AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋಗ ಜಲಪಾತ ವೀಕ್ಷಣೆ ನಿರ್ಬಂಧ ತೆರವು: ಹೊಸ ವರ್ಷಕ್ಕೆ ಪ್ರವಾಸಿಗರಿಗೆ ಶಿವಮೊಗ್ಗ ಜಿಲ್ಲಾಡಳಿತ ಗಿಫ್ಟ್

ಹೊಸ ವರ್ಷಕ್ಕೆ ಪ್ರವಾಸಿಗರಿಗೆ ಶಿವಮೊಗ್ಗ ಜಿಲ್ಲಾಡಳಿತ ಗಿಫ್ಟ್ ನೀಡಿದ್ದು ಜೋಗ ನಿರ್ವಹಣಾ ಪ್ರಾಧಿಕಾರದ ಮುಖ್ಯ ದ್ವಾರವನ್ನು ಹೊರತುಪಡಿಸಿ ಉಳಿದ ಪರ್ಯಾಯ ಸ್ಥಳಗಳಿಂದ ಜಲಪಾತ ವೀಕ್ಷಣೆಗೆ ಅವಕಾಶ ನೀಡಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಸದ್ಯ, ಜೋಗ ಜಲಪಾತವನ್ನು ಎಲ್ಲಿಂದೆಲ್ಲ ವೀಕ್ಷಣೆ ಮಾಡಬಹುದು ಎಂಬ ಮಾಹಿತಿ ಇಲ್ಲಿದೆ.

ಜೋಗ ಜಲಪಾತ ವೀಕ್ಷಣೆ ನಿರ್ಬಂಧ ತೆರವು: ಹೊಸ ವರ್ಷಕ್ಕೆ ಪ್ರವಾಸಿಗರಿಗೆ ಶಿವಮೊಗ್ಗ ಜಿಲ್ಲಾಡಳಿತ ಗಿಫ್ಟ್
ಜೋಗ ಜಲಪಾತ
ಗಣಪತಿ ಶರ್ಮಾ
|

Updated on: Dec 30, 2024 | 8:07 AM

Share

ಶಿವಮೊಗ್ಗ, ಡಿಸೆಂಬರ್ 30: ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಂಡಿರುವ ಕಾರಣ ಜನವರಿ 1 ರಿಂದ ಮಾರ್ಚ್ 15 ರವರೆಗೆ ಜೋಗ ಜಲಪಾತಕ್ಕೆ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಿ ಕೆಲವು ದಿನಗಳ ಹಿಂದೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದರು. ಆದರೆ, ಇದೀಗ ಹೊಸ ವರ್ಷಾಚರಣೆ ಪ್ರಯುಕ್ತ ಜಿಲ್ಲಾಡಳಿತವು ಪ್ರವಾಸಿಗರಿಗೆ ಸಿಹಿ ಸುದ್ದಿ ನೀಡಿದೆ. ಜೋಗ ನಿರ್ವಹಣಾ ಪ್ರಾಧಿಕಾರದ ಮುಖ್ಯ ದ್ವಾರವನ್ನು ಹೊರತುಪಡಿಸಿ ಉಳಿದೆಲ್ಲ ಪರ್ಯಾಯ ಸ್ಥಳಗಳಿಂದ ಪ್ರವಾಸಿಗರಿಗೆ ಜೋಗ ಜಲಪಾತ ವೀಕ್ಷಿಸಲು ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ.

ಯಾವ ಪ್ರದೇಶಗಳಿಂದೆಲ್ಲ ಜೋಗ ನೋಡಬಹುದು?

ಪ್ರವಾಸಿಗರು ವ್ಯೂ ಪಾಯಿಂಟ್, ಯಾತ್ರಿ ನಿವಾಸ, ರಾಣಿ ಫಾಲ್ಸ್, ಮುಂಬೈ ಬಂಗಲೆ ಮೊದಲಾದೆಡೆಯಿಂದ ಜಲಪಾತವನ್ನು ವೀಕ್ಷಿಸಬಹುದು ಎಂದು ಜಿಲ್ಲಾಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರತಿ ವರ್ಷ ಡಿಸೆಂಬರ್ ಕೊನೆಯ ವಾರದಲ್ಲಿ ಜೋಗಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿತ್ತು. ಆದರೆ, ಈ ವರ್ಷ ಪ್ರವೇಶ ನಿಷೇಧಿಸುವ ಮುನ್ನವೇ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿತ್ತು. ಜೋಗ ವೀಕ್ಷಣೆಯ ಸ್ಥಳಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಲಾಗಿದ್ದು, ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಜಂಟಿ ಕಾರ್ಯದರ್ಶಿ ಧರ್ಮಪ್ಪ ತಿಳಿಸಿದ್ದಾರೆ.

ಜೋಗಕ್ಕೆ ಹೋಗುವುದು ಹೇಗೆ?

ಭಾರತದ ಎರಡನೇ ಅತಿ ಎತ್ತರದ ಜಲಪಾತ ಎಂದೇ ಖ್ಯಾತಿವೆತ್ತ ಜೋಗ ಜಲಪಾತ ಕರ್ನಾಟಕ ರಾಜಧಾನಿ ಬೆಂಗಳೂರಿನಿಂದ ಸುಮಾರು 400 ಕಿ.ಮೀ ದೂರದಲ್ಲಿರುವ ಶಿವಮೊಗ್ಗ ಜಿಲ್ಲೆಯಲ್ಲಿದೆ. 253 ಮೀಟರ್ ಆಳಕ್ಕೆ ಧುಮ್ಮಿಕ್ಕುವ ಈ ಜಲಪಾತನವನ್ನು ನೋಡಲು ಕರ್ನಾಟಕದಲ್ಲಿ ಅತಿ ಹೆಚ್ಚು ಪ್ರವಾಸಿಗರು ಭೇಟಿ ನೀಡುತ್ತಾರೆ.

ಇದನ್ನೂ ಓದಿ: ಬಿಸಿಲ ಧಗೆಯಲ್ಲೂ ಪದೇ ಪದೇ ನೋಡಲೇಬೇಕೆನಿಸುವ ಜೋಗದ ಗುಂಡಿ

ಜೋಗ ಜಲಪಾತದಿಂದ 20 ಕಿ.ಮೀ ದೂರದಲ್ಲಿರುವ ತಾಳಗುಪ್ಪದಲ್ಲಿ ರೈಲು ನಿಲ್ದಾಣ ಇದೆ. ಬೆಂಗಳೂರಿನಿಂದ ಪ್ರತಿದಿನ ರೈಲುಗಳ ಸಂಚಾರ ಇದೆ. ಸಾಗರ (40 ಕಿ.ಮೀ) ಮತ್ತು ಶಿವಮೊಗ್ಗ (105 ಕಿ.ಮೀ) ಹತ್ತಿರದ ಪಟ್ಟಣಗಳು. ಜೋಗ ಜಲಪಾತ ಉತ್ತಮ ​​ರಸ್ತೆ ಮತ್ತು ಸಾರ್ವಜನಿಕ ಸಾರಿಗೆ ಸಂಪರ್ಕ ಕೂಡ ಹೊಂದಿವೆ. ಜೋಗ ಜಲಪಾತ ವೀಕ್ಷಣೆ ಜಾಕ್ಕೆ ತೆರಳಲು ಶಿವಮೊಗ್ಗ ಅಥವಾ ಸಾಗರ ಪಟ್ಟಣಗಳಿಂದ ಟ್ಯಾಕ್ಸಿಗಳನ್ನು ಪಡೆಯಬಹುದು. ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಕೂಡ ಇದ್ದು, ಬೇರೆ ರಾಜ್ಯಗಳ ಪ್ರವಾಸಿಗರು ಈನ ಸೌಕರ್ಯವನ್ನೂ ಬಳಸಿಕೊಳ್ಳಬಹುದಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ