AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga Airport: ಶಿವಮೊಗ್ಗ ವಿಮಾನ ನಿಲ್ದಾಣ ಕಣ್ತುಂಬಿಕೊಳ್ಳಲು ಮುಗಿಬೀಳುತ್ತಿರುವ ಜನ; ಜನರ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ

ಇಷ್ಟು ದಿನ ಕಾಮಗಾರಿ ಒಳಗೆ ನಡೆಯುವ ಸ್ಥಳಕ್ಕೆ ಯಾರನ್ನು ಬಿಡದ ಅಧಿಕಾರಿಗಳು ಪ್ರಚಾರದ ಗೀಳು ಬಯಸಿ ಒಳ ಬಿಟ್ಟುಕೊಂಡಿದ್ದರು. ಯಾವಾಗ ಸಾಮಾಜಿಕ ಜಾಲತಾಣಗಳಲ್ಲಿ ಅಧಿಕಾರಿಗಳ ವಿರುದ್ಧ ಆಕ್ಷೇಪ ವ್ಯಕ್ತವಾಯಿತೋ, ಶಿವಮೊಗ್ಗ ಜಿಲ್ಲಾಧಿಕಾರಿ ಆರ್. ಸೆಲ್ವಮಣಿ ಪ್ರವೇಶ ನಿಷೇಧಗೊಳಿಸಿ ಆದೇಶ ಹೊರಡಿಸಿದ್ದಾರೆ.

Shivamogga Airport: ಶಿವಮೊಗ್ಗ ವಿಮಾನ ನಿಲ್ದಾಣ ಕಣ್ತುಂಬಿಕೊಳ್ಳಲು ಮುಗಿಬೀಳುತ್ತಿರುವ ಜನ; ಜನರ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ
ಶಿವಮೊಗ್ಗ ವಿಮಾನ ನಿಲ್ದಾಣ
Follow us
TV9 Web
| Updated By: ಆಯೇಷಾ ಬಾನು

Updated on:Jan 25, 2023 | 7:02 AM

ಶಿವಮೊಗ್ಗದಿಂದ 20km ದೂರದಲ್ಲಿರುವ ಸೋಗಾನೆ ಎಂಬಲ್ಲಿ ನಿರ್ಮಾಣವಾಗಿರುವ, ಶಿವಮೊಗ್ಗ ವಿಮಾನ ನಿಲ್ದಾಣ ಮುಂದಿನ ತಿಂಗಳು 27ನೇ ತಾರೀಕಿನಂದು ಪ್ರಧಾನಿ ಮೋದಿ ಅವರಿಂದ ಉದ್ಘಾಟನೆ ಆಗಲಿದೆ. ಇದನ್ನ ಅಧಿಕೃತವಾಗಿ ಮಾಜಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ಈಗಾಗಲೇ ರಾಜಕಾರಣಿಗಳು ದಂಡು ಪದೇಪದೇ ಭೇಟಿ ನೀಡುತ್ತಾ ವಿಮಾನ ನಿಲ್ದಾಣಕ್ಕೆ ಹೆಚ್ಚು ಪ್ರಚಾರ ತಂದುಕೊಡುತ್ತಾ, ಫೊಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಾ, ಅಭಿವೃದ್ಧಿ ಸಂಕೇತ ಎಂದು ಒಕ್ಕಣೆ ಬರೆದು ಪೋಸ್ಟ್ ಮಾಡುತ್ತಿದ್ದರು‌. ಇದು ಜನರ ಆಕರ್ಷಣೆಗೂ ಕಾರಣವಾಗುತ್ತಿತ್ತು. ಇವುಗಳಿಂದ ಆಕರ್ಷಿತರಾದ ಸಾಮಾನ್ಯ ಜನರು ತಮ್ಮೂರಿನ ವಿಮಾನ ನಿಲ್ದಾಣ ನೋಡಲು ಜಾತ್ರೆಯಂತೆ ಸೇರುತ್ತಿದ್ದರು. ಹೇಗೋ ಪ್ರಚಾರವನ್ನೇ ಬಯಸಿಕೊಂಡಿದ್ದ ಬಿಜೆಪಿ ನಾಯಕರು ಕೂಡ ಜನರನ್ನ ಪರೋಕ್ಷವಾಗಿ ಒಳ ಬಿಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂಬ ಅನುಮಾನಗಳು ಮೂಡತೊಡಗಿದವು. ಪ್ರತಿದಿನ ನೂರಾರು ಕುಟುಂಬಗಳು ವಾಹನಗಳು ಬೈಕ್ ಗಳು ಯೂಟ್ಯೂಬರ್ ಗಳು ಉದ್ಘಾಟನೆಯಾಗದ ವಿಮಾನ ನಿಲ್ದಾಣದ ಒಳಗೆ, ರನ್ ವೇ ಮೇಲೆ ಫೋಟೋಶೂಟ್ ನಡೆಸುತ್ತಿದ್ದರು.

Shivamogga Airport

ಇಷ್ಟು ದಿನ ಕಾಮಗಾರಿ ಒಳಗೆ ನಡೆಯುವ ಸ್ಥಳಕ್ಕೆ ಯಾರನ್ನು ಬಿಡದ ಅಧಿಕಾರಿಗಳು ಪ್ರಚಾರದ ಗೀಳು ಬಯಸಿ ಒಳ ಬಿಟ್ಟುಕೊಂಡಿದ್ದರು. ಯಾವಾಗ ಸಾಮಾಜಿಕ ಜಾಲತಾಣಗಳಲ್ಲಿ ಅಧಿಕಾರಿಗಳ ವಿರುದ್ಧ ಆಕ್ಷೇಪ ವ್ಯಕ್ತವಾಯಿತೋ, ಶಿವಮೊಗ್ಗ ಜಿಲ್ಲಾಧಿಕಾರಿ ಆರ್. ಸೆಲ್ವಮಣಿ ಪ್ರವೇಶ ನಿಷೇಧಗೊಳಿಸಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: ಮೀಸಲಾತಿ ಉಳಿಸಿಕೊಳ್ಳಲು ಈಡಿಗರ ಹೋರಾಟ, ಪ್ರಬಲ ಜಾತಿಗಳಿಗೆ 2ಎ ಮೀಸಲಾತಿ ನೀಡದಂತೆ ಆಗ್ರಹ

ನಗರದ ಹೊರ ವಲಯದ ಸೋಗಾನೆಯಲ್ಲಿ ನಿರ್ಮಾಣಗೊಂಡಿರುವ ವಿಮಾನ ನಿಲ್ದಾಣಕ್ಕೆ ಸುರಕ್ಷತಾ ಹಿನ್ನೆಲೆಯಲ್ಲಿ ಅನುಮತಿ ಇಲ್ಲದೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ವಿಮಾನ ನಿಲ್ದಾಣದ ಕಾಮಗಾರಿಗಳು ಅಂತಿಮ ಹಂತದಲ್ಲಿದ್ದು, ಕೆಲವೇ ದಿನಗಳಲ್ಲಿ ಕೇಂದ್ರದಿಂದ ಡಿಜಿಸಿಎ ತಂಡ ಪರಿಶೀಲನೆಗೆ ಆಗಮಿಸಲಿದೆ. ಇದಲ್ಲದೆ ವಿಮಾನ ನಿಲ್ದಾಣದಲ್ಲಿರುವ ಸೂಕ್ಷ್ಮ ಉಪಕರಣಗಳ ಸುರಕ್ಷತೆಯ ಹಿನ್ನೆಲೆಯಲ್ಲಿ ಮತ್ತು ಕಾಮಗಾರಿಗಳಿಗೆ ತೊಡಕಾಗದಂತೆ, ಸಾರ್ವಜನಿಕರ ಪ್ರವೇಶವನ್ನು ಉದ್ಘಾಟನೆ ಆಗುವವರೆಗೆ ನಿರ್ಬಂಧಿಸಲಾಗಿದೆ. ಸಾರ್ವಜನಿಕರು ಸಹಕರಿಸಬೇಕು. ನೂತನ ವಿಮಾನ ನಿಲ್ದಾಣ ವೀಕ್ಷಣೆಗೆ ನೂರಾರು ಜನರು ಆಗಮಿಸಿ, ರನ್‍ವೇಯಲ್ಲಿ ವಾಹನ ಚಲಾಯಿಸುತ್ತಿರುವ ಬಗ್ಗೆ ದೂರುಗಳು ಬಂದಿದ್ದಕ್ಕಾಗಿ ಆದೇಶ ಹೊರಡಿಸಲಾಗಿದೆ ಎಂದು ಡಿಸಿ ಆದೇಶ ಹೊರಡಿಸಿದ್ದಾರೆ.

ಉದ್ಘಾಟನೆಯಾಗದ ವಿಮಾನ ನಿಲ್ದಾಣದಲ್ಲಿ ಜನರನ್ನ ಜಾತ್ರೆಯಂತೆ ಬಿಟ್ಟುಕೊಂಡು, ಕೊನೆಗೂ ಎಚ್ಚೆತ್ತ ಜಿಲ್ಲಾಡಳಿತ ಈ ಆದೇಶ ಹೊರಡಿಸಿದೆ.

ವರದಿ: ಬಸವರಾಜ್ ಯರಗಣವಿ, ಟಿವಿ9 ಶಿವಮೊಗ್ಗ

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:02 am, Wed, 25 January 23

Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್