AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಮಳೆಗೆ 527 ಕೋಟಿ ರೂ. ವೆಚ್ಚದ ಹೈವೇ-13 ಬಣ್ಣ ಬಯಲು…!

ಶಿವಮೊಗ್ಗ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ 13 ರ ನಿರ್ಮಾಣದಲ್ಲಿನ ಕಳಪೆ ಕಾಮಗಾರಿ ಬೆಳಕಿಗೆ ಬಂದಿದೆ. 527 ಕೋಟಿ ರೂಪಾಯಿ ವೆಚ್ಚದ ಈ ಹೆದ್ದಾರಿ ಉದ್ಘಾಟನೆಯಾದ ಒಂದು ತಿಂಗಳಲ್ಲೇ ಬಿರುಕು ಬಿಟ್ಟಿದೆ. ಗುತ್ತಿಗೆದಾರರು ಮತ್ತು ಇಂಜಿನಿಯರ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ. ಹೆದ್ದಾರಿ ನಿರ್ಮಾಣದ ಗುತ್ತಿಗೆ ಪಡೆದ ಕಂಪನಿಯ ಲೈಸೆನ್ಸ್​ ರದ್ದು ಮಾಡಬೇಕೆಂದು ಆಗ್ರಹಿಸಿದ್ದಾರೆ.

ಒಂದೇ ಮಳೆಗೆ 527 ಕೋಟಿ ರೂ. ವೆಚ್ಚದ ಹೈವೇ-13 ಬಣ್ಣ ಬಯಲು...!
ಬಿರುಕು ಬಿಟ್ಟ ಹೆದ್ದಾರಿ
Basavaraj Yaraganavi
| Updated By: ವಿವೇಕ ಬಿರಾದಾರ|

Updated on: Jun 18, 2025 | 10:11 PM

Share

ಶಿವಮೊಗ್ಗ, ಜೂನ್​ 18: ಶಿವಮೊಗ್ಗ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ (Shivamogga-Chitradurga National Highway) ಕಾಮಗಾರಿ ಮುಗಿದು ಉದ್ಘಾಟನೆ ಕಾರ್ಯಕ್ರಮ ಕೂಡ ಆಗಿತ್ತು. ಉದ್ಘಾಟನೆಯಾಗಿ ಕೇವಲ ಒಂದೇ ತಿಂಗಳಲ್ಲಿ ಹೆದ್ದಾರಿ ಕಾಮಗಾರಿಯ ಬಣ್ಣ ಬಯಲಾಗಿದೆ. 527 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಹೆದ್ದಾರಿ ಬಿರುಕು ಬಿಟ್ಟಿದೆ. ಶಿವಮೊಗ್ಗದಿಂದ-ಚಿತ್ರದುರ್ಗಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 13 ಬಿರುಕುಬಿಟ್ಟಿದೆ. ಉದ್ಘಾಟನೆಗೊಂಡು ಒಂದೇ ತಿಂಗಳಿಗೆ ರಸ್ತೆ ಕುಸಿದಿರುವುದು ಕಾಮಗಾರಿಯ ಅಸಲಿ ಬಣ್ಣ ಬಯಲಾಗಿದೆ. ಒಂದೇ ಮಳೆಗೆ ರಸ್ತೆಯ ಕಳಪೆ ಕಾಮಗಾರಿ ಬಟಾ ಬಯಲಾಗಿದೆ.

527 ಕೋಟಿ ವೆಚ್ಚದಲ್ಲಿ 106 ಕಿ.ಮೀ ರಾಷ್ಟ್ರೀಯ ಹೆದ್ದಾರಿ 13 ನಿರ್ಮಾಣ ಮಾಡಲಾಗಿದೆ. ಈ ಹೆದ್ದಾರಿ ಸಲುವಾಗಿ ಸುಮಾರು 80 ಕೋಟಿ ವೆಚ್ಚದಲ್ಲಿ ಹೊಳೆಹೊನ್ನೂರಿನ ಬಳಿ ಭದ್ರಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಮಾಡಲಾಗಿದೆ. ಕಳೆದ ತಿಂಗಳು ಸಂಸದ ಬಿ.ವೈ ರಾಘವೇಂದ್ರ ಅವರು ರಾಷ್ಟ್ರೀಯ ಹೆದ್ದಾರಿ 13 ಅನ್ನು ಲೋಕಾರ್ಪಣೆಗೊಳಿಸಿದ್ದರು. ಇದೀಗ ಹೆದ್ದಾರಿ ಬಿರುಕುಬಿಟ್ಟಿದ್ದು, ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಹೆದ್ದಾರಿ ನಿರ್ಮಾಣದ ಗುತ್ತಿಗೆ ಪಡೆದ ಕಂಪನಿ ಮತ್ತು ಎಂಜಿನಿಯರ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಮಲೆನಾಡಿನ ಭಾಗದ ಜನರು ಈ ಹೆದ್ದಾರಿ ಮೂಲಕ ಬೆಂಗಳೂರಿಗೆ ಪ್ರಯಾಣ ಮಾಡುತ್ತಾರೆ. ಉತ್ತಮ ಹೆದ್ದಾರಿ ಓಡಾಟಕ್ಕೆ ಸಿಕ್ಕಿತು ಎಂದು ಖುಷಿ ಪಟ್ಟಿದ್ದರು. ಆದರೆ, ಹೆದ್ದಾರಿ ಬಿರುಕು ಬಿಟ್ಟಿದ್ದು, ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಹೆದ್ದಾರಿ ನಿರ್ಮಾಣದ ಗುತ್ತಿಗೆ ಪಡೆದ ಕಂಪನಿಯ ಮತ್ತು ಎಂಜಿನಿಯರ್​ ವಿರುದ್ಧ ಗಮನ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದರು.

ಇದನ್ನೂ ಓದಿ
Image
ಡಿಕೆ ಶಿವಕುಮಾರ್ ಭಾರತೀಯ ಸಂಸ್ಕೃತಿಯನ್ನು ಪ್ರತಿನಿಧಿಸುತ್ತಾರೆ: ಈಶ್ವರಪ್ಪ
Image
ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆಗೆ ಮುಹೂರ್ತ ಫಿಕ್ಸ್: ಈಶ್ವರಪ್ಪ ಸಂಚಲನ
Image
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಿಎನನ್ನು ಇದುವರೆಗೆ ಯಾಕೆ ಬಂಧಿಸಿಲ್ಲ? ರವಿ
Image
ಕ್ರಾಂತಿವೀರ ಬ್ರಿಗೇಡ್: ಈಶ್ವರಪ್ಪ ನೇತೃತ್ವದಲ್ಲಿ ಹೊಸ ಸಂಘಟನೆ!

ಇದನ್ನೂ ಓದಿ: ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧ, ಎಂದಿನಿಂದ? ಬದಲಿ ಮಾರ್ಗ ಇಲ್ಲಿದೆ

ಇನ್ನು ಭದ್ರಾ ಸೇತುವೆ ಮೇಲೆ ಗ್ರಾಮಸ್ಥರು ನಿತ್ಯ ಓಡಾಡುತ್ತಾರೆ. ಸೇತುವೆಯ ತಡೆಗೋಡೆ ಕೂಡ ಕಳಪೆಯಿಂದ ಕೂಡಿದ್ದು, ಬೀಳುವ ಆತಂಕದಲ್ಲಿ ಗ್ರಾಮಸ್ಥರಿದ್ದಾರೆ. ಅಧಿಕಾರಿಗಳ ಮತ್ತು ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಕಳಪೆ ಕಾಮಗಾರಿ ಸಾಕ್ಷಿಯಾಗಿದೆ. ಹೆದ್ದಾರಿ ನಿರ್ಮಾಣ ಮಾಡಿದ ಗುತ್ತಿಗೆದಾರರ ಮತ್ತು ಎಂಜಿನಿಯರ್​ಗಳ ವಿರುದ್ಧ ಸರ್ಕಾರವು ಕಠಿಣ ಕ್ರಮಕ್ಕೆ ಮುಂದಾಗಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋದಿ ತೆರಳುತ್ತಿದ್ದ ವೇಳೆ ಬ್ಯಾರಿಕೇಡ್​ ಜಂಪ್ ಮಾಡಲು ಯತ್ನಿಸಿದ ಯುವಕ
ಮೋದಿ ತೆರಳುತ್ತಿದ್ದ ವೇಳೆ ಬ್ಯಾರಿಕೇಡ್​ ಜಂಪ್ ಮಾಡಲು ಯತ್ನಿಸಿದ ಯುವಕ
8 ಸಿಕ್ಸರ್, 83 ರನ್; ಟಿಮ್ ಡೇವಿಡ್ ಸಿಡಿಲಬ್ಬರದ ಬ್ಯಾಟಿಂಗ್‌
8 ಸಿಕ್ಸರ್, 83 ರನ್; ಟಿಮ್ ಡೇವಿಡ್ ಸಿಡಿಲಬ್ಬರದ ಬ್ಯಾಟಿಂಗ್‌
‘ಸನ್ ಆಫ್ ಮುತ್ತಣ್ಣ’ ಸಿನಿಮಾದ ಬಗ್ಗೆ ನಟ ರಂಗಾಯಣ ರಘು ಮಾತು
‘ಸನ್ ಆಫ್ ಮುತ್ತಣ್ಣ’ ಸಿನಿಮಾದ ಬಗ್ಗೆ ನಟ ರಂಗಾಯಣ ರಘು ಮಾತು
ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾಗೆ ಮುಹೂರ್ತ; ಜೋಡಿಯಾದ ಬೃಂದಾ ಆಚಾರ್ಯ
ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾಗೆ ಮುಹೂರ್ತ; ಜೋಡಿಯಾದ ಬೃಂದಾ ಆಚಾರ್ಯ
ಮೋದಿ-ಸಿದ್ದರಾಮಯ್ಯ ಮಟ್ರೋನಲ್ಲಿ ಸಂಚಾರ: ಪ್ರಯಾಣದುದ್ದಕ್ಕೂ ನಗೆಯಲ್ಲಿ ತೇಲಾಟ
ಮೋದಿ-ಸಿದ್ದರಾಮಯ್ಯ ಮಟ್ರೋನಲ್ಲಿ ಸಂಚಾರ: ಪ್ರಯಾಣದುದ್ದಕ್ಕೂ ನಗೆಯಲ್ಲಿ ತೇಲಾಟ
2014ರಿಂದ ಕರ್ನಾಟಕ ರೈಲ್ವೆ ಬಜೆಟ್​ನಲ್ಲಿ 9 ಪಟ್ಟು ಹೆಚ್ಚಳ: ಅಶ್ವಿನಿ
2014ರಿಂದ ಕರ್ನಾಟಕ ರೈಲ್ವೆ ಬಜೆಟ್​ನಲ್ಲಿ 9 ಪಟ್ಟು ಹೆಚ್ಚಳ: ಅಶ್ವಿನಿ
ಹಳದಿ ಮಾರ್ಗಕ್ಕೆ ಚಾಲನೆ ನೀಡಿ ಮೆಟ್ರೋದಲ್ಲಿ ಮೋದಿ ಪ್ರಯಾಣ: ವಿಡಿಯೋ ನೋಡಿ
ಹಳದಿ ಮಾರ್ಗಕ್ಕೆ ಚಾಲನೆ ನೀಡಿ ಮೆಟ್ರೋದಲ್ಲಿ ಮೋದಿ ಪ್ರಯಾಣ: ವಿಡಿಯೋ ನೋಡಿ
ಈ ಭಾಗದ ಕನಸು ಸಾಕಾರಗೊಳಿಸಿದ ಮೋದಿ: ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ
ಈ ಭಾಗದ ಕನಸು ಸಾಕಾರಗೊಳಿಸಿದ ಮೋದಿ: ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ
ವಿಲ್ ಜ್ಯಾಕ್ಸ್ ಬಿರುಗಾಳಿ ಬ್ಯಾಟಿಂಗ್: 57 ಎಸೆತಗಳಲ್ಲಿ ಮುಗಿದ ಪಂದ್ಯ
ವಿಲ್ ಜ್ಯಾಕ್ಸ್ ಬಿರುಗಾಳಿ ಬ್ಯಾಟಿಂಗ್: 57 ಎಸೆತಗಳಲ್ಲಿ ಮುಗಿದ ಪಂದ್ಯ
ಕಾಲೇಜಿನಲ್ಲಿ ರ‍್ಯಾಗಿಂಗ್, ವಿದ್ಯುತ್ ಶಾಕ್ ನೀಡಿ ಚಿತ್ರಹಿಂಸೆ ಕೊಟ್ರು
ಕಾಲೇಜಿನಲ್ಲಿ ರ‍್ಯಾಗಿಂಗ್, ವಿದ್ಯುತ್ ಶಾಕ್ ನೀಡಿ ಚಿತ್ರಹಿಂಸೆ ಕೊಟ್ರು