ಕೆಎಸ್ ಈಶ್ವರಪ್ಪ ಸಂಧಾನ ವಿಫಲ; ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ವಾಪಸ್ ಹೋದ ಬಿಜೆಪಿ ನಾಯಕರು

| Updated By: Rakesh Nayak Manchi

Updated on: Mar 17, 2024 | 10:44 AM

ತನ್ನ ಪುತ್ರ ಕೆಇ ಕಾಂತೇಶ್​ಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಕಾರಣದಿಂದ ಬಿಎಸ್ ಯಡಿಯೂರಪ್ಪ ವಿರುದ್ಧ ಆಕ್ರೋಶಗೊಂಡಿರುವ ಕೆಎಸ್ ಈಶ್ವರಪ್ಪ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಇದರಿಂದಾಗಿ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರಗೆ ಸೋಲಿನ ಭೀತಿ ಎದುರಾಗಿದ್ದು, ಬಿಜೆಪಿ ನಾಯಕರು ಈಶ್ವರಪ್ಪ ಅವರ ಮನವೊಲಿಕೆಗೆ ಹರಸಾಹಸ ಪಡುತ್ತಿದ್ದಾರೆ.

ಕೆಎಸ್ ಈಶ್ವರಪ್ಪ ಸಂಧಾನ ವಿಫಲ; ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ವಾಪಸ್ ಹೋದ ಬಿಜೆಪಿ ನಾಯಕರು
ಕೆಎಸ್ ಈಶ್ವರಪ್ಪ ಮತ್ತು ಬಿಎಸ್ ಯಡಿಯೂರಪ್ಪ
Follow us on

ಶಿವಮೊಗ್ಗ, ಮಾ.17: ತನ್ನ ಪುತ್ರ ಕೆಇ ಕಾಂತೇಶ್​ಗೆ (KE Kantesh) ಬಿಜೆಪಿ ಟಿಕೆಟ್ ಕೈತಪ್ಪಿದ ಕಾರಣದಿಂದ ಬಿಎಸ್ ಯಡಿಯೂರಪ್ಪ (BS Yediyurappa) ವಿರುದ್ಧ ಆಕ್ರೋಶಗೊಂಡಿರುವ ಕೆಎಸ್ ಈಶ್ವರಪ್ಪ ಅವರು ಶಿವಮೊಗ್ಗ (Shivamogga) ಲೋಕಸಭಾ ಕ್ಷೇತ್ರದಲ್ಲಿ ಬಂಡಾಯ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಇದರಿಂದಾಗಿ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರಗೆ (BY Raghavendra) ಸೋಲಿನ ಭೀತಿ ಎದುರಾಗಿದ್ದು, ಬಿಜೆಪಿ ನಾಯಕರು ಈಶ್ವರಪ್ಪ ಅವರ ಮನವೊಲಿಕೆಗೆ ಹರಸಾಹಸ ಪಡುತ್ತಿದ್ದಾರೆ.

ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗ ಕ್ಷೇತ್ರಕ್ಕೆ ಆಗಮಿಸಲಿದ್ದು, ಇದಕ್ಕೂ ಮುನ್ನ ಈಶ್ವರಪ್ಪ ಅವರ ಮನವೊಲಿಸಲು ರಾಜ್ಯ ಬಿಜೆಪಿ ನಾಯಕರು ಹರಸಾಹಸ ಪಡುತ್ತಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ಈಶ್ವರಪ್ಪ ನಿವಾಸಕ್ಕೆ ಶಾಸಕ ಆರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯರಾದ ಡಿಎಸ್ ಅರುಣ್ ಮತ್ತು ರವಿಕುಮಾರ್ ಭೇಟಿ ನೀಡಿದ್ದಾರೆ.

ಇದನ್ನೂ ಓದಿ: ತಂದೆ ಮಕ್ಕಳ ಕೈಗೆ ಪಕ್ಷ ಸಿಕ್ಕಿ, ಕಾರ್ಯಕರ್ತರು ಪರದಾಡ್ತಿದ್ದಾರೆ; ಪಕ್ಷ ಉಳಿಸಲು ನನ್ನ ಈ ಹೋರಾಟ -ಕೆ.ಎಸ್​.ಈಶ್ವರಪ್ಪ

ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿ ಈಶ್ವರಪ್ಪ ಜೊತೆ ಒಂದು ಗಂಟೆ ಮಾತುಕತೆ ನಡೆಸಿ ಸಂಧಾನಕ್ಕೆ ಯತ್ನಿಸಿದ್ದಾರೆ. ಅಲ್ಲದೆ, ನಾಳೆ ಜಿಲ್ಲೆಗೆ ಮೋದಿ ಆಗಮಿಸುತ್ತಿದ್ದು, ಸಮಾವೇಶಕ್ಕೆ ಆಗಮಿಸುವಂತೆ ಆಹ್ವಾನವನ್ನೂ ನೀಡಿದ್ದಾರೆ. ಆದರೆ, ಸಂಧಾನಕಾರರ ಮನವಿಗೆ ಈಶ್ವರಪ್ಪ ಸ್ಪಂದಿಸಿಲ್ಲ. ಹೀಗಾಗಿ ಬಂದ ದಾರಿಗೆ ಸುಂಕ ಇಲ್ಲವೆಂಬಂತೆ ಬಿಜೆಪಿ ನಾಯಕರು ಈಶ್ವರಪ್ಪ ನಿವಾಸದಿಂದ ವಾಪಸ್ ಹೋಗಿದ್ದಾರೆ.

ಜನ ಸಂಘಟನೆಗೆ ಮುಂದಾದ ಕಾಂತೇಶ್

ಶಿವಮೊಗ್ಗ ಕ್ಷೇತ್ರದಲ್ಲಿ ತಂದೆ ಈಶ್ವರಪ್ಪ ಅವರು ಬಿವೈ ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಹಿನ್ನೆಲೆ, ಕಾರ್ಯಕರ್ತರು, ಜನರನ್ನು ಮತ್ತು ಅಭಿಮಾನಿಗಳನ್ನು ಸಂಘಟಿಸಲು ಕೆಇ ಕಾಂತೇಶ್ ಮುಂದಾಗಿದ್ದಾರೆ. ಇಂದು ಶಿವಮೊಗ್ಗ ನಗರ ಮತ್ತು ಗ್ರಾಮೀಣ ಕ್ಷೇತ್ರದಲ್ಲಿ ಸಂಘಟನೆಗೆ ತೆರಳಿದ್ದು, ಈಶ್ವರಪ್ಪಗೆ ಬೆಂಬಲ ನೀಡುವಂತೆ ಮನವಿ ಮಾಡಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:43 am, Sun, 17 March 24