ಪ್ರತಿಭಟನೆ ವೇಳೆ ಹೃದಯಾಘಾತ: ಬಿಜೆಪಿ ಮಾಜಿ ಎಂಎಲ್‌ಸಿ ಭಾನುಪ್ರಕಾಶ್ ನಿಧನ

ಬಿಜೆಪಿ ನಾಯಕ, ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ (69) ನಿಧನರಾಗಿದ್ದಾರೆ. ಸ್ವಗ್ರಾಮ ಮತ್ತೂರಿಗೆ ಮೃತದೇಹ ರವಾನೆ ಮಾಡಲಾಗಿದೆ. ರಾಜ್ಯ ಸರ್ಕಾರದ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾನುಪ್ರಕಾಶ್​ ಅವರು ಭಾಗಿಯಾಗಿದ್ದರು. ಪ್ರತಿಭಟನೆ ಬಳಿಕ ಹೃದಯಾಘಾತವಾಗಿದೆ.

ಪ್ರತಿಭಟನೆ ವೇಳೆ ಹೃದಯಾಘಾತ: ಬಿಜೆಪಿ ಮಾಜಿ ಎಂಎಲ್‌ಸಿ ಭಾನುಪ್ರಕಾಶ್ ನಿಧನ
ಮಾಜಿ ಎಂಎಲ್​ಸಿ ಭಾನುಪ್ರಕಾಶ್
Follow us
Basavaraj Yaraganavi
| Updated By: ವಿವೇಕ ಬಿರಾದಾರ

Updated on:Jun 17, 2024 | 2:51 PM

ಶಿವಮೊಗ್ಗ, ಜೂನ್​ 17: ಬಿಜೆಪಿ (BJP) ನಾಯಕ, ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ (69) (Former MLC Bhanuprakash) ನಿಧನರಾಗಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಶಿವಮೊಗ್ಗ (Shivamogga) ನಗರದ ಗೋಪಿ ವೃತ್ತದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾನುಪ್ರಕಾಶ್ ಅವರು ಭಾಗಿಯಾಗಿದ್ದರು. ಪ್ರತಿಭಟನೆ ನಂತರ ಹೃದಯಾಘವಾಗಿ ಕುಸಿದು ಬಿದ್ದಿದ್ದಾರೆ. ಕೂಡಲೆ ಬಿಜೆಪಿ ಕಾರ್ಯಕರ್ತರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಸ್ವಗ್ರಾಮ ಮತ್ತೂರಿಗೆ ಮೃತದೇಹ ರವಾನೆ ಮಾಡಲಾಗಿದೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರಾಗಿದ್ದ ಎಂ.ಬಿ ಭಾನುಪ್ರಕಾಶ್​ ಅವರು ಗುರುತಿಸಿಕೊಂಡರು. ಬಿಜೆಪಿ ಎಂ.ಬಿ ಭಾನುಪ್ರಕಾಶ್​ ಅವರನ್ನು ವಿಧಾನ್​ ಪರಿಷತ್​ ಸದಸ್ಯರಾಗಿ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿಯೂ ನೇಮಕ ಮಾಡಿತ್ತು. ಸರಳ, ಸಜ್ಜನರಾಗಿದ್ದ ಎಂ.ಬಿ ಭಾನುಪ್ರಕಾಶ್​ ಅವರು ಉತ್ಮಮ ವಾಗ್ಮಿಯಾಗಿದ್ದರು. ಇವರು 2001 ರಿಂದ 2005ರ ತನಕ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದರು. ನಂತರ ವಿಧಾನ ಪರಿಷತ್​ ಸದಸ್ಯಾರಾಗಿ ಆಯ್ಕೆಯಾಗಿದ್ದರು.

ಕಂಬನಿ ಮಿಡಿದ ಗಣ್ಯರು

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿವೈ ರಾಘವೇಂದ್ರ ಅವರು ಎಂ.ಬಿ ಭಾನುಪ್ರಕಾಶ್​ ಅವರ ನಿಧಕ್ಕೆ ಸಂತಾಪ ಸೂಚಿಸಿದ್ದಾರೆ. “ರಾಷ್ಟೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂ ಸೇವಕರು, ಭಾರತೀಯ ಜನತಾ ಪಕ್ಷದ ಹಿರಿಯ ನಾಯಕರಲ್ಲಿ ಒಬ್ಬರು, ರಾಜ್ಯ ಪ್ರಕೋಷ್ಠಗಳ ಸಂಯೋಜಕರಾಗಿ ಪಕ್ಷವನ್ನು ಶಿಸ್ತು ಬದ್ಧವಾಗಿ ಸಂಘಟಿಸುವಲ್ಲಿ ಅವಿರತ ಶ್ರಮಿಸಿದ ಪ್ರಮುಖರು, ಮಾಜಿ ವಿಧಾನ ಪರಿಷತ್ ಸದಸ್ಯರು, ನನ್ನ ರಾಜಕೀಯ ಮಾರ್ಗದರ್ಶಕರಾಗಿ ಸಲಹೆ ನೀಡಿ ಹರಸಿದ ಶ್ರೀ ಭಾನುಪ್ರಕಾಶ್ ಅವರು ಇಹಲೋಕ ತ್ಯಜಿಸಿದ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಅವರ ಆತ್ಮಕ್ಕೆ ಭಗವಂತ ಸದ್ಗತಿ ನೀಡಲಿ, ಕುಟುಂಬ ಸದಸ್ಯರಿಗೆ ದುಃಖ ಸಹಿಸುವ ಶಕ್ತಿ ನೀಡಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ” ಎಂದು ಟ್ವೀಟ್​ ಮಾಡಿದ್ದಾರೆ.

ರಾಜ್ಯ ಬಿಜೆಪಿಯ ವಿರೋಧ ಪಕ್ಷದ ನಾಯಕ ಆರ್​. ಅಶೋಕ್​ ಎಂ.ಬಿ ಭಾನುಪ್ರಕಾಶ್​ ನಿಧಕ್ಕೆ ಕಂಬನಿ ಮಿಡಿದಿದ್ದಾರೆ. “ಹಿರಿಯರು, ನನ್ನ ಆತ್ಮೀಯರು, ಮಾರ್ಗದರ್ಶಕರು ಆದ ಎಂ.ಬಿ.ಭಾನುಪ್ರಕಾಶ್ ಅವರ ಹಠಾತ್ ನಿಧನದ ಸುದ್ದಿ ತೀವ್ರ ಆಘಾತ ಮೂಡಿಸಿದೆ. ತಮ್ಮ ಜೀವನದುದ್ದಕ್ಕೂ ಜನಪರ ಹೋರಾಟ, ಸಂಘರ್ಷ, ಸಂಘಟನೆಯಲ್ಲೇ ಕಳೆದ ಭಾನುಪ್ರಕಾಶ್ ಅವರು ತಮ್ಮ ಕೊನೆ ಉಸಿರನ್ನೂ ಹೋರಾಟದಲ್ಲೇ ಕಳೆದಿದ್ದು ಅವರ ಹೋರಾಟದ ಬದುಕಿನ ದ್ಯೋತಕವಾಗಿದೆ.”

“ಜಿಲ್ಲಾ ಪಂಚಾಯಿತಿ ಸದಸ್ಯರಾಗಿ, ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ, ವಿಧಾನ ಪರಿಷತ್ ಸದಸ್ಯರಾಗಿ ತಮ್ಮ ಸರಳತೆ, ಸಜ್ಜನಿಕೆಗೆ ಹೆಸರಾಗಿದ್ದ ಭಾನುಪ್ರಕಾಶ್ ಅವರು ಸತ್ಯ, ನ್ಯಾಯ, ನಿಷ್ಠೆಯ ಪರವಾಗಿ ಮಾತನಾಡುವ ಉತ್ತಮ ವಾಗ್ಮಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ, ಅವರ ಕುಟುಂಬ ಸದಸ್ಯರು, ಬಂಧು-ಬಳಗ ಹಾಗು ಸ್ನೇಹಿತರಿಗೆ ಈ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ನೀಡಲು ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಓಂ ಶಾಂತಿ.” ಎಂದು ಟ್ವೀಟ್​ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:02 pm, Mon, 17 June 24

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು