Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಾಯುಕ್ತ ಬಲೆಗೆ ಬಿದ್ದ ಶಿವಮೊಗ್ಗ ಮಹಾನಗರ ಪಾಲಿಕೆ ಕಚೇರಿ ಎಫ್​ಡಿಎ

ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ಸಿಂಹಸ್ವಪ್ನ ಆಗಿರುವ ಲೋಕಾಯುಕ್ತ ಇಲಾಖೆ, ಇಂದು ರಾಜ್ಯದ ಶಿವಮೊಗ್ಗ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದು, ಲಂಚ ಪಡೆಯುವಾಗ ಓರ್ವ ಎಫ್​ಡಿಎ ಹಾಗೂ ಮತ್ತೋರ್ವ ಗ್ರಾಮ ಪಂಚಾಯತಿ ಕಾರ್ಯದರ್ಶಿ ರೆಡ್​ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಲೋಕಾಯುಕ್ತ ಬಲೆಗೆ ಬಿದ್ದ ಶಿವಮೊಗ್ಗ ಮಹಾನಗರ ಪಾಲಿಕೆ ಕಚೇರಿ ಎಫ್​ಡಿಎ
ಶಿವಮೊಗ್ಗದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
Follow us
Basavaraj Yaraganavi
| Updated By: ಕಿರಣ್ ಹನುಮಂತ್​ ಮಾದಾರ್

Updated on:Feb 06, 2024 | 4:03 PM

ಶಿವಮೊಗ್ಗ, ಫೆ.06: ಶಿವಮೊಗ್ಗ(Shivamogga) ಮಹಾನಗರ ಪಾಲಿಕೆ ಕಚೇರಿಯಲ್ಲಿ ಲಂಚ ಪಡೆಯುವಾಗ ಎಫ್​ಡಿಎ ಅಧಿಕಾರಿ ಲೋಕಾಯುಕ್ತ (Lokayukta) ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ. ಪಾಲಿಕೆ ಜನನ ಮತ್ತು ಮರಣ ನೋಂದಣಾಧಿಕಾರಿ ಕಚೇರಿಯಲ್ಲಿ ಎಫ್‌ಡಿಎ ಅಧಿಕಾರಿ ಆಗಿರುವ ನಾಗರಾಜ್ ಅವರು ಜನನ ಪ್ರಮಾಣ ಪತ್ರ ನೀಡಲು 1 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, ಅದನ್ನು ಪಡೆಯುವಾಗ ಸಿಕ್ಕಿಬಿದ್ದಿದ್ದಾನೆ. ಇನ್ನು ಗಿರೀಶ್ ಎಂಬುವವರು ಈ ಕುರಿತು ಲೋಕಾಯುಕ್ತಕ್ಕೆ  ದೂರು ನೀಡಿದ್ದರು. ಅದರಂತೆ ಇಂದು ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ DySP ಉಮೇಶ್ ಈಶ್ವರ್ ನಾಯ್ಕ ನೇತೃತ್ವದಲ್ಲಿ ದಾಳಿ ನಡೆಸಿ ಬಂಧಿಸಿದ್ದಾರೆ.

ಕಲಬುರಗಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ; ಗ್ರಾ.ಪಂಚಾಯತಿ ಕಾರ್ಯದರ್ಶಿ ಲೋಕಾ ಬಲೆಗೆ

ಕಲಬುರಗಿ: ಕಲಬುರಗಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಮರತೂರ ಗ್ರಾಮ ಪಂಚಾಯತಿ ಕಾರ್ಯದರ್ಶಿ ಅಶೋಕ್ ಪಡಶೆಟ್ಟಿ ಎಂಬುವವರು ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸೈಟ್ ಮ್ಯೂಟೆಶನ್ ಮಾಡಿಕೊಡಲು 20 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, ಅದನ್ನು ಕಲಬುರಗಿ ನಗರದ ಲಾಲ್ ಗೇರಿ ಕ್ರಾಸ್ ಬಳಿಯ ಹೊಟೇಲ್​ನಲ್ಲಿ ಪಡೆಯುವಾಗ ಲೋಕಾಯುಕ್ತ ಡಿವೈಎಸ್​ಪಿ ಗೀತಾ ಅವರ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ ರೆಡ್ ಹ್ಯಾಂಡ್ ಸಿಕ್ಕಿಬಿದ್ದಿದ್ದು, ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ:ಭ್ರಷ್ಟ ಸರ್ಕಾರೀ ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮುಂದುವರಿಸಿದ ಲೋಕಾಯುಕ್ತ, ರೇಡಾರ್ ನಲ್ಲಿ 10 ಅಧಿಕಾರಿಗಳು

ಮದುವೆ ಹಾಲ್ ನಲ್ಲಿ ನಗದು ಇದ್ದ ಬ್ಯಾಗ್ ಕಳವು; ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ಉಡುಪಿ: ಬ್ರಹ್ಮಾವರ ತಾಲೂಕಿನ ಫ್ಯಾಮಿಲಿ ಶಯಾನ ಹಾಲ್​ನಲ್ಲಿ 2.40 ಲಕ್ಷ ಹಣ ಇದ್ದ ಬ್ಯಾಗ್ ಕಳ್ಳತನವಾಗಿದೆ. ನೀಲಾವರ ಮೂಲದ ಜಯಶ್ರೀ ಸುರೇಶ್ ಎಂಬುವರ ಮಗಳ ಮದುವೆ ಕಾರ್ಯಕ್ರಮದಲ್ಲಿ ನಗದು ಇರುವ ಬ್ಯಾಗ್ ಸ್ಟೇಜ್​ನ ಕುರ್ಚಿಯಲ್ಲಿಟ್ಟು ಫೋಟೋ ತೆಗೆಸಿಕೊಳ್ಳಲು ತೆರಳಿದಾಗ ನಗದು ಇದ್ದ ಬ್ಯಾಗ್ ಕಳ್ಳತನವಾಗಿದೆ. ಇನ್ನು ಬ್ಯಾಗ್ ಕಳ್ಳರ ಕೈಚಳಕ ಹಾಲ್​ನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಬ್ರಹ್ಮಾವರದ ಪೊಲೀಸ್ ‌ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು  ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:46 pm, Tue, 6 February 24