ಸಿಟಿ ಸೆಂಟರ್ ಮಾಲ್​ನಲ್ಲಿ ಸಾವರ್ಕರ್ ಭಾವಚಿತ್ರ ಹಾಕಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಅಸಿಫ್‌​ನ ಬಂಧನ; ಆಗಸ್ಟ್ 26ರವರೆಗೆ ನ್ಯಾಯಾಂಗ ಬಂಧನ

ಶಿವಮೊಗ್ಗದ ಸಿಟಿ ಸೆಂಟರ್ ಮಾಲ್​ನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಸಾಲಿನಲ್ಲಿ ವೀರ್​ ಸಾವರ್ಕರ್​ ಫೋಟೋ ಹಾಕಿದ್ದನ್ನು ವಿರೋಧ ವ್ಯಕ್ತಪಡಿಸಿದ್ದ ಎಂ.ಡಿ.ಷರೀಫ್ ಅಲಿಯಾಸ್ ಆಸೀಫ್​ನನ್ನು ಶಿವಮೊಗ್ಗದ ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ

ಸಿಟಿ ಸೆಂಟರ್ ಮಾಲ್​ನಲ್ಲಿ ಸಾವರ್ಕರ್ ಭಾವಚಿತ್ರ ಹಾಕಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಅಸಿಫ್‌​ನ ಬಂಧನ; ಆಗಸ್ಟ್ 26ರವರೆಗೆ ನ್ಯಾಯಾಂಗ ಬಂಧನ
Shivamogga City Center Mall Savarkar Photo controversy Police arrested a person
Follow us
TV9 Web
| Updated By: ವಿವೇಕ ಬಿರಾದಾರ

Updated on:Aug 14, 2022 | 5:15 PM

ಶಿವಮೊಗ್ಗ: ಶಿವಮೊಗ್ಗದ ಸಿಟಿ ಸೆಂಟರ್ ಮಾಲ್​ನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಸಾಲಿನಲ್ಲಿ ವೀರ್​ ಸಾವರ್ಕರ್​ (Vinayak Damodar Savarkar) ಫೋಟೋ ಹಾಕಿದ್ದನ್ನು ವಿರೋಧ ವ್ಯಕ್ತಪಡಿಸಿದ್ದ ಎಂ.ಡಿ.ಷರೀಫ್ ಅಲಿಯಾಸ್ ಆಸೀಫ್​ನನ್ನು ಶಿವಮೊಗ್ಗದ ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿ ಶಿವಮೊಗ್ಗದ 2ನೇ ಜೆಎಂಎಫ್​ಸಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು.

ಸದ್ಯ ನ್ಯಾಯಾಲಯ ಆಗಸ್ಟ್ 26ರವರೆಗೆ ಆಸೀಫ್​ನನ್ನು ನ್ಯಾಯಾಂಗ ಬಂಧನದಲ್ಲಿ ಇರಿಸುವಂತೆ ಆದೇಶ ಹೊರಡಿಸಿದೆ.ಆರೀಫ್ ವಾರ್ಡ್​ ನಂ 25 ಪಾಲಿಕೆ ಸದಸ್ಯೆ ಪತಿಯಾಗಿದ್ದು, ಜೊತೆಗೆ ಕನ್ನಡ ಜನಪರ ವೇದಿಕೆ ಸಂಘಟನೆಯ ಪ್ರಮುಖ ಕೂಡಾ ಆಗಿದ್ದಾನೆ.

ಈ ಸಂಬಂಧ ಶಿವಮೊಗ್ಗ ಎಸ್ ಪಿ ಲಕ್ಷ್ಮಿಪ್ರಸಾದ್ ಮಾತನಾಡಿ ಸಾವರ್ಕರ್ ಭಾವಚಿತ್ರಕ್ಕೆ ಅಗೌರವ ತೋರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಷರೀಫ್ ಅಲಿಯಾಸ್ ಅಸಿಫ್‌ ಎಂಬಾತನನ್ನು ಬಂಧಿಸಲಾಗಿದೆ. ಷರೀಫ್​ಗೆ ಆಗಸ್ಟ್ 26ರವರೆಗೆ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ. ನಿನ್ನೆ ಷರೀಫ್ ವಿರುದ್ಧ ಪ್ರಕರಣ ದಾಖಲಾದ ಬೆನ್ನಲ್ಲೇ ಬಂಧಿಸಿದ್ದೇವೆ. ಆಗಸ್ಟ್ 16ಕ್ಕೆ ಷರೀಫ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ ಎಂದು ಹೇಳಿದ್ದಾರೆ.

ನಡೆದಿದ್ದೇನು? ನಿನ್ನೆ (ಆಗಸ್ಟ 13) ಜಿಲ್ಲೆಯ ಸಿಟಿ ಸೆಂಟರ್ ಮಾಲ್​​ನಲ್ಲಿ 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರ ಹಾಕಿ ಅಲಂಕರಿಸಲಾಗಿತ್ತು. ಭಾವಚಿತ್ರಗಳ ಮಧ್ಯದಲ್ಲಿ ವಿನಾಯಕ ದಾಮೋದರ ಸಾವರ್ಕರ್ ಭಾವಚಿತ್ರ ಗಮನಿಸಿ ಎಂ.ಡಿ.ಷರೀಫ್ ಅಲಿಯಾಸ್ ಆಸೀಫ್ ಆಕ್ರೋಶ ವ್ಯಕ್ತಪಡಿಸಿದ್ದನು.

ವಿನಾಯಕ ದಾಮೋದರ ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರರೇ ಅಲ್ಲ! ಅವರ ಭಾವಚಿತ್ರ ಏಕೆ ಹಾಕಿದ್ದೀರಿ‌ ಎಂದು ಎಸ್ಡಿಪಿಐ ಕಾರ್ಯಕರ್ತ ಆಸೀಫ್ ಆಕ್ರೋಶ ಹೊರಹಾಕಿದ್ದಾರೆ. ಬ್ರಿಟೀಷರಿಗೆ ಕ್ಷಮಾಪಣಾ ಪತ್ರ ಬರೆದುಕೊಟ್ಟು ಬಂದ ಸಾವರ್ಕರ್ ಹೇಗೆ ಸ್ವಾತಂತ್ರ್ಯ ಹೋರಾಟಗಾರನಾಗಲು ಸಾಧ್ಯ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾನೆ.

ಎಸ್​ಡಿಪಿಐ ಕಾರ್ಯಕರ್ತರ ವಿರುದ್ಧ ಬಿಜೆಪಿ ಪ್ರತಿಭಟನೆ

ಎಸ್​ಡಿಪಿಐ ಕಾರ್ಯಕರ್ತರ ಆಕ್ರೋಶ ಬೆನ್ನಲ್ಲೆ  ನಿನ್ನೆ ಸಿಟಿ ಸೆಂಟರ್ ಮಾಲ್ ಎದುರು ಬಿಜೆಪಿ ಪ್ರತಿಭಟನೆ ಮಾಡಿದೆ. ನಿನ್ನೆ ಮಧ್ಯಾಹ್ನ ಸಿಟಿ ಸೆಂಟರ್ ಮಾಲ್​ನಲ್ಲಿ ಪ್ರತಿಭಟನೆ ನಡೆಸಿ ಸಾವರ್ಕರ್ ಭಾವಚಿತ್ರ ತೆಗೆಯುವಂತೆ ಎಸ್ ಡಿಪಿಐ ಕಾರ್ಯಕರ್ತರು ಒತ್ತಾಯಿಸಿದ್ದರು. ಈ ವೇಳೆ ಎಸ್​ಡಿಪಿಐ ಕಾರ್ಯಕರ್ತರು ಅವಾಚ್ಯ ಶಬ್ದಗಳನ್ನು ಬಳಸಿದ್ದರು. ಹೀಗಾಗಿ ಎಸ್​ಡಿಪಿಐ ಕಾರ್ಯಕರ್ತರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವಂತೆ ಬಿಜೆಪಿ ಪ್ರತಿಭಟನೆ ನಡೆಸಿತು.

ಎಸ್​ಡಿಪಿಐ ಕಾರ್ಯಕರ್ತರನ್ನು ಗಡಿಪಾರು ಮಾಡುವಂತೆ ಆಗ್ರಹಿಸಿದೆ. ಶಿವಮೊಗ್ಗ ಮಹಾನಗರ ಪಾಲಿಕೆಯಿಂದಲೇ ಸಿಟಿ ಸೆಂಟರ್ ಮಾಲ್‌ ನಲ್ಲಿ ಸ್ವಾತಂತ್ರ ಹೋರಾಟಗಾರರ ಭಾವಚಿತ್ರ ಪ್ರದರ್ಶನ ಆಯೋಜಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:10 pm, Sun, 14 August 22

ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್