ಮೂಕ ಪ್ರಾಣಿ ಮೇಲೆ ಇದೆಂಥಾ ಕ್ರೌರ್ಯ: ನಾಯಿಯನ್ನ ಕೊಂದು ಆಟೋಗೆ ಕಟ್ಟಿ ಎಳೆದೊಯ್ದ ವ್ಯಕ್ತಿ

ಶಿವಮೊಗ್ಗದ ಕೆಂಚನಾಲದಲ್ಲಿ ಬೀದಿ ನಾಯಿಯನ್ನು ಕ್ರೂರವಾಗಿ ಕೊಂದು ಆಟೋದಲ್ಲಿ ಎಳೆದುಕೊಂಡು ಹೋಗಿದ್ದ ಆಟೋ ಚಾಲಕನನ್ನು ಬಂಧಿಸಲಾಗಿದೆ. ಮೇನಕಾ ಗಾಂಧಿ ಅವರು ಈ ಘಟನೆಯಲ್ಲಿ ಮಧ್ಯಪ್ರವೇಶಿಸಿದ್ದು, ಪ್ರಾಣಿ ದಯಾ ಸಂಘದ ಮೂಲಕ ದೂರು ದಾಖಲಿಸಲಾಗಿದೆ. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಪ್ರಾಣಿ ಕ್ರೌರ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಮೂಕ ಪ್ರಾಣಿ ಮೇಲೆ ಇದೆಂಥಾ ಕ್ರೌರ್ಯ: ನಾಯಿಯನ್ನ ಕೊಂದು ಆಟೋಗೆ ಕಟ್ಟಿ ಎಳೆದೊಯ್ದ ವ್ಯಕ್ತಿ
ಮೂಕ ಪ್ರಾಣಿ ಮೇಲೆ ಇದೆಂಥಾ ಕ್ರೌರ್ಯ: ನಾಯಿಯನ್ನ ಕೊಂದು ಆಟೋಗೆ ಕಟ್ಟಿ ಎಳೆದೊಯ್ದ ವ್ಯಕ್ತಿ
Follow us
Basavaraj Yaraganavi
| Updated By: ಗಂಗಾಧರ​ ಬ. ಸಾಬೋಜಿ

Updated on:Jan 19, 2025 | 3:10 PM

ಶಿವಮೊಗ್ಗ, ಜನವರಿ 19: ಓರ್ವ ವ್ಯಕ್ತಿ ಬೀದಿ ನಾಯಿಯನ್ನು (Street Dog) ಅಮಾನುಷವಾಗಿ ಹೊಡೆದು ಕೊಂದು ಆಟೋದಲ್ಲಿ ಎಳೆದುಕೊಂಡು ಹೋಗಿರುವಂತಹ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಕೆಂಚನಾಲ ಗ್ರಾಮದ ರೈಲ್ವೇ ನಿಲ್ದಾಣದ ಬಳಿಯಲ್ಲಿ ನಡೆದಿದೆ. ನಾಯಿ ಕೊಂದಾತನನ್ನು ಆಟೋ ಚಾಲಕ ವಾಜೀದ್ ಎಂದು ಗುರುತಿಸಲಾಗಿದೆ. ಸದ್ಯ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ನಡೆದಿದ್ದೇನು?

ಕೆಂಚನಾಲ ರೈಲ್ವೆ ನಿಲ್ದಾಣದ ಬಳಿಯಲ್ಲಿ ಅದರಷ್ಟಕ್ಕೆ ಮಲಗಿದ್ದ ನಾಯಿಯ ಮೇಲೆ ಆರೋಪಿ ವಾಜೀದ್ ದೊಡ್ಡ ಗಾತ್ರದ ಕಲ್ಲನ್ನು ಎತ್ತಿ ಹಾಕುತ್ತಾನೆ. ಆಗ ನಾಯಿ ಕಿರುಚುತ್ತಾ ಅಲ್ಲೇ ಕುಸಿದು ಬೀಳುತ್ತದೆ. ಅಷ್ಟಕ್ಕೇ ಸುಮ್ಮನಾಗದ ಆರೋಪಿ ಮತ್ತೊಮ್ಮೆ ಅದೇ ಕಲ್ಲನ್ನು ಎತ್ತಿ ತಲೆ ಮೇಲೆ ಹಾಕಿದ್ದಾನೆ. ಇದರಿಂದ ಅರ್ಧ ಜೀವವಾದ ನಾಯಿ ಅಲ್ಲೇ ನರಳಾಡುತ್ತಿರುತ್ತದೆ. ಅಲ್ಲಿಂದ ಸ್ವಲ್ಪ ದೂರಕ್ಕೆ ಹೋದ ಆರೋಪಿ ಮತ್ತೊಮ್ಮೆ ಹಿಂದಿರುಗಿ ಬಂದು ಇನ್ನಷ್ಟೂ ಕ್ರೂರವಾಗಿ ಅದೇ ಕಲ್ಲನ್ನು ಮತ್ತೆ ನಾಯಿಯ ತಲೆ ಮೇಲೆ ಹಾಕಿದ ರಭಸಕ್ಕೆ ನಾಯಿ ಸ್ಥಳದಲ್ಲಿಯೇ ಪ್ರಾಣಬಿಟ್ಟಿದೆ.

ಇದನ್ನೂ ಓದಿ: ಕರ್ನಾಟದಲ್ಲಿ ಮತ್ತೊಂದು ಅಮಾನವೀಯ ಘಟನೆ: ಹಸುವಿನ ತಲೆ ಕಡಿದು ದೇಹ ಕೊಂಡೊಯ್ದ ದುರುಳರು

ಕೊನೆಗೆ ಆ ನಾಯಿಯನ್ನು ತನ್ನ ಆಟೋ ಹಿಂಬದಿಗೆ ಕಟ್ಟಿ ರಸ್ತೆಯ ಮೇಲೆ ಅತೀ ಅಮಾನುಷವಾಗಿ ಎಳೆದೊಯ್ದಿದ್ದಾನೆ. ಈ ಘಟನೆ ನಡೆಯುವಾಗ ಅಲ್ಲಿದ್ದ ಸ್ಥಳೀಯ ಯುವಕನೊಬ್ಬ ಮೊಬೈಲ್​ನಲ್ಲಿ ವಿಡಿಯೋ ಮಾಡಿಕೊಂಡಿದ್ದಾರೆ. ಇನ್ನು ಮಾಹಿತಿ ನೀಡಿದ ಕೇವಲ 45 ನಿಮಿಷಗಳಲ್ಲಿ ಮಾಜಿ ಸಚಿವೆ ಮೇನಕಾ ಗಾಂಧಿ ಈ ಮೇಲ್​ ಮೂಲಕ ಸ್ಪಂದಿಸಿದ್ದಾರೆ. ಮಾಹಿತಿ ನೀಡದ ಯುವಕನಿಗೆ ಕೂಡಲೇ ಸ್ಥಳೀಯ ಠಾಣೆಗೆ ತೆರಳಿ ದೂರು ನೀಡುವಂತೆ ತಿಳಿಸಿದ್ದಾರೆ.

ಇದನ್ನೂ ಓದಿ: ಬಾಲಕನ ಮೇಲೆ ನಾಯಿ ಡೆಡ್ಲಿ ಅಟ್ಯಾಕ್: ರಕ್ತ ಸಿಕ್ತವಾದ ಮಗುವನಿ ಸ್ಥಿತಿ ನೋಡಿ ಬೆಚ್ಚಿಬಿದ್ದ ಸ್ಥಳೀಯರು

ಮೇನಕಾ ಗಾಂಧಿರವರ ಕರೆ ಬರುತಿದ್ದಂತೆ ಎಚ್ಚೆತ್ತುಕೊಂಡ ರಾಜ್ಯ ಪ್ರಾಣಿ ದಯಾ ಸಂಘದವರು ಈ ಬಗ್ಗೆ ಪಶು ವೈದ್ಯಾಧಿಕಾರಿ ಕಡೆಯಿಂದ ಪಟ್ಟಣದ ಠಾಣೆಗೆ ದೂರು ನೀಡಲಾಗಿದೆ. ದೂರು ಸಲ್ಲಿಕೆಯಾಗಿ 15 ನಿಮಿಷಗಳಲ್ಲಿ ಆರೋಪಿ ಆಟೋ ಚಾಲಕ ವಾಜೀದ್ ನನ್ನು ಪಿಎಸ್‌ಐ ಪ್ರವೀಣ್, ಎಸ್​ಪಿ ನೇತ್ರತ್ವದಲ್ಲಿ ಬಂಧಿಸಿ ಆರೋಪಿಯ ವಿರುದ್ದ ಭಾರತೀಯ ನ್ಯಾಯ ಸಂಹಿತಾ (BNS), 2023ರ ಸೆಕ್ಷನ್ 325 ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವಿಕೆ (PCA) ಕಾಯಿದೆ ಅಡಿಯಲ್ಲಿ ಎಫ್​ಐಆರ್​ ದಾಖಲಿಸಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:10 pm, Sun, 19 January 25

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್