AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga Airport: ಶಿವಮೊಗ್ಗ ವಿಮಾನ ನಿಲ್ದಾಣದಿಂದ ಆಗಸ್ಟ್​ 11ರಿಂದ ವಿಮಾನ ಸಂಚಾರ; ಸಂಸದ ರಾಘವೇಂದ್ರ ಮಾಹಿತಿ

ಮೊದಲ ವಿಮಾನವು ಶಿವಮೊಗ್ಗ ಮತ್ತು ಬೆಂಗಳೂರು ನಡುವೆ ಸಂಚಾರ ಮಾಡಲಿದೆ. ಇಂಡಿಗೋ ಏರ್‌ಲೈನ್ಸ್ ಅಧಿಕಾರಿಗಳು ಕಳೆದ ವಾರ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಬಸ್ ಸೇವೆಗಳು ಸೇರಿದಂತೆ ವಿವಿಧ ಸೌಲಭ್ಯಗಳನ್ನು ಪರಿಶೀಲಿಸಿದ್ದಾರೆ

Shivamogga Airport: ಶಿವಮೊಗ್ಗ ವಿಮಾನ ನಿಲ್ದಾಣದಿಂದ ಆಗಸ್ಟ್​ 11ರಿಂದ ವಿಮಾನ ಸಂಚಾರ; ಸಂಸದ ರಾಘವೇಂದ್ರ ಮಾಹಿತಿ
ಶಿವಮೊಗ್ಗ ವಿಮಾನ ನಿಲ್ದಾಣ
Ganapathi Sharma
|

Updated on:Jun 24, 2023 | 3:33 PM

Share

ಶಿವಮೊಗ್ಗ: ಶಿವಮೊಗ್ಗದಲ್ಲಿ ನೂತನವಾಗಿ ನಿರ್ಮಾಣಗೊಂಡು ಪ್ರಧಾನಿ ನರೇಂದ್ರ ಮೋದಿ ಅವರಿಂದ ಲೋಕಾರ್ಪಣೆಗೊಂಡಿರುವ ವಿಮಾನ ನಿಲ್ದಾಣದಿಂದ (Shivamogga Airport) ಆಗಸ್ಟ್ 11 ರಂದು ವಿಮಾನ ಕಾರ್ಯಾಚರಣೆ ಆರಂಭವಾಗಲಿದೆ. ಮೊದಲ ವಿಮಾನವು ಶಿವಮೊಗ್ಗ ಮತ್ತು ಬೆಂಗಳೂರು ನಡುವೆ ಸಂಚಾರ ಮಾಡಲಿದೆ. ಇಂಡಿಗೋ ಏರ್‌ಲೈನ್ಸ್ (Indigo Airlines) ಅಧಿಕಾರಿಗಳು ಕಳೆದ ವಾರ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಬಸ್ ಸೇವೆಗಳು ಸೇರಿದಂತೆ ವಿವಿಧ ಸೌಲಭ್ಯಗಳನ್ನು ಪರಿಶೀಲಿಸಿದ್ದಾರೆ ಎಂದು ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ (BY Raghavendra) ತಿಳಿಸಿರುವುದಾಗಿ ವರದಿಯಾಗಿದೆ.

ಫೆಬ್ರವರಿ 27 ರಂದು ದೆಹಲಿಯಿಂದ ಶಿವಮೊಗ್ಗಕ್ಕೆ ಬಂದಿಳಿಯುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ್ದರು. ಮೊದಲ ಬಾರಿಗೆ ಪ್ರಧಾನಿಯವರ ವಿಮಾನವೇ ಶಿವಮೊಗ್ಗ ನಿಲ್ದಾಣಕ್ಕೆ ಬಂದಿತ್ತು. ಇದು ನಮಗೆ ಐತಿಹಾಸಿಕ ಕ್ಷಣವಾಗಿತ್ತು. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಜನ್ಮದಿನದಂದು ವಿಮಾನ ನಿಲ್ದಾಣ ಉದ್ಘಾಟನೆಯಾಗಿರುವುದೂ ನಮಗೆ ಸಂತಸದ ವಿಚಾರ ಎಂದು ರಾಘವೇಂದ್ರ ಹೇಳಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್​​ಪ್ರೆಸ್’ ವರದಿ ಮಾಡಿದೆ.

ಮೂಲಗಳ ಪ್ರಕಾರ, ಇಂಡಿಗೋ ಏರ್‌ಲೈನ್ಸ್ ಶೀಘ್ರದಲ್ಲೇ ಶಿವಮೊಗ್ಗದಿಂದ ದೆಹಲಿ ಮತ್ತು ಮುಂಬೈಗೆ ವಿಮಾನ ಸಂಚಾರ ಆರಂಭಿಸಲಿದೆ. ಶಿವಮೊಗ್ಗ-ಬೆಂಗಳೂರು ನಡುವಿನ ಪ್ರಯಾಣ ದರದ ಬಗ್ಗೆ ಕೇಳಿದ ಪ್ರಶ್ನೆಗೆ ಸಂಸದರು ಪ್ರತಿ ವ್ಯಕ್ತಿಗೆ 2,500 ರಿಂದ 3,000 ರೂ. ಇರಲಿದೆ ಎಂದು ಹೇಳಿದ್ದಾರೆ. ಜಿಲ್ಲೆಯ ಪ್ರವಾಸೋದ್ಯಮವನ್ನು ಉತ್ತೇಜಿಸಲು ವಿಮಾನ ನಿಲ್ದಾಣವು ಸಹಾಯ ಮಾಡಲಿದೆ. ಪ್ರಸಿದ್ಧ ಜೋಗ ಜಲಪಾತ ಮತ್ತು ಅನೇಕ ಧಾರ್ಮಿಕ ಸ್ಥಳಗಳು ಜಿಲ್ಲೆಯಲ್ಲಿದ್ದು, ಇವುಗಳಿಗೆ ಭೇಟಿ ನೀಡಲು ಪ್ರವಾಸಿಗರಿಗೆ ನೆರವಾಗಲಿದೆ ಎಂದು ಅವರು ಹೇಳಿರುವುದನ್ನು ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: Shivamogga Airport: ಕಮಲ ವಿನ್ಯಾಸ ಆರೋಪ; ಮಹಾಲಕ್ಷ್ಮೀಯ ಸಂಕೇತವಾಗಿದೆ ಎಂದ ಸಚಿವ ಈಶ್ವರಪ್ಪ

ನೆರೆಯ ಜಿಲ್ಲೆಗಳಾದ ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲೆಗಳ ಅಭಿವೃದ್ಧಿಯಲ್ಲಿ ವಿಮಾನ ನಿಲ್ದಾಣ ದೊಡ್ಡ ಪಾತ್ರ ವಹಿಸಲಿದೆ. ಶಿವಮೊಗ್ಗದಿಂದ ವಿಮಾನ ಸೇವೆ ಆರಂಭವಾಗುವುದರಿಂದ ಜಿಲ್ಲೆಯ ಕೈಗಾರಿಕಾ ಕ್ಷೇತ್ರಕ್ಕೆ ದೊಡ್ಡ ಉತ್ತೇಜನ ದೊರೆಯಲಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:32 pm, Sat, 24 June 23

ಪೊಲೀಸರ ಎದುರಲ್ಲೇ ನಟ ಪ್ರಥಮ್ ಮುಖಕ್ಕೆ ಮಸಿ; ವಿಡಿಯೋ ಇಲ್ಲಿದೆ ನೋಡಿ
ಪೊಲೀಸರ ಎದುರಲ್ಲೇ ನಟ ಪ್ರಥಮ್ ಮುಖಕ್ಕೆ ಮಸಿ; ವಿಡಿಯೋ ಇಲ್ಲಿದೆ ನೋಡಿ
ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್​​ ವಿಷ : ತಪ್ಪಿದ ಅನಾಹುತ!
ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್​​ ವಿಷ : ತಪ್ಪಿದ ಅನಾಹುತ!
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ
W,W,W,W,W,W: ಇಂಗ್ಲೆಂಡ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ ಮೋಡಿ
W,W,W,W,W,W: ಇಂಗ್ಲೆಂಡ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ ಮೋಡಿ
ಆಗಸ್ಟ್ ಕೊನೆಯಲ್ಲಿ ಮತ್ತೆ ಟೋಯಿಂಗ್ ಶುರು: ಗೃಹ ಸಚಿವ ಪರಮೇಶ್ವರ್ ಘೋಷಣೆ
ಆಗಸ್ಟ್ ಕೊನೆಯಲ್ಲಿ ಮತ್ತೆ ಟೋಯಿಂಗ್ ಶುರು: ಗೃಹ ಸಚಿವ ಪರಮೇಶ್ವರ್ ಘೋಷಣೆ
‘ಅದೃಷ್ಟ ದೇವತೆ ಬಟ್ಟೆ ಬಿಚ್ಚಿಸುವವರು ದೇವರಿಗೆ ವಂದಿಸುತ್ತಾರೆ’; ಪ್ರಥಮ್
‘ಅದೃಷ್ಟ ದೇವತೆ ಬಟ್ಟೆ ಬಿಚ್ಚಿಸುವವರು ದೇವರಿಗೆ ವಂದಿಸುತ್ತಾರೆ’; ಪ್ರಥಮ್