ಶಿವಮೊಗ್ಗ: ತಾಲೂಕಿನ ಗೊಂದಿಚಟ್ನಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ (Morarji Desai Residential School) 80 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿ ಗುಣಮುಖರಾಗುತ್ತಿದ್ದಂತೆ ಗಾಜನೂರಿನ ಮುರಾರ್ಜಿ ವಸತಿ ಶಾಲೆಯ 9 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಜನೂರಿನ ಮುರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳು ಕಳೆದ ಮೂರ್ನಾಲ್ಕು ದಿನಗಳಿಂದ ವಾಂತಿ, ಬೇಧಿ, ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ಮೆಗ್ಗಾನ್ ಆಸ್ಪತ್ರೆಗೆ (McGann Hospital) ದಾಖಲಿಸಲಾಗಿದೆ. ಶಿವಮೊಗ್ಗ ತಾಲೂಕಿನ ಮೊರಾರ್ಜಿ ವಸತಿ ಶಾಲೆಗಳಲ್ಲಿ ಇಂತಹ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಆರೋಗ್ಯ ಇಲಾಖೆಗೆ ತಲೆ ನೋವಾಗಿ ಪರಿಣಮಿಸಿದೆ.
ಶಿವಮೊಗ್ಗ ತಾಲ್ಲೂಕಿನ ವಸತಿ ಶಾಲೆಗಳಲ್ಲಿ ಶಾಂತಿ ಬೇಧಿ ಪ್ರಕರಣಗಳು ಹೆಚ್ಚುತ್ತಿದ್ದು, ನಿಯಂತ್ರಣಕ್ಕೆ ತರಲು ಆರೋಗ್ಯ ಇಲಾಖೆ ಅವಿರತವಾಗಿ ಶ್ರಮಿಸುತ್ತಿದೆ. ಗೊಂದಿಚಟ್ನಹಳ್ಳಿಯ 235 ವಸತಿ ಶಾಲೆ ಮಕ್ಕಳ ಪೈಕಿ ಅಸ್ವಸ್ಥಗೊಂಡ 80 ವಿದ್ಯಾರ್ಥಿಗಳು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಎಲ್ಲಾ ವಿದ್ಯಾರ್ಥಿಗಳು ಗುಣಮುಖರಾಗಿದ್ದಾರೆ. ಈ ನಡುವೆ ಇದೇ ತಾಲೂಕಿನ ಗಾಜನೂರಿನ ಮೊರಾರ್ಜಿ ವಸತಿ ಶಾಲೆ ವಿದ್ಯಾರ್ಥಿಗಳು ಅಂತಹದ್ದೇ ಸಮಸ್ಯೆಯಿಂದ ಬಳಲಲು ಆರಂಭಿಸಿದ್ದು, ಆಸ್ಪತ್ರೆಗೆ ಬಂದ ಮಕ್ಕಳು ಅಲ್ಲೇ ವಾಂತಿ ಮಾಡಿಕೊಳ್ಳುತ್ತಿದ್ದಾರೆ. ಇದು ತಾಲೂಕಿನ ವಸತಿ ಶಾಲೆಗಳಲ್ಲಿರುವ ವಿದ್ಯಾರ್ಥಿಗಳ ಪೋಷಕರಲ್ಲಿ ಆತಂಕ ಉಂಟುಮಾಡಿದೆ.
ಇದನ್ನೂ ಓದಿ: Shivamogga: ಮೊರಾರ್ಜಿ ವಸತಿ ಶಾಲೆಯಲ್ಲಿ ಊಟ ಮಾಡಿದ 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಶಿವಮೊಗ್ಗದ ತಾಲೂಕಿನ ಗೊಂದಿಚಟ್ನಹಳ್ಳಿಯ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಮಧ್ಯಾಹ್ನದ ನಂತರ ಒಬ್ಬರ ಬಳಿಕ ಇನ್ನೊಬ್ಬರು ಅಸ್ವಸ್ಥರಾಗಿದ್ದರು. ಹೀಗೆ ಒಟ್ಟು 80 ಮಕ್ಕಳು ಅಸ್ವಸ್ಥರಾಗಿರುವ ಬಗ್ಗೆ ವರದಿಯಾಗಿದೆ. ಅಸ್ವಸ್ಥರಾದ ಮಕ್ಕಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐದಕ್ಕೂ ಹೆಚ್ಚು ವೈದ್ಯರು ಹಾಗು ಸಿಬ್ಬಂದಿ ಮಕ್ಕಳ ಆರೋಗ್ಯ ತಪಾಸಣೆಯನ್ನು ನಡೆಸುತ್ತಿದ್ದಾರೆ.
ಮಧ್ಯಾಹ್ನ ಚಪಾತಿ ಪಲ್ಯ, ಅನ್ನ ಸಾಂಬಾರು ಊಟ ಮಾಡಿದ್ದೇವು. ಸಂಜೆಯ ನಂತರ ನನಗೆ ಹೊಟ್ಟೆ ನೋವು ಪ್ರಾರಂಭವಾಗಿದೆ. ಕೆಲವರಿಗೆ ಮಧ್ಯಾಹ್ನದ ನಂತರ ಶುರುವಾಗಿತ್ತು ಎಂದು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ದಿವ್ಯಶ್ರೀ ಹೇಳಿದ್ದಳು. ಮೇಲ್ನೋಟಕ್ಕೆ ನೀರಿನಿಂದ ತೊಂದರೆ ಆಗಿರುವ ಸಾಧ್ಯತೆ ಇದೆ. ಮಧ್ಯಾಹ್ನದ ಆಹಾರ, ನೀರು ಮತ್ತು ವಾಂತಿಯ ಸ್ಯಾಂಪಲ್ ಪಡೆದಿದ್ದಾರೆ ಎಂದು ಶಾಸಕ ಅಶೋಕ್ ನಾಯ್ಕ್ ಹೇಳಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ