲ್ಲದಿರುವುದನ್ನು ಸಚಿವರಿಂದ ಖಚಿತಪಡಿಸಿಕೊಂಡಿದ್ದೆವು: ವಾಟಾಳ್
ಹನಿ ಟ್ರ್ಯಾಪ್ ಆರೋಪ ವಿಷಯದಲ್ಲಿ ಸಿಎಂ, ಹೆಚ್​ಎಂ ಪ್ರತಿಕ್ರಿಯೆ ನೀಡಿಲ್ಲ
ಹನಿ ಟ್ರ್ಯಾಪ್ ಆರೋಪ ವಿಷಯದಲ್ಲಿ ಸಿಎಂ, ಹೆಚ್​ಎಂ ಪ್ರತಿಕ್ರಿಯೆ ನೀಡಿಲ್ಲ
VIDEO: ಹಾರುವ ಹಾರಿಸ್... ಅದ್ಭುತ ಕ್ಯಾಚ್ ಹಿಡಿದ ರೌಫ್
VIDEO: ಹಾರುವ ಹಾರಿಸ್... ಅದ್ಭುತ ಕ್ಯಾಚ್ ಹಿಡಿದ ರೌಫ್
ಬೆಂಗಳೂರಲ್ಲಿ ಕರ್ನಾಟಕ ಬಂದ್​ಗೆ ಮಿಶ್ರ ಪ್ರತಿಕ್ರಿಯೆ
ಬೆಂಗಳೂರಲ್ಲಿ ಕರ್ನಾಟಕ ಬಂದ್​ಗೆ ಮಿಶ್ರ ಪ್ರತಿಕ್ರಿಯೆ
ಪ್ರತಿಭಟನೆಗೆ ಬಂದ್ ಬಿಟ್ಟು ಪರ್ಯಾಯ ದಾರಿ ಹುಡುಕಬೇಕು: ಆಟೋರಿಕ್ಷಾ ಚಾಲಕರು
ಪ್ರತಿಭಟನೆಗೆ ಬಂದ್ ಬಿಟ್ಟು ಪರ್ಯಾಯ ದಾರಿ ಹುಡುಕಬೇಕು: ಆಟೋರಿಕ್ಷಾ ಚಾಲಕರು
ಕಮೆಂಟೇಟರ್ ಜಾನಿ ನಿಜವಾದ ಹೆಸರೇನು? ಈ ಹೆಸರು ಬಂದಿದ್ದು ಹೇಗೆ?
ಕಮೆಂಟೇಟರ್ ಜಾನಿ ನಿಜವಾದ ಹೆಸರೇನು? ಈ ಹೆಸರು ಬಂದಿದ್ದು ಹೇಗೆ?
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ