ಸೊರಬ: ಸರ್ಕಾರದ ಆದೇಶ ಧಿಕ್ಕರಿಸಿ ಪಾರಂಪರಿಕ ವೃಕ್ಷಗಳ ಮಾರಣಹೋಮ

ಶಿವಮೊಗ್ಗದ ಕಂತನಹಳ್ಳಿಯಲ್ಲಿ ಅಕ್ರಮವಾಗಿ 80ಕ್ಕೂ ಹೆಚ್ಚು ಬೆಲೆಬಾಳುವ ಮರಗಳನ್ನು ಕಡಿಯಲಾಗಿದೆ. ಸರ್ಕಾರದ ಆದೇಶ ಉಲ್ಲಂಘಿಸಿ ನಡೆದ ಈ ಅರಣ್ಯ ನಾಶದಿಂದ ಪರಿಸರಕ್ಕೆ ತೀವ್ರ ಹಾನಿಯಾಗಿದೆ. ಅತಿಕ್ರಮಣದ ಆರೋಪಗಳಿವೆ. ಅರಣ್ಯ ಇಲಾಖೆಯ ನಿಷ್ಕಾಳಜಿ ಮತ್ತು ಲಾಬಿ ಆರೋಪಗಳು ಕೇಳಿಬಂದಿವೆ. ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ.

ಸೊರಬ: ಸರ್ಕಾರದ ಆದೇಶ ಧಿಕ್ಕರಿಸಿ ಪಾರಂಪರಿಕ ವೃಕ್ಷಗಳ ಮಾರಣಹೋಮ
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on: Jan 27, 2025 | 2:13 PM

ಶಿವಮೊಗ್ಗ, ಜನವರಿ 27: ಸರ್ಕಾರದ ಆದೇಶ, ಕಾನೂನು ಧಿಕ್ಕರಿಸಿ ಅರಣ್ಯನಾಶ (Deforestation) ಅವ್ಯಾಹತವಾಗಿ ನಡೆಯುತ್ತಿದ್ದು, ಕಂತನಹಳ್ಳಿ ಗ್ರಾಮದ ಸರ್ವೆ ನಂಬರ್ 8ರ ನಿತ್ಯ ಹರಿದ್ವರ್ಣದ ಸಮೃದ್ಧ ಕಾಡಿನಲ್ಲಿ ಅಪಾರ ಪ್ರಮಾಣದ ಬೆಲೆಬಾಳುವ ಪಾರಂಪರಿಕ ವೃಕ್ಷಗಳನ್ನು ಕಡಿದು ನಾಶಪಡಿಸಲಾಗಿದೆ.

ಕಂತನಹಳ್ಳಿ ಸರ್ವೆ ನಂಬರ್ 8ರಲ್ಲಿ ಒಟ್ಟು 533 ಎಕರೆ ಅರಣ್ಯವಿದೆ. ಇದಕ್ಕೆ ತಾಗಿಕೊಂಡು ಸಾರೆಮರೂರು ಗ್ರಾಮದ ಸರ್ವೆ ನಂಬರ್ 27ರಲ್ಲಿ 352 ಎಕರೆ ಅರಣ್ಯವಿದೆ. ಪ್ರಸ್ತುತ ಈ ಸನಂಗೆ ತಾಗಿಕೊಂಡಿರುವ ಕೆಲ ಖಾಸಗಿ ಅಸ್ತಿಯವರೂ ಸೇರಿದಂತೆ ಪ್ರತ್ಯೇಕ ಇದೇ ಸರ್ವೆ ನಂಬರ್ನಲ್ಲಿ ಸುಮಾರು 15 ಎಕರೆ ಅತಿಕ್ರಮಣವಾಗಿದೆ.

ಈಗ ಕಡಿದುರುಳಿಸಿರುವ 80ಕ್ಕೂ ಹೆಚ್ಚು ಮರಗಳು ಬೆಲೆಬಾಳುವ ಮರಗಳಾಗಿದ್ದು ನಂದಿ, ಹೊನ್ನೆ, ಬಣಗಿ, ಮತ್ತಿ, ಹುಣಾಲು ಮುಂತಾದ ಜಾತಿಯವದ್ದಾಗಿದೆ. ಈ ಮರಗಳ ಕಡಿತಲೆ ಜೊತೆಗೆ ಸಾವಿರಾರು ಮುಂಪೀಳಿಗೆ ಸಸ್ಯಗಳು ನಾಶಗೊಂಡಿವೆ.

ಇಲ್ಲಿ ಒತ್ತೂವರಿ ಅಥವಾ ಅತಿಕ್ರಮಣಕ್ಕಾಗಿ ನಾಶಪಡಿಸಲು ಸಜ್ಜು ನಡೆಯುತ್ತಿದ್ದಂತೆ ಗೋಚರಿಸುತ್ತಿದ್ದು ಬೆಲೆ ಬಾಳುವ ಮರಗಳನ್ನು ಕಟ್ಟಿಗೆ ಮಾಡಲು ಕತ್ತರಿಸಲಾಗಿದೆ. ಬೃಹತ್ ಪೈಕಸ್ ಮರವನ್ನು ಧರೆಗುರುಳಿಸಿದ್ದು ಸಾವಿರಾರು ಪಕ್ಷಿಗಳ ಆವಾಸ, ಆಹಾರಕ್ಕೆ ಕುತ್ತು ತರಲಾಗಿದೆ. ನೂರಾರು ಪಕ್ಷಿಗಳ ಮೊಟ್ಟೆ, ಮರಿಗಳು ಅಸು ನೀಗಿವೆ. ಮುಖ್ಯವಾಗಿ ಇದು ನಿರ್ಜನ ಪ್ರದೇಶವೇನಲ್ಲ, ವಾಹನ ಓಡಾಡುವ ರಸ್ತೆ ವ್ಯವಸ್ಥೆ ಇರುವ ಇಲ್ಲಿ ಏನೆ ಚಟುವಟಿಕೆ ನಡೆದರೂ ಗಮನಕ್ಕೆ ಬರುವಂತಿದೆ. ಆದಾಗ್ಯೂ ಅರಣ್ಯ ಇಲಾಖೆ ಗಮನಕ್ಕೆ ಬಾರದಿರುವುದು ಪ್ರಶ್ನಾರ್ಹ ಎನ್ನುತ್ತಾರೆ ಸ್ಥಳೀಯರು.

ಇದನ್ನೂ ಓದಿ: ಮಲೆನಾಡಿನಲ್ಲಿ ಮತ್ತೆ ಶುರುವಾದ ಮಂಗನಕಾಯಿಲೆ ಆತಂಕ, ಕೆಎಫ್​ಡಿ ವೈರಸ್ ಪತ್ತೆ

ಈ ಅತಿಕ್ರಮಣ ಪ್ರಭಾವಿ ವ್ಯಕ್ತಿಗಳದ್ದಾಗಿದ್ದು, ಅರಣ್ಯ ಇಲಾಖೆ ಬಾಯಿ ಮುಚ್ಚಿಸಿ ಪ್ರಕರಣವನ್ನು ತಿರುಚಲಾಗುತ್ತಿದೆ. ಇಲಾಖೆಯೂ ಲಾಬಿಗೆ ಒಳಗಾಗಿದೆ ಎಂಬ ಆರೋಪ ಗ್ರಾಮಸ್ಥರಿಂದ ಕೇಳಿ ಬಂದಿದೆ. ಸಿಬ್ಬಂದಿ ಕೊರತೆ ಇತ್ಯಾದಿ ಕಾರಣ ಒಡ್ಡುತ್ತ ಲಾಬಿ ನಡೆಸುತ್ತಿರುವ ಅರಣ್ಯ ಇಲಾಖೆಯ ನಿಷ್ಕಾಳಜಿಯಿಂದಾಗಿಯೆ ಸೊರಬದ ಅನೇಕ ಕಾನು ಅರಣ್ಯಗಳು ಬರಿದಾಗುತ್ತಿವೆ ಎಂದು ಹತಾಶೆ ವ್ಯಕ್ತಪಡಿಸಿರುವ ಸ್ಥಳಿಯರು ತಮ್ಮ ಹೆಸರು ಹೇಳಲು ಕೂಡ ಭಯಪಡುವ ವಾತಾವರಣ ಸೃಷ್ಟಿಯಾಗಿದೆ ಎಂದು ಬೇಸರಿಸಿದ್ದಾರೆ.

ಒಂದು ವರ್ಷದ ಈಚೆಗೆ ಸೊರಬದಲ್ಲಿ ಅವ್ಯಾಹತವಾಗಿ ಅರಣ್ಯ ನಾಶವಾಗಿದ್ದು ಚಂದ್ರಗುತ್ತಿ ಹೋಬಳಿಯಲ್ಲಿ ಅತಿ ಹೆಚ್ಚು, ಕಸಬಾದಲ್ಲಿ ಒಂದಿಷ್ಟು ಕಾಡು ಅತಿಕ್ರಮಣ, ಮರಗಳ ನಾಶ ಪ್ರಕರಣ ಕಂಡುಬಂದಿದೆ. ಚಂದ್ರಗುತ್ತಿ ಹೋಬಳಿಯ ಹೊಳೆಮರೂರು, ತೋರಣಗೊಂಡನಕೊಪ್ಪ, ಅಂದವಳ್ಳಿ, ಮುಟಗುಪ್ಪೆ, ಗೊಗ್ಗೆಹಳ್ಳಿ, ಹರಳಿಗೆ, ಕೋಡಂಬಿ ಇನ್ನೂ ಅನೇಕ ಕಡೆ ಅರಣ್ಯ ನಾಶವಾಗಿದೆ. ಹೊಳೆಮರೂರು, ತೋರಣಗೊಂಡನಕೊಪ್ಪ ಗ್ರಾಮಸ್ಥರು ಅರಣ್ಯ ನಾಶದ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸಿ ಸಂರಕ್ಷಣೆಗೆ ಮುಂದಾಗಿದ್ದನ್ನು ಇಲ್ಲಿ ನೆನಪಿಸಬಹುದು.

ಗುಂಜನೂರು ಗ್ರಾಮದ ಪುಟ್ಟರಾಜು ಬಿನ್ ಬಾಲಚಂದ್ರ, ಕೃಷ್ಣಮೂರ್ತಿ ಬಿನ್ ಶ್ರೀಕಾಂತ್, ಅನಿಲ್ ಕುಮಾರ್ ಬಿನ್ ಚಂದ್ರಪ್ಪ ಇವರ ವಿರುದ್ಧ ದೂರು ದಾಖಲಾಗಿದೆ. ಕಡಿಯಲು ಬಳಸಿದ ಮಷಿನ್ ಇತ್ಯಾದಿ ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಅರಣ್ಯ ಇಲಾಖೆ ಸೊರಬ ವಲಯ ಆರ್​ಎಫ್​ಒ ಜಾವೀದ್ ಎಂದರು.

ಅರಣ್ಯ ಕಾನೂನು ಪಾಲನೆಯಾಗುತ್ತಿಲ್ಲ. ಅರಣ್ಯ ಒತ್ತೂವರಿ, ಮರಕಡಿತಲೆಗೆ ಅವಕಾಶ ಇಲ್ಲ ಎಂದು ಮೇಲಿಂದಮೇಲೆ ಸರ್ಕಾರ ಹೇಳುತ್ತಿದ್ದರೂ ನಾಶ ತಡೆಗಟ್ಟಲಾಗುತ್ತಿಲ್ಲ. ಅರಣ್ಯ ಇಲಾಖೆ ತೀವ್ರ ಗಮನಹರಿಸಬೇಕು. ಕಾನೂನು ಕ್ರಮದಲ್ಲಿ ಮೀನಾಮೇಷ ಎಣಿಸಬಾರದು ಎಂದು ಅಧ್ಯಕ್ಷರು, ಪರಿಸರ ಜಾಗೃತಿ ಟ್ರಸ್ಟ್‌ ಸೊರಬ, ಹಿರಿಯ ವಕೀಲರು ಎಂ.ಆರ್.ಪಾಟೀಲ್ ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ನನಗೂ ಫ್ಯಾಮಿಲಿ ಇದೆ’: ಮಾಜಿ ಗೆಳತಿ ಕಿರಿಕ್​ ಬಗ್ಗೆ ರಜತ್ ಸ್ಪಷ್ಟನೆ
‘ನನಗೂ ಫ್ಯಾಮಿಲಿ ಇದೆ’: ಮಾಜಿ ಗೆಳತಿ ಕಿರಿಕ್​ ಬಗ್ಗೆ ರಜತ್ ಸ್ಪಷ್ಟನೆ
ಬಿಬಿಎಲ್ ಫೈನಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಮಿಚೆಲ್ ಓವನ್
ಬಿಬಿಎಲ್ ಫೈನಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಮಿಚೆಲ್ ಓವನ್
ಮಾಧ್ಯಮದವರು ಪ್ರಶ್ನೆ ಕೇಳಿದಾಗ ಹನುಮಂತನಿಂದ ಅದೇ ಮುಗ್ಧತೆಯ ಉತ್ತರ!
ಮಾಧ್ಯಮದವರು ಪ್ರಶ್ನೆ ಕೇಳಿದಾಗ ಹನುಮಂತನಿಂದ ಅದೇ ಮುಗ್ಧತೆಯ ಉತ್ತರ!
ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ
ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ
ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?
ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?
ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಹನುಮಂತ ಮೊದಲ ಪ್ರೆಸ್ ಮೀಟ್; ಇಲ್ಲಿದೆ ಲೈವ್
ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಹನುಮಂತ ಮೊದಲ ಪ್ರೆಸ್ ಮೀಟ್; ಇಲ್ಲಿದೆ ಲೈವ್
ಮುಂದಿನ 3-4 ತಿಂಗಳಲ್ಲಿ ಹನುಮಂತನ ಮದುವೆ: ಊರಿನ ಜನರ ಖುಷಿ ನೋಡಿ..
ಮುಂದಿನ 3-4 ತಿಂಗಳಲ್ಲಿ ಹನುಮಂತನ ಮದುವೆ: ಊರಿನ ಜನರ ಖುಷಿ ನೋಡಿ..
ವೈಶಾಲಿ ಜೊತೆಗೆ ಕೈಕುಲುಕದಿರಲು ಕಾರಣ ತಿಳಿಸಿದ ಯಾಕುಬೊವ್
ವೈಶಾಲಿ ಜೊತೆಗೆ ಕೈಕುಲುಕದಿರಲು ಕಾರಣ ತಿಳಿಸಿದ ಯಾಕುಬೊವ್
ಮಹಾಕುಂಭದಲ್ಲಿ ತ್ರಿವೇಣಿ ಸಂಗಮದಲ್ಲಿ ಗೃಹ ಸಚಿವ ಅಮಿತ್ ಶಾ ತೀರ್ಥ ಸ್ನಾನ
ಮಹಾಕುಂಭದಲ್ಲಿ ತ್ರಿವೇಣಿ ಸಂಗಮದಲ್ಲಿ ಗೃಹ ಸಚಿವ ಅಮಿತ್ ಶಾ ತೀರ್ಥ ಸ್ನಾನ
ಯಾರೇ ಬಂದರೂ ನನ್ನನ್ನು ತುಳಿಯಲಾಗಲ್ಲ: ಸತೀಶ್ ಜಾರಕಿಹೊಳಿ, ಸಚಿವ
ಯಾರೇ ಬಂದರೂ ನನ್ನನ್ನು ತುಳಿಯಲಾಗಲ್ಲ: ಸತೀಶ್ ಜಾರಕಿಹೊಳಿ, ಸಚಿವ