ಶಿವಮೊಗ್ಗ: ಬ್ಯಾಗ್​​​​​ನಲ್ಲಿದ್ದ ವಸ್ತು ಸ್ಫೋಟ: ಹಲವರಿಗೆ ಗಾಯ, ಪ್ರಕರಣ ದಾಖಲು

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪಳದಲ್ಲಿ ಬ್ಯಾಗ್​​​​​ನಲ್ಲಿದ್ದ ವಸ್ತು ಸ್ಫೋಟಗೊಂಡು ಹಲವರಿಗೆ ಗಾಯಗಳಾಗಿರುವಂತಹ ಘಟನೆ ಸಂಭವಿಸಿದೆ. ಬೆಡ್ ಶೀಟ್ ವ್ಯಾಪಾರಸ್ಥರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಶಿರಾಳಕೊಪ್ಪ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಶಿರಾಳಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೇಸ್​​ ದಾಖಲು ಮಾಡಲಾಗಿದೆ.

ಶಿವಮೊಗ್ಗ: ಬ್ಯಾಗ್​​​​​ನಲ್ಲಿದ್ದ ವಸ್ತು ಸ್ಫೋಟ: ಹಲವರಿಗೆ ಗಾಯ, ಪ್ರಕರಣ ದಾಖಲು
ಸ್ಫೋಟಗೊಂಡ ವಸ್ತು
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Feb 18, 2024 | 2:49 PM

ಶಿವಮೊಗ್ಗ, ಫೆಬ್ರವರಿ 18: ಬ್ಯಾಗ್​​​​​ನಲ್ಲಿದ್ದ ವಸ್ತು ಸ್ಫೋಟಗೊಂಡು (Explosive) ಹಲವರಿಗೆ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪಳದಲ್ಲಿ ನಡೆದಿದೆ. ಬೆಡ್​​ಶೀಟ್​ ಮಾರಲು ಬಂದಿದ್ದ ಆಂಥೋಣಿ ಎಂಬಾತ ಸೇರಿದಂತೆ ಇತರೆ ಬೆಡ್​​ಶೀಟ್​ ವ್ಯಾಪಾರಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಶಿರಾಳಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಉಮೇಶ್​ ಎಂಬಾತ ಆಂಥೋಣಿ ಬಳಿ ಬ್ಯಾಗ್ ಇಟ್ಟು ಹೋಗಿದ್ದ. ಈ ವೇಳೆ ಬ್ಯಾಗ್​​​​ ಸ್ಫೋಟಗೊಂಡು ಅವಘಡ ಸಂಭವಿಸಿದೆ. ಬ್ಯಾಗ್​​ನಲ್ಲಿ ಹಂದಿ ಬೇಟೆಗೆಂದು ಸ್ಪೋಟಕ ವಸ್ತುಗಳನ್ನು ಸಂಗ್ರಹಿಸಲಾಗಿದೆ. ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಡ್ ಶೀಟ್ ಮಾರಾಟಕ್ಕೆ ಬಂದಿದ್ದ ಅಂಥೋನಿ ಬಳಿ ಪರಿಚಯಸ್ಥರು ಬ್ಯಾಗ್ ಇಟ್ಟು ಹೋಗಿದ್ದರು. ಇದೇ ಬ್ಯಾಗ್ ಆಕಸ್ಮಿಕವಾಗಿ ಸ್ಪೋಟಗೊಂಡಿದೆ. ಉಮೇಶ್ ಎನ್ನುವ ವ್ಯಕ್ತಿ ಬ್ಯಾಗ್ ಇಟ್ಟು ಹೋಗಿದ್ದು ಎನ್ನಲಾಗುತ್ತಿದ್ದು, ಆತನ ಬಗ್ಗೆ ಪೋಲಿಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಕೆಲ ಹೊತ್ತು ಘಟನೆಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಹಂದಿ ಹೊಡೆಯಲು ತಂದಿರುವ ಸಿಡಿಮದ್ದು ಸ್ಪೋಟವಾಗಿದೆ: ಎಪ್ಫಿ ಮಿಥುನ್ ಕುಮಾರ್

ಟಿವಿ 9ಗೆ ಶಿವಮೊಗ್ಗ ಎಪ್ಫಿ ಮಿಥುನ್ ಕುಮಾರ್​ ಪ್ರತಿಕ್ರಿಯಿಸಿದ್ದು, ಹಂದಿ ಹೊಡೆಯಲು ಬಳಕೆಗೆ ತಂದಿರುವ ಸಿಡಿಮದ್ದು ಬ್ಯಾಗ್​ನಲ್ಲಿತ್ತು. ಅದೇ ಆಕಸ್ಮಿಕವಾಗಿ ಸ್ಪೋಟಗೊಂಡಿದೆ. ಘಟನೆಯಲ್ಲಿ ಓರ್ವ ಬೆಡ್ ಶೀಟ್ ವ್ಯಾಪಾರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಆಗಿದ್ಥಾನೆ. ಆತನಿಗೆ ಸಣ್ಣ ಪುಟ್ಟ ಗಾಯ ಆಗಿದೆ. ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಕಾರ್ ಶೋ ರೂಂಗೆ ಬೆಂಕಿ: 2 ಕೋಟಿ ರೂ. ನಷ್ಟ, ಸುಟ್ಟು ಕರಕಲಾದ ಕಾರ್​ಗಳು

ಉಮೇಶ್ ಎನ್ನುವ ವ್ಯಕ್ತಿ ವ್ಯಾಪಾರಿ ಬಳಿ ಬ್ಯಾಗ್ ಇಟ್ಟು ಹೋಗಿರುವ ಮಾಹಿತಿ ಲಭ್ಯವಾಗಿದೆ. ಘಟನೆ ಕುರಿತು ಸ್ಥಳೀಯ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ.

ವಿದ್ಯುತ್ ಟ್ರಾನ್ಸಫಾರ್ಮರ್ ಸ್ಫೋಟ: ತಪ್ಪಿದ ಭಾರಿ ಅನಾಹುತ

ವಿಜಯಪುರ: ಜಿಲ್ಲೆಯ ತಿಕೋಟಾ ಪಟ್ಟಣದ ಜನವಸತಿ ಪ್ರದೇಶದಲ್ಲಿ ವಿದ್ಯುತ್ ಟ್ರಾನ್ಸಫಾರ್ಮರ್ ಸ್ಫೋಟಗೊಂಡು ಹೊತ್ತಿ ಉತಿದ ಘಟನೆ ಇತ್ತೀಚೆಗೆ ನಡೆದಿತ್ತು. ಸುದೈವಶಾತ ಯಾವುದೇ ಅಪಾಯ ಸಂಭವಿಸಿರಲಿಲ್ಲ. ಕಳೆದ ರಾತ್ರಿ ತಿಕೋಟಾ ಪಟ್ಟಣದ ಬನಶಂಕರಿ ನಗರದ ಮಹಾಂತೇಶ ಬಂದಿ ಎಂಬುವವರ ಮನೆಯ ಮುಂದಿನ ವಿದ್ಯುತ್ ಟ್ರಾನ್ಸಫಾರ್ಮರ್ ಏಕಾಏಕಿ ಸ್ಫೋಟಗೊಂಡು ಹೊತ್ತಿ ಉರಿದಿತ್ತು.

ಇದನ್ನೂ ಓದಿ: ಹುಂಡೈ ಕಾರು ಶೋ ರೂಮ್​ನಲ್ಲಿ ಅಗ್ನಿ ದುರಂತ, ಕೋಟ್ಯಾಂತರ ರೂ ಬೆಲೆಬಾಳುವ ವಾಹನಗಳು ಭಸ್ಮ

ವಿದ್ಯುತ್ ಒತ್ತಡದಿಂದ ಟ್ರಾನ್ಸಫಾರ್ಮರ್ ಸ್ಫೋಟಗೊಂಡು ಬೆಂಕಿಯಿಂದ ಹೊತ್ತಿ ಉರಿದಿತ್ತು. ಸ್ಫೋಟದಿಂದ ತೀವ್ರತೆಯಿಂದಾಗಿ ಮಹಾಂತೇಶ ಅವರ ಮನೆಯ ಆವರಣದಲ್ಲಿ ಬೆಂಕಿ ಹರಡಿಕೊಂಡಿತ್ತು. ಸುದೈವಶಾತ ಮನೆಯಲ್ಲಿ ಯಾರೂ ಇರಲಿಲ್ಲ. ಹೀಗಾಗಿ ಸಂಭವನೀಯ ಅಪಾಯ ತಪ್ಪಿದೆ. ಸ್ಫೋಟದ ದೃಶ್ಯ ಸಿಸಿ ಕೆಮೆರಾದಲ್ಲಿ ಸೆರೆಯಾಗಿದ್ದು, ಮನೆಗೆ ಹತ್ತಿರದಲ್ಲಿರುವ ಕಾರಣ ಟ್ರಾನ್ಸಫಾರ್ಮರ್ ಸ್ಥಳಾಂತರಕ್ಕೆ ಹಲವು ಬಾರಿ ಮನವಿ ಮಾಡಿದರೂ ಯಾರೂ ಸ್ಪಂದಿಸಿಲ್ಲ ಎಂದು ಮಹಾಂತೇಶ ಕುಟುಂಬದವರು ದೂರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:38 pm, Sun, 18 February 24

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು