Harsha Charitable Trust: ಹತ್ಯೆಗೀಡಾದ ಹರ್ಷ ಕುಟುಂಬಸ್ಥರಿಂದ ಹರ್ಷ ಚಾರಿಟಬಲ್ ಟ್ರಸ್ಟ್ ಕಾರ್ಯಾರಂಭ

Shivamogga Harsha: ಹರ್ಷ ಚಾರಿಟಬಲ್ ಟ್ರಸ್ಟ್ ಕಾರ್ಯಾರಂಭ ಮಾಡಿದೆ. ಸಾಮಾಜಿಕವಾಗಿ, ಆರ್ಥಿಕವಾಗಿ ನೊಂದವರಿಗೆ ಟ್ರಸ್ಟ್​ ಮೂಲಕ ನೆರವು ನೀಡುವುದು ಟ್ರಸ್ಟ್ ಉದ್ದೇಶವಾಗಿದೆ. ಈ ಸಂಬಂಧ ಹರ್ಷ ಕುಟುಂಬಸ್ಥರು ಮತ್ತು ಕೆ.ಇ. ಕಾಂತೇಶ್ ಜಂಟಿ ಪತ್ರಿಕಾಗೋಷ್ಠಿ ಮೂಲಕ ಈ ಘೋಷಣೆ ಮಾಡಿದ್ದಾರೆ.

Harsha Charitable Trust: ಹತ್ಯೆಗೀಡಾದ ಹರ್ಷ ಕುಟುಂಬಸ್ಥರಿಂದ ಹರ್ಷ ಚಾರಿಟಬಲ್ ಟ್ರಸ್ಟ್ ಕಾರ್ಯಾರಂಭ
ಶಿವಾಜಿ ರೂಪದಲ್ಲಿ ಹರ್ಷನ ಚಿತ್ರ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Apr 09, 2022 | 2:48 PM

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಬಳಿಕ ಹರ್ಷ ಕುಟುಂಬಸ್ಥರಿಂದ ಹರ್ಷ ಚಾರಿಟಬಲ್ ಟ್ರಸ್ಟ್ ಕಾರ್ಯಾರಂಭ ಮಾಡಿದೆ. ಹರ್ಷ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷರಾಗಿ ಮೃತ ಹರ್ಷನ ಸಹೋದರಿ ಅಶ್ವಿನಿ, ಕಾರ್ಯದರ್ಶಿಯಾಗಿ ಸಚಿವ ಈಶ್ವರಪ್ಪ ಪುತ್ರ ಕೆ.ಇ. ಕಾಂತೇಶ್ ಆಯ್ಕೆಯಾಗಿದ್ದಾರೆ. ಸಾಮಾಜಿಕವಾಗಿ, ಆರ್ಥಿಕವಾಗಿ ನೊಂದವರಿಗೆ ಟ್ರಸ್ಟ್​ ಮೂಲಕ ನೆರವು ನೀಡುವುದು ಟ್ರಸ್ಟ್ ಉದ್ದೇಶವಾಗಿದೆ. ಈ ಸಂಬಂಧ ಹರ್ಷ ಕುಟುಂಬಸ್ಥರು ಮತ್ತು ಕೆ.ಇ. ಕಾಂತೇಶ್ ಜಂಟಿ ಪತ್ರಿಕಾಗೋಷ್ಠಿ ಮೂಲಕ ಈ ಘೋಷಣೆ ಮಾಡಿದ್ದಾರೆ.

ಹತ್ಯೆಗೀಡಾದ ಹರ್ಷ ತಾಯಿ ಪದ್ಮಾ ಹೇಳಿಕೆ: ಹರ್ಷ ಮೃತಪಟ್ಟ ಬಳಿಕ ನಮ್ಮ ಕುಟುಂಬಕ್ಕೆ ಅನೇಕರು ಸಹಾಯ ಮಾಡಿದ್ದಾರೆ. ಸಂಗ್ರಹವಾದ ಹಣದ ಸದ್ಭಳಕೆ ಮಾಡುವ ನಿರ್ಧಾರವನ್ನು ಹರ್ಷ ಕುಟುಂಬ ತೆಗೆದುಕೊಂಡಿದೆ. ಹರ್ಷ ಟ್ರಸ್ಟ್ ನಿಂದ 2015ರಲ್ಲಿ ಪಿಎಫ್ಐ ಸಂಘಟನೆಯ ಗಲಭೆಯಲ್ಲಿ ಮೃತಪಟ್ಟ ವಿಶ್ವನಾಥ್ ಮಗನ ವಿದ್ಯಾಭ್ಯಾಸದ ಜವಾಬ್ದಾರಿ ಹೊತ್ತುಕೊಳ್ಳುತ್ತದೆ. ಕಾಸರಗೋಡಿನಲ್ಲಿ ಮೃತ ಆರ್ ಎಸ್ ಎಸ್ ಕಾರ್ಯಕರ್ತ ಜ್ಯೋತಿಶ್ ಕುಟುಂಬಕ್ಕೆ 2 ಲಕ್ಷ ರೂಪಾಯಿ ಸಹಾಯ ನೀಡಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು.

ಭಟ್ಕಳದಲ್ಲಿ ಶುಕ್ರವಾರ ರಾತ್ರಿ ಅಪ್ರಾಪ್ತ ವಯಸ್ಸಿನ ಮುಸ್ಲಿಂ ಬಾಲಕರಿಂದ ಇಬ್ಬರ ಮೇಲೆ ಮೊಟ್ಟೆ ಎಸೆದು ದುಷ್ಕೃತ್ಯ ಕಾರವಾರ: ಭಟ್ಕಳದಲ್ಲಿ ಅಪ್ರಾಪ್ತ ವಯಸ್ಸಿನ ಮುಸ್ಲಿಂ ಬಾಲಕರು ನಿನ್ನೆ ಶುಕ್ರವಾರ ರಾತ್ರಿ 9.30 ಹಾಗೂ 9.45ರ ಸಮಯದಲ್ಲಿ ಇಬ್ಬರು ಸಾರ್ವಜನಿಕರ ಮೇಲೆ ಮೊಟ್ಟೆ ಎಸೆದಿದ್ದಾರೆ. ಭಟ್ಕಳದ ಬಂದರು ಪ್ರದೇಶದ ನಿವಾಸಿಗಳಾದ ಸುಮಾರು 17 ವರ್ಷ ಪ್ರಾಯದ 6 ಮಂದಿ ಯುವಕರಿಂದ ಈ ಕುಕೃತ್ಯ ನಡೆದಿದೆ ಎನ್ನಲಾಗಿದೆ. ಮೂರು ಪ್ರತ್ಯೇಕ ಮೋಟಾರ್ ಸೈಕಲ್ ಚಲಾಯಿಸಿಕೊಂಡು ಬಂದು ಬಾಲಕರು ಕೃತ್ಯವೆಸಗಿದ್ದಾರೆ. ಭಟ್ಕಳ ಪುರವರ್ಗದ ಮಂಜುನಾಥ್ (29) ಹಾಗೂ ಹನುಮಾನ್ ನಗರದ ಕೃಷ್ಣ (50) ಎಂಬುವವರ ಮೇಲೆ ಮೊಟ್ಟೆ ಎಸೆದಿದ್ದಾರೆ.

ಪಿಯುಸಿ ಪರೀಕ್ಷೆ ಬಳಿಕ ಉಳಿದ ಮೂವರು ಆರೋಪಿಗಳ ಅರೆಸ್ಟ್: ಮಂಜುನಾಥ್ ಕೂಲಿ ಕೆಲಸ ಮಾಡುತ್ತಿದ್ದರೆ, ಕೃಷ್ಣಾ ರಿಕ್ಷಾ ಚಾಲಕರಾಗಿದ್ದಾರೆ. ರಾತ್ರಿ 9.30ರಲ್ಲಿ ಮೊದಲು ಕೃಷ್ಣ ಎದೆಯ ಮೇಲೆ ಮೊಟ್ಟೆ ಬಿಸಾಕಿದ್ದ ಆರೋಪಿಗಳು, ಬಳಿಕ 9.45ರ ಸುಮಾರಿಗೆ ಮಂಜುನಾಥ್ ಅವರನ್ನು ಅವಾಚ್ಯವಾಗಿ ನಿಂದಿಸಿ ಕೈ ಹಾಗೂ ಎಡಕಾಲಿನ‌ ತೊಡೆಯ ಮೇಲೆ ಮೊಟ್ಟೆ ಎಸೆದಿದ್ದಾರೆ ಇದೇ ಆರೋಪಿಗಳು. ಕೃತ್ಯ ಎಸಗಿ ಪರಾರಿಯಾಗುತ್ತಿದ್ದ ವೇಳೆ ಜನರ ಕೈಗೆ ಸಿಕ್ಕಿದ ಓರ್ವ ಹುಡುಗ ಅಪ್ರಾಪ್ತ ವಯಸ್ಸಿನವ. ಸಾರ್ವಜನಿಕರು ಯುವಕನಿಗೆ ಧರ್ಮದೇಟು ನೀಡಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಭಟ್ಕಳ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಟ್ಕಳ ಪೊಲೀಸರು ಈಗಾಗಲೇ ಮೂರು ಮಂದಿ ಯುವಕರನ್ನು ವಶಕ್ಕೆ ಪಡೆದಿದ್ದಾರೆ. ಪಿಯುಸಿ ಪರೀಕ್ಷೆಯ ಬಳಿಕ ಉಳಿದ ಮೂವರನ್ನು ವಶಕ್ಕೆ ಪಡೆಯುವುದಾಗಿ ಭಟ್ಕಳ ಪೊಲೀಸರು ತಿಳಿಸಿದ್ದಾರೆ. ಮೊಟ್ಟೆ ಎಸೆಯುವ ಹಿಂದೆ ಯುವಕರ ಉದ್ದೇಶದ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Also Read: ದಾವಣಗೆರೆಯ ದಾರುಣ ಘಟನೆ: ಆಂಬುಲೆನ್ಸ್​ನಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ಕೊನೆಯುಸಿರೆಳೆದ ನವಜಾತ ಶಿಶು

Also Read: NIA First Report: ಶಿವಮೊಗ್ಗ ಹರ್ಷ ಕೊಲೆ ಹಿಂದೆ ವೈಯಕ್ತಿಕ ದ್ವೇಷ ಅಲ್ಲ; ಕೋಮು ಗಲಭೆ ಸೃಷ್ಟಿಸುವ ಹುನ್ನಾರವಿತ್ತು- ಎನ್‌ಐಎ ವರದಿ

Published On - 2:00 pm, Sat, 9 April 22

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್