AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕೌಂಟ್​​​​ನಿಂದ ಹಣ ಕಡಿತ: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾಗೆ ದಂಡ ವಿಧಿಸಿದ ಶಿವಮೊಗ್ಗ ಗ್ರಾಹಕ ಆಯೋಗ

ಏಕಾಏಕಿ ಗ್ರಾಹಕ ಖಾತೆಗಳಿಂದ ಹಣ ಕಟ್ಟಾಗುವ ಪ್ರಕರಣಗಳು ಹೆಚ್ಚುತ್ತಿವೆ. ಗ್ರಾಹಕರು ಏನು ಮಾಡದಿದ್ದರೂ ಸಹ ತನ್ನಷ್ಟಕ್ಕೆ ತಾನೇ ಅಕೌಂಟ್​​​​ನಿಂದ ಹಣ ಕಡಿತವಾಗುತ್ತೆ. ಅದರಂತೆ ತಮಕೂರಿನಲ್ಲಿ ಗ್ರಾಹಕರೊಬ್ಬರ ಖಾತೆಯಿಂದ ಹಣ ಕಡಿತವಾಗಿದ್ದು, ಇದನ್ನು ಪ್ರಶ್ನಿಸಿ ನೀಡಲಾಗಿದ್ದ ದೂರಿನ ಅರ್ಜಿ ವಿಚಾರಣೆ ನಡೆಸಿದ ಶಿವಮೊಗ್ಗ ಗ್ರಾಹಕರ ಆಯೋಗ ಬ್ಯಾಂಕ್​​​ಗೆ ದಂಡ ವಿಧಿಸಿದೆ. ಏನಿದು ಪ್ರಕರಣ ಎನ್ನುವುದನ್ನ ತಿಳಿದುಕೊಳ್ಳಿ

ಅಕೌಂಟ್​​​​ನಿಂದ ಹಣ ಕಡಿತ: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾಗೆ ದಂಡ ವಿಧಿಸಿದ ಶಿವಮೊಗ್ಗ ಗ್ರಾಹಕ ಆಯೋಗ
ಪ್ರಾತಿನಿಧಿಕ ಚಿತ್ರ
ರಮೇಶ್ ಬಿ. ಜವಳಗೇರಾ
|

Updated on: Aug 19, 2026 | 7:58 PM

Share

ಶಿವಮೊಗ್ಗ (ಆಗಸ್ಟ್,19): ಗ್ರಾಹಕರ (consumer) ಅನುಮತಿಯಿಲ್ಲದೆ ಖಾತೆಯಿಂದ (Account)  ಹಣ ಕಡಿತಗೊಂಡು, ದೂರು ನೀಡಿದರೂ ಬಾಕಿ ಹಣ ಹಿಂತಿರುಗಿಸದೆ ಸೇವಾ ನ್ಯೂನತೆ ಎಸಗಿದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ವಿರುದ್ಧ ಶಿವಮೊಗ್ಗ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ಮಹತ್ವದ ತೀರ್ಪು ನೀಡಿದ್ದು, ಬಡ್ಡಿ ಸಮೇತ ಹಣ ಪಾವತಿಸಲು ಮತ್ತು ದಂಡ ವಿಧಿಸಿ ಆದೇಶಿಸಿದೆ. ಶಿವಮೊಗ್ಗ ನಗರದ ನಂದಿನಿ ಬಡಾವಣೆಯ ನಿವಾಸಿ ಜೂಲಿ ಎಸ್.ಪಿ. ಅವರು ವಿನೋಬನಗರದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿನ ಉಳಿತಾಯ ಖಾತೆಯಿಂದ ಏಕಾಏಕಿ 7,00,000 ರೂ. ಕಡಿತವಾಗಿದ್ದು, ಇದನ್ನು ಪ್ರಶ್ನಿಸಿ ಗ್ರಾಹಕರು ಶಿವಮೊಗ್ಗ ಜಿಲ್ಲಾ ಗ್ರಾಹಕ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಗ್ರಾಹಕ ಆಯೋಗ, ವಾರ್ಷಿಕ ಶೇ. 8 ರಷ್ಟು ಬಡ್ಡಿಯೊಂದಿಗೆ 45 ದಿನಗಳ ಒಳಗೆ ಪಾವತಿಸಬೇಕು ಎಂದು ಬ್ಯಾಂಕ್​​​​ಗೆ ಸೂಚಿಸಿ ಆದೇಶ ಹೊರಡಿಸಿದೆ.

ಪ್ರಕರಣದ ಹಿನ್ನೆಲೆ

ಶಿವಮೊಗ್ಗ ನಗರದ ನಂದಿನಿ ಬಡಾವಣೆಯ ನಿವಾಸಿ ಜೂಲಿ ಎಸ್.ಪಿ. ಅವರು ವಿನೋಬನಗರದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಉಳಿತಾಯ ಖಾತೆ ಹೊಂದಿದ್ದರು. 2024 ರ ಮೇ 3, ರಂದು ಅವರ ಖಾತೆಯಿಂದ ಮೂರು ಬಾರಿ ವ್ಯವಹಾರ ನಡೆದು ಒಟ್ಟು 7,00,000 ರೂ. ಕಡಿತವಾಗಿರುವ ಬಗ್ಗೆ ಮೊಬೈಲ್‌ಗೆ ಸಂದೇಶ ಬಂದಿತ್ತು. ತಾವು ಯಾವುದೇ ಒಟಿಪಿ ಹಂಚಿಕೊಳ್ಳದಿದ್ದರೂ ಹಾಗೂ ಯಾವುದೇ ವ್ಯವಹಾರ ಮಾಡದಿದ್ದರೂ ಹಣ ಕಡಿತವಾಗಿದ್ದರಿಂದ, ದೂರುದಾರರು ತಕ್ಷಣವೇ ಬ್ಯಾಂಕ್ ವ್ಯವಸ್ಥಾಪಕರನ್ನು ಸಂಪರ್ಕಿಸಿ ಹಣ ಮರುಜಮೆ ಮಾಡುವಂತೆ ಮನವಿ ಮಾಡಿದ್ದರು. ಬ್ಯಾಂಕ್‌ ಕಡೆಯಿಂದ ಸೂಕ್ತ ಸ್ಪಂದನೆ ಸಿಗದಿದ್ದಾಗ, ಅವರು 2024 ರ ಅಕ್ಟೋಬರ್ 25 ರಂದು ಕಾನೂನು ನೋಟೀಸ್ ನೀಡಿದ್ದರು. ತದನಂತರ ಬ್ಯಾಂಕ್ 2024 ರ ನವೆಂಬರ್ 30 ರಂದು 2,33,333 ರೂ. ಗಳನ್ನು ಮಾತ್ರ ದೂರುದಾರರ ಖಾತೆಗೆ ಜಮಾ ಮಾಡಿ, ಉಳಿದ ಮೊತ್ತವನ್ನು ಹಿಂತಿರುಗಿಸಿರಲಿಲ್ಲ. ಈ ಕುರಿತು ಗ್ರಾಹಕರು ಶಿವಮೊಗ್ಗ ಜಿಲ್ಲಾ ಗ್ರಾಹಕ ಆಯೋಗಕ್ಕೆ ದೂರು ಸಲ್ಲಿಸಿದ್ದರು.

ಇದನ್ನೂ ಓದಿ: ಅಪ್ರಾಪ್ತ ಬಾಲಕನಿಗೆ ಬೈಕ್ ಕೊಟ್ಟ ಮಾಲೀಕನಿಗೆ ಬಿತ್ತು ಬರೋಬ್ಬರಿ 27000 ರೂ.ದಂಡ!, ಇರಲಿ ಎಚ್ಚರ!

ಆಯೋಗದ ತೀರ್ಪು

ದೂರುದಾರರು ಸಲ್ಲಿಸಿದ ಪ್ರಮಾಣಪತ್ರ, ದಾಖಲೆಗಳು ಹಾಗೂ ಉಭಯ ಪಕ್ಷಗಳ ವಾದ-ವಿವಾದಗಳನ್ನು ಆಲಿಸಿದ ಆಯೋಗವು ಬ್ಯಾಂಕ್ ಕಡೆಯಿಂದ ಸೇವಾ ನ್ಯೂನತೆಯಾಗಿದೆ ಎಂದು ತೀರ್ಮಾನಿಸಿ, ಭಾಗಶಃ ದೂರು ಪುರಸ್ಕರಿಸಿ ಆ. 14 ರಂದು ಆದೇಶ ಹೊರಡಿಸಿದೆ. ಬ್ಯಾಂಕ್‌ನಿಂದ ಗ್ರಾಹಕರಿಗೆ ಬರಬೇಕಾದ ಬಾಕಿ ಮೊತ್ತ ರೂ.4,66,667 ಗಳನ್ನು 2024 ರ ಅಕ್ಟೋಬರ್ 25 ರಿಂದ ಅನ್ವಯವಾಗುವಂತೆ ವಾರ್ಷಿಕ ಶೇ. 8 ರಷ್ಟು ಬಡ್ಡಿಯೊಂದಿಗೆ 45 ದಿನಗಳ ಒಳಗೆ ಪಾವತಿಸಬೇಕು ಎಂದು ಸೂಚಿಸಿದೆ.

ನಷ್ಟ ಪರಿಹಾರ

ಮಾನಸಿಕ ಕಿರುಕುಳ ಮತ್ತು ವೇದನೆಗಾಗಿ ರೂ.25,000 ಹಾಗೂ ವ್ಯಾಜ್ಯದ ವೆಚ್ಚವಾಗಿ ರೂ.10,000 ಗಳನ್ನು 45 ದಿನಗಳ ಒಳಗೆ ಪಾವತಿಸತಕ್ಕದ್ದು. ನಿಗದಿತ 45 ದಿನಗಳ ಒಳಗೆ ಮೊತ್ತ ಪಾವತಿಸಲು ವಿಫಲವಾದಲ್ಲಿ, ಸಂಪೂರ್ಣ ಮೊತ್ತಕ್ಕೆ ವಾರ್ಷಿಕ ಶೇ. 10 ರಷ್ಟು ಬಡ್ಡಿ ಸೇರಿಸಿ ಪೂರ್ತಿ ಹಣ ಪಾವತಿಸುವವರೆಗೆ ನೀಡುವುದು ಕಡ್ಡಾಯ. ಆಯೋಗದ ಅಧ್ಯಕ್ಷರಾದ ಟಿ. ಶಿವಣ್ಣ ಮತ್ತು ಸದಸ್ಯರಾದ ಬಿ.ಡಿ. ಯೋಗಾನಂದ ಭಾಂಡ್ಯ ಅವರಿದ್ದ ಪೀಠವು ಈ ಆದೇಶ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ