AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ವೆಯಾಗುವುದಾಗಿ ನಂಬಿಸಿ ಮಹಿಳೆಗೆ ವಂಚನೆ: ಶಿವಮೊಗ್ಗ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರೆಸ್ಟ್

ಮಹಿಳೆಗೆ ಮದುವೆ ಆಗುವುದಾಗಿ ನಂಬಿಸಿ ವಂಚಿಸಿದ ಆರೋಪದ ಮೇಲೆ ಶಿವಮೊಗ್ಗ(Shivamogga) ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಗ್ವೆ(Arun Kugwe) ಅವರನ್ನು ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಾಗರದ‌ ಮಹಿಳೆಗೆ ವಂಚಿಸಿದ ಪ್ರಕರಣದಲ್ಲಿ ಈ ಹಿಂದೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು.

ಮದ್ವೆಯಾಗುವುದಾಗಿ ನಂಬಿಸಿ ಮಹಿಳೆಗೆ ವಂಚನೆ: ಶಿವಮೊಗ್ಗ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರೆಸ್ಟ್
ಅರುಣ್ ಕುಗ್ವೆ
Basavaraj Yaraganavi
| Updated By: ಕಿರಣ್ ಹನುಮಂತ್​ ಮಾದಾರ್|

Updated on:Jun 23, 2024 | 4:19 PM

Share

ಶಿವಮೊಗ್ಗ, ಜೂ.23: ಮಹಿಳೆಗೆ ಮದುವೆ ಆಗುವುದಾಗಿ ನಂಬಿಸಿ ವಂಚಿಸಿದ ಆರೋಪದ ಮೇಲೆ ಶಿವಮೊಗ್ಗ(Shivamogga) ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಗ್ವೆ(Arun Kugwe) ಅವರನ್ನು ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಾಗರದ‌ ಮಹಿಳೆಗೆ ವಂಚಿಸಿದ ಪ್ರಕರಣದಲ್ಲಿ ಈ ಹಿಂದೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು.ಆದರೆ, ಕಾರಣಾಂತರದಿಂದ ಕೇಸ್ ದಾಖಲಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಸಂಸ್ರಸ್ತ ಮಹಿಳೆ ಶಿವಮೊಗ್ಗ ಮಹಿಳಾ ಠಾಣೆಗೆ ಬಂದು ದೂರು ನೀಡಿದ್ದರು. ಇದೀಗ ಮಹಿಳಾ ಠಾಣೆ ಪೊಲೀಸ್‌ ಸಿಪಿಐ ಭರತ್ ಕುಮಾರ್ ನೇತೃತ್ವದಲ್ಲಿ ಸಾಗರದ ನಿವಾಸದಲ್ಲಿ ಅರುಣ್​ನನ್ನು ಅರೆಸ್ಟ್​  ಮಾಡಲಾಗಿದೆ.

ದೂರಿನಲ್ಲಿದೆ?

ಇನ್ನು ಈ ಕುರಿತು ನೊಂದ ಯುವತಿ ನ್ಯಾಯಕ್ಕಾಗಿ ಠಾಣೆ ಮೆಟ್ಟಿಲೇರಿದ್ದು, ಆತನ ವಿರುದ್ದ ದೂರು ದಾಖಲಿಸಿದ್ದಳು. ‘ನನ್ನೊಂದಿಗೆ ಮದುವೆ ಆಗುವ ಆಸೆ ತೋರಿಸಿದ ಅರುಣ್ ಕುಗ್ವೆ, ನಾಲ್ಕು ವರ್ಷಗಳಿಂದ‌ ಸಂಬಂಧ‌ ಬೆಳೆಸಿ ತನ್ನೊಂದಿಗೆ ಸಂಪರ್ಕ ಬೆಳೆಸಿದ ನಂತರದ ವಿವಿಧ ಆಮಿಷ ತೋರಿಸಿ ಮದುವೆಯಾಗುತ್ತೇನೆ ಎಂದು ಹೇಳುತ್ತಾ, ಬಲಾತ್ಕಾರ ಮಾಡಿರುತ್ತಾನೆ. ಜೋಗ, ಶಿವಮೊಗ್ಗ ಮತ್ತಿತರ ಕಡೆಗಳಲ್ಲಿ ತನ್ನೊಂದಿಗೆ ಆಮಿಷ ತೋರಿಸಿ ದೈಹಿಕ ಸಂಬಂಧ ಬೆಳೆಸಿರುತ್ತಾನೆ. ಬಲಾತ್ಕಾರವಾಗಿ ವಿಡಿಯೋ ಚಿತ್ರೀಕರಣ, ಫೋಟೋ ತೆಗೆದುಕೊಂಡಿದ್ದಾನೆ.‌

ಇದನ್ನೂ ಓದಿ:Soldier: ಯೋಧನಿಂದ ವಿಧವೆ ಮಹಿಳೆಗೆ ವಂಚನೆ -ಬಾಳು ಕೊಡೊದಾಗಿ ತಾಳಿಕಟ್ಟಿರುವ ವಿಚಾರ ಮುಚ್ಚಿಟ್ಟು, 2ನೆ ಮದುವೆಗೆ ಸಿದ್ಧತೆ!

ಜೊತೆಗೆ ಇತ್ತೀಚೆಗೆ ಬೇರೆ ಹುಡುಗಿಯರೊಂದಿಗೆ ಇದೇ ರೀತಿ ವರ್ತಿಸಿದ್ದು ಕಂಡು ಬಂದಾಗ ಆ ಬಗ್ಗೆ ಕೇಳಿದ್ದಕ್ಕೆ ಜೀವ ಬೆದರಿಕೆ ಒಡ್ಡಿದ್ದು, ಬೇರೊಬ್ಬ ಯುವತಿಯೊಂದಿಗೆ ಮದುವೆ ನಿಶ್ಚಯ ಮಾಡಿಕೊಂಡಿರುತ್ತಾನೆ. ಅದನ್ನ ಪ್ರಶ್ನಿಸಿದ್ದಕ್ಕೆ ಅವನ ಸೋದರ ಗಣೇಶ್ ಎಂಬುವವನು ನನಗೆ ಮತ್ತು ನನ್ನ ಕುಟುಂಬದವರಿಗೆ ಜೀವ ಬೆದರಿಕೆ ಹಾಕಿರುತ್ತಾನೆ ಎಂದು ಯುವತಿ ದೂರು ನೀಡಿದ್ದಾಳೆ.‌

ಈ ಹಿನ್ನೆಲೆಯಲ್ಲಿ ಅರುಣ್ ಕುಗ್ವೆ ಮತ್ತು ಗಣೇಶ್ ಇಬ್ಬರ ಮೇಲೆ IPC ಸೆಕ್ಷನ್ 354, 376 ಹಾಗೂ 506 ಅಡಿಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:10 pm, Sun, 23 June 24

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ