ಶಿವಮೊಗ್ಗ ಈದ್ ಮಿಲಾದ್ ಕಲ್ಲು ತೂರಾಟ ಪ್ರಕರಣಕ್ಕಿದೆ PFI ಕೈವಾಡ, 7 ಕಾರ್ಯಕರ್ತರ ವಿರುದ್ಧ ಎಫ್​ಐಆರ್

ರಾಗಿಗುಡ್ಡ ಗಲಭೆ ವೇಳೆ ಯುವಕರಿಗೆ ಪ್ರಚೋದನೆ ನೀಡಿರುವ ಹಿನ್ನೆಲೆ 7 ಜನ ನಿಷೇಧಿತ ಪಿಎಫ್ಐ ಕಾರ್ಯಕರ್ತರ ಮೇಲೆ ಕೇಸ್ ದಾಖಲಾಗಿದೆ. ಈ ಏಳು ಜನ ಸ್ಥಳೀಯ ಯುವಕರಿಗೆ ಉದ್ರಿಕ್ತರಾಗುವಂತೆ ಪ್ರೇರೆಪಿಸಿರುವ ಅಂಶ ಬೆಳಕಿಗೆ ಬಂದಿದೆ. ಇದೇ ಕಾರಣಕ್ಕೆ ಗಲಾಟೆ ಬೆನ್ನಲ್ಲೇ 7 ಜನ ಪಿಎಫ್ಐ ಕಾರ್ಯಕರ್ತರು ತಲೆಮರೆಸಿಕೊಂಡಿದ್ದರು.

ಶಿವಮೊಗ್ಗ ಈದ್ ಮಿಲಾದ್ ಕಲ್ಲು ತೂರಾಟ ಪ್ರಕರಣಕ್ಕಿದೆ PFI ಕೈವಾಡ, 7 ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಶಿವಮೊಗ್ಗ ಗಲಾಟೆ
Follow us
Basavaraj Yaraganavi
| Updated By: ಆಯೇಷಾ ಬಾನು

Updated on: Oct 14, 2023 | 11:55 AM

ಶಿವಮೊಗ್ಗ, ಅ.14: ಅ.1 ರಂದು ಈದ್ ಮಿಲಾದ್ ಮೆರವಣಿಗೆ (Eid-e-Milad an-Nabi) ವೇಳೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದಿದ್ದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿ ಗಲಭೆಯಲ್ಲಿ ನಿಷೇಧಿತ ಪಿಎಫ್​ಐ (PFI) ಸಂಘಟನೆಯ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ಈ ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸಿದ್ದು ಬಂಧಿತರು, ನಿಷೇಧಿತ ಪಿಎಫ್ಐ ಕಾರ್ಯಕರ್ತರ ಹೆಸರು ಹೇಳಿದ್ದಾರೆ. ತನಿಖೆ ವೇಳೆ ಒಟ್ಟು 7 ಜನ ನಿಷೇಧಿತ ಪಿಎಫ್ಐ ಕಾರ್ಯಕರ್ತರ ಹೆಸರು ಹೇಳಿ ಬಂದಿದೆ. ನಬಿ ಅಲಿಯಾಸ್ ಡಿಚ್ಚಿ, ಮುಬಾರಕ್, ಇಮ್ರಾನ್, ಅಬ್ಜಲ್, ಅನ್ವರ್, ಹಿದಾಯತ್, ಇರ್ಫಾನ್ ನಿಷೇಧಿತ ಪಿಎಫ್ಐನ ಕಾರ್ಯಕರ್ತರ ಹೆಸರು ಕೇಳಿ ಬಂದಿದೆ. ಹೀಗಾಗಿ ಕೇಸ್ ದಾಖಲಿಸಿ ಪೊಲೀಸರು ತನಿಖೆ ಮತ್ತಷ್ಟು ಚುರುಕುಗೊಳಿಸಿದ್ದಾರೆ.

ಶಿವಮೊಗ್ಗ ರಾಗಿಗುಡ್ಡ ಗಲಭೆ ಪ್ರಕರಣ ಇನ್ನೂ ತಣ್ಣಗಾಗಿಲ್ಲ. ಇದರ ನಡುವೆ ಈಗ ಈ ಪ್ರಕರಣಕ್ಕೆ ನಿಷೇಧಿತ ಪಿಎಫ್ಐ ಕಾರ್ಯಕರ್ತರ ಲಿಂಕ್ ಇರುವುದು ಬಯಲಾಗಿದೆ. ಈ ಪ್ರಕರಣದಲ್ಲಿ ಅರೆಸ್ಟ್ ಆದವರು ನಿಷೇಧಿತ ಪಿಎಫ್ಐ ಕಾರ್ಯಕರ್ತರ ಹೆಸರುಗಳನ್ನು ರಿವಿಲ್ ಮಾಡಿದ್ದಾರೆ. ಸದ್ಯ ಪಿಎಫ್ಐ ಕಾರ್ಯಕರ್ತರ ಮೇಲೆ ಕೇಸ್ ದಾಖಲಿಸಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. 7 ಜನ ಪಿಎಫ್ಐ ಕಾರ್ಯಕರ್ತರು ಗಲಾಟೆಯಲ್ಲಿ ಭಾಗಿಯಾಗಿದ್ದಾರೆಂದು ಎಫ್​ಐಆರ್ ದಾಖಲಾಗಿದೆ. ಪಿಎಫ್ಐ ಬ್ಯಾನ್ ಆಗ್ತಿದ್ದಂತೆ ಮತ್ತೊಂದು ರಾಜಕೀಯ ಸಂಘಟನೆಯಲ್ಲಿ ಈ ಏಳು ಜನ ಸಕ್ರಿಯಗೊಂಡಿದ್ದರು ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: ರಾಗಿಗುಡ್ಡದಲ್ಲಿ ಗಲಾಟೆ ಪ್ರಕರಣ: ಶಿವಮೊಗ್ಗದಲ್ಲಿ ವಿಹೆಚ್​ಪಿಯಿಂದ ಮಹಾ ಪಂಚಾಯತ್

ನಿಷೇಧಿತ ಪಿಎಫ್ಐ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು

ರಾಗಿಗುಡ್ಡ ಗಲಭೆ ವೇಳೆ ಯುವಕರಿಗೆ ಪ್ರಚೋದನೆ ನೀಡಿರುವ ಹಿನ್ನೆಲೆ 7 ಜನ ನಿಷೇಧಿತ ಪಿಎಫ್ಐ ಕಾರ್ಯಕರ್ತರ ಮೇಲೆ ಕೇಸ್ ದಾಖಲಾಗಿದೆ. ಈ ಏಳು ಜನ ಸ್ಥಳೀಯ ಯುವಕರಿಗೆ ಉದ್ರಿಕ್ತರಾಗುವಂತೆ ಪ್ರೇರೆಪಿಸಿರುವ ಅಂಶ ಬೆಳಕಿಗೆ ಬಂದಿದೆ. ಇದೇ ಕಾರಣಕ್ಕೆ ಗಲಾಟೆ ಬೆನ್ನಲ್ಲೇ 7 ಜನ ಪಿಎಫ್ಐ ಕಾರ್ಯಕರ್ತರು ತಲೆಮರೆಸಿಕೊಂಡಿದ್ದರು. ಸದ್ಯ ಕೆಲ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಿದಾಯತ್, ಅನ್ವರ್, ಮುಬಾರಕ್ ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಉಳಿದ ನಾಲ್ವರ ಬಂಧನಕ್ಕೆ ಪೊಲೀಸರು ಪ್ರತ್ಯೇಕ ತಂಡವನ್ನು ರಚಿಸಿ ಶೋಧ ಆರಂಭಿಸಿದ್ದಾರೆ. ಇವರ ಶೋಧಕ್ಕೆ 2 ವಿಶೇಷ ತಂಡ ರಚಿಸಿ, ಶಿವಮೊಗ್ಗ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇವರ ಬಂಧನದ ಬಳಿಕ ರಾಗಿಗುಡ್ಡ ಗಲಭೆ ಸಂಬಂಧ ಮತ್ತಷ್ಟು ವಿಚಾರ ಹೊರಬರುವ ಸಾಧ್ಯತೆ ಇದೆ.

ಇನ್ನು ರಾಗಿಗುಡ್ಡ ಗಲಭೆ ಸಂಬಂಧ ಪೊಲೀಸರು ಈವರೆಗೆ 27 ಎಫ್ಐಆರ್ ದಾಖಲಿಸಿದ್ದಾರೆ. 65ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ