AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಟಿಪ್ಪರ್‌, ಓಮ್ನಿ ನಡುವೆ ಡಿಕ್ಕಿ; 6 ಜನರಿಗೆ ಗಂಭೀರ ಗಾಯ

ಪ್ರತ್ಯೇಕ ಅಪಘಾತಗಳು ನಡೆದಿದ್ದು, ಶಿವಮೊಗ್ಗ ಜಿಲ್ಲೆಯ ಹೊಸನಗರ(Hosanagara) ತಾಲೂಕಿನ ಎಂ.ಗುಡ್ಡೆಕೊಪ್ಪ ಬಳಿ ಟಿಪ್ಪರ್‌ ಮತ್ತು ಓಮ್ನಿ ನಡುವೆ ಡಿಕ್ಕಿಯಾಗಿ ಹೊಸನಗರ ತಾಲೂಕಿನ ಬುಲ್ಡೋಜರ್ ಗುಡ್ಡ ಗ್ರಾಮದ 6 ಜನರಿಗೆ ಗಂಭೀರ ಗಾಯವಾದ ಘಟನೆ ನಡೆದರೆ, ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅತ್ತೂರು ಬಳಿ ಬೈಕ್​ ಸ್ಕಿಡ್​ ಆಗಿ ಬಿದ್ದು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ಶಿವಮೊಗ್ಗ: ಟಿಪ್ಪರ್‌, ಓಮ್ನಿ ನಡುವೆ ಡಿಕ್ಕಿ; 6 ಜನರಿಗೆ ಗಂಭೀರ ಗಾಯ
ಸಾಂದರ್ಭಿಕ ಚಿತ್ರ
Basavaraj Yaraganavi
| Edited By: ಕಿರಣ್ ಹನುಮಂತ್​ ಮಾದಾರ್|

Updated on:Feb 22, 2024 | 9:25 PM

Share

ಶಿವಮೊಗ್ಗ, ಫೆ.22: ಟಿಪ್ಪರ್‌ ಮತ್ತು ಓಮ್ನಿ ನಡುವೆ ಡಿಕ್ಕಿಯಾಗಿ ಹೊಸನಗರ ತಾಲೂಕಿನ ಬುಲ್ಡೋಜರ್ ಗುಡ್ಡ ಗ್ರಾಮದ 6 ಜನರಿಗೆ ಗಂಭೀರ ಗಾಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ(Hosanagara) ತಾಲೂಕಿನ ಎಂ.ಗುಡ್ಡೆಕೊಪ್ಪ ಬಳಿ ನಡೆದಿದೆ. ಗಾಯಾಳುಗಳಿಗೆ ಹೊಸನಗರ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಕಾರಿನಲ್ಲಿ 4 ಜನ ಮಹಿಳೆಯರು, 2 ಮಂದಿ ಪುರುಷರು, 4 ಗಂಡು ಮಕ್ಕಳು, ಇಬ್ಬರು ಹೆಣ್ಣು ಮಕ್ಕಳ ಪ್ರಯಾಣ ಮಾಡುತ್ತಿದ್ದರು ಈ ವೇಳೆ ಅವಘಡ ಸಂಭವಿಸಿದೆ. ಸ್ಥಳಕ್ಕೆ ಹೊಸನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೈಕ್ ಸ್ಕಿಡ್ ಆಗಿ ವಿದ್ಯಾರ್ಥಿ ಸಾವು

ಉಡುಪಿ: ಕಾರ್ಕಳ ತಾಲೂಕಿನ ಅತ್ತೂರು ಬಳಿ ಬೈಕ್​ ಸ್ಕಿಡ್​ ಆಗಿ ಬಿದ್ದು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಆಕಾಶ್ ಕಾಂಚನ್(18) ಮೃತ ವ್ಯಕ್ತಿ. ಮತ್ತೋರ್ವ ವಿದ್ಯಾರ್ಥಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಆಕಾಶ್​ ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದ.​ ಕಾಲೇಜಿಗೆ ಹೋಗುವಾಗ ಪರ್ಪಲೆ ಗುಡ್ಡದ ತಿರುವಿನಲ್ಲಿ ಈ ದುರ್ಘಟನೆ ಸಂಭವಿಸಿದೆ. ಅತೀವೇಗವಾಗಿ ಬೈಕ್ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಈ ಕುರಿತು ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಪ್ರತ್ಯೇಕ ಅಪಘಾತ; ತಂದೆಗೆ ಚಿಕಿತ್ಸೆ ಕೊಡಿಸಬೇಕಿದ್ದವ, ಹೆತ್ತ ಮಗು ನೋಡಲು ಹೋಗ್ತಿದವರು ಸೇರಿ ನಾಲ್ವರು ಸಾವು

ಮದ್ಯಪಾನ ಮಾಡದಂತೆ ಬುದ್ದಿಹೇಳಿದಕ್ಕೆ ಯುವಕ ಆತ್ಮಹತ್ಯೆ

ರಾಯಚೂರು: ಮದ್ಯಪಾನ ಮಾಡದಂತೆ ಪೋಷಕರು ಬುದ್ದಿ ಹೇಳಿದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾನ್ವಿ ಪಟ್ಟಣದಲ್ಲಿ ನಡೆದಿದೆ. ಆದರ್ಶ(24) ಮನನೊಂದು ಆತ್ಮಹತ್ಯೆಗೆ ಶರಣಾದ ಯುವಕ. ನಿತ್ಯ ಮದ್ಯಪಾನ ಮಾಡಿ ಮನೆಗೆ ಬರುತ್ತಿದ್ದ ಮೃತ ಆದರ್ಶ, ಇದೇ ವಿಚಾರಕ್ಕೆ ಫೋಷಕರು ಬೈದು ಬುದ್ದಿ ಹೇಳಿದ್ದರು. ಬುದ್ದಿವಾದವನ್ನೇ ಅವಮಾನ ಎಂದು ತಿಳಿದು ಮನೆ ಬಾತ್​​ ರೂಂನಲ್ಲಿನ ಪೈಪ್​​ಗೆ ಹಗ್ಗ ಕಟ್ಟಿ ನೇಣಿಗೆ ಶರಣಾಗಿದ್ದಾನೆ. ಈ ಘಟನೆ ಮಾನ್ವಿ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:17 pm, Thu, 22 February 24

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ