AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಹಿಂದೂ ಮಹಾ ಗಣಪತಿ ಶೋಭಾಯಾತ್ರೆ: ಶಿವಮೊಗ್ಗ ಕೇಸರಿಮಯ, ಅರ್ಧ ದಿನ ಶಾಲೆಗಳಿಗೆ ರಜೆ

ಶಿವಮೊಗ್ಗ ಹಿಂದೂ ಮಹಾ ಮಂಡಳದ ಗಣೇಶ ವಿಸರ್ಜನೆ ನಾಳೆ ನಡೆಯಲಿದ್ದು, ಇದಕ್ಕೂ ಮುನ್ನ ನಗರದಲ್ಲಿ ಬೃಹತ್ ಶೋಭಾಯಾತ್ರೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಕೇಸರಿಮಯವಾಗುವ‌ ಜೊತೆಗೆ ವಿವಿಧ‌‌ ದೇವತೆಗಳ ಪುತ್ಥಳಿಯನ್ನು ಆಕರ್ಷಣಿಯವಾಗಿ ಸ್ಥಾಪಿಸಲಾಗಿದೆ. ಜೊತೆಗೆ ಯಾವುದೇ ಅಹಿತಕ ಘಟನೆಗಳು ನಡೆಯದಂತೆ ಪೊಲೀಸರು ಸಹ ಕಟ್ಟುನಿಟ್ಟಿನ ಕ್ರಮಕೈಗೊಂಡಿದ್ದಾರೆ.

ನಾಳೆ ಹಿಂದೂ ಮಹಾ ಗಣಪತಿ ಶೋಭಾಯಾತ್ರೆ: ಶಿವಮೊಗ್ಗ ಕೇಸರಿಮಯ, ಅರ್ಧ ದಿನ ಶಾಲೆಗಳಿಗೆ ರಜೆ
Shivamogga Hindu Ganesh
ಬಸವರಾಜ್​ ಯರಗಣವಿ
| Edited By: |

Updated on: Sep 24, 2026 | 7:18 PM

Share

ಶಿವಮೊಗ್ಗ, ಸೆಪ್ಟೆಂಬರ್ 24): ಶಿವಮೊಗ್ಗ ವಾಣಿಜ್ಯ ಕೇಂದ್ರ ಗಾಂಧಿ‌ ಬಜಾರ್ ಪ್ರವೇಶ ದ್ವಾರದಲ್ಲಿ ಪ್ರತಿಷ್ಠಾಪಿಸಲಾಗಿರುವ ಹಿಂದೂ ಮಹಾ ಗಣಪತಿ ವಿಸರ್ಜನೆ ಕಾರ್ಯಕ್ರಮ ನಾಳೆ (ಸೆ.25) ನಡೆಯಲಿದೆ. ಇದಕ್ಕೂ ಮುನ್ನ ಶಿವಮೊಗ್ಗ ನಗರದಲ್ಲಿ ಬೃಹತ್ ಶೋಭಾಯಾತ್ರೆ ನಡೆಯಲಿದ್ದು,ಈ ಶೋಭಾಯಾತ್ರೆಯಲ್ಲಿ ವಿವಿಧ ಕಲಾ ತಂಡಗಳು, ವಾದ್ಯಗಳು, ಡಿಜೆ ಸೌಂಡ್ ಇರಲಿದೆ. ಇನ್ನು ನಗರ ಫುಲ್ ಕೇಸರಿಮಯವಾಗಿದೆ. ಮೆರವಣಿಗೆ ಸಾಗುವ ಎಸ್ ಪಿ ಎಂ ರಸ್ತೆ ರಾಮಣ್ಣ ಶ್ರೇಷ್ಟಿ ಪಾರ್ಕ್, ಗಾಂಧಿ ಬಜಾರ್, ನೆಹರು ರಸ್ತೆ, ಟಿ.ಶೀನಪ್ಪ‌ ಶೆಟ್ಟಿ ವೃತ್ತದಲ್ಲಿ‌ ಭಜನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ದುರ್ಗಿಗುಡಿ ಮುಖ್ಯ ರಸ್ತೆ, ಬಿ.ಆರ್.ಅಂಬೇಡ್ಕರ್ ವೃತ್ತ, ಕುವೆಂಪು ರಸ್ತೆ, ವೀರ ಶಿವಮೂರ್ತಿ ವೃತ್ತ, ಸರ್.ಎಂ.ವಿಶ್ವೇಶ್ವರಯ್ಯ ರಸ್ತೆ, ಮಹಾವೀರ ವೃತ್ತ, ಕುವೆಂಪು ರಂಗ ಮಂದಿರ ರಸ್ತೆ, ಬಸವೇಶ್ವರ ವೃತ್ತ, ಕಾನ್ವೆಂಟ್ ರಸ್ತೆ, ಬಿ.ಹೆಚ್.ರಸ್ತೆಯ ಮೂಲಕ ಕೋಟೆ ಠಾಣೆಯ ರಸ್ತೆ ಹೀಗೆ ಗಣಪತಿ ಮೆರವಣಿಗೆ ಸಾಗುವ ರಸ್ತೆಯಲ್ಲಿ ಕೇಸರಿ‌ ಬಂಟಿಗ್ಸ್ ಕಟ್ಟಲಾಗಿದೆ.

ಬೆಳಗ್ಗೆಯಿಂದಲೇ ಶೋಭಾಯಾತ್ರೆ ಶುರು

ಶಿವಮೊಗ್ಗದ ನಗರದಲ್ಲಿ 82ನೇ ವರ್ಷದ ಹಿಂದೂ ಸಂಘಟನ ಮಹಾ ಮಂಡಲದ ರಾಜಬೀದಿ ಉತ್ಸವ ಬೆಳಗ್ಗೆ 10.30ರ ಸುಮಾರಿಗೆ ವೈಭವದ ರಾಜಬೀದಿ ಉತ್ಸವ ಪ್ರಾರಂಭವಾಗುತ್ತದೆ. ಇದರಿಂದ ಕೇಸರಿ ಹಿಂದೂ ಅಲಂಕಾರ ಸಮಿತಿ ಅವರು ನಗರವನ್ನು ಕೇಸರಿಮಯ ಮಾಡಿದ್ದಾರೆ. ನಗರದ ಗಾಂಧಿ ಬಜಾರ್ ಪ್ರವೇಶ ದ್ವಾರದಲ್ಲಿ ಆಂಜನೇಯ ಎದೆ ಸೀಳಿ‌‌ ಶ್ರೀರಾಮ ಸೀತಾ ಮಾತೆಯನ್ನು ತೋರಿಸುತ್ತಿರುವ ಅಲಂಕಾರವನ್ನು ಮಾಡಲಾಗಿದೆ‌.

ಇದನ್ನೂ ಓದಿ: ಸೆ 28ರಂದು ಬಿ‌ಸಿ ರೋಡ್ ಚಲೋ: ಮೈಸೂರು ಬಳಿಕ ಮಂಗಳೂರು ಪೊಲೀಸರ ವಿರುದ್ಧವೂ ಪ್ರತಾಪ್ ಸಿಂಹ ಹೋರಾಟ

ಪೊಲೀಸ್ ಭದ್ರತೆ ಹೇಗಿದೆ?

ಗಣಪತಿ ಮೆರವಣಿಗೆ ಹಿನ್ನೆಲೆಯಲ್ಲಿ ವಾಹನ ಸಂಚಾರವನ್ನು ಬೇರೆ ಕಡೆ ಡೈವರ್ಟ್ ಮಾಡಲಾಗಿದೆ. ಅಲ್ಲದೇ ಮೆರವಣಿಗೆಗಾಗಿ ಜಿಲ್ಲಾ‌ ಪೊಲೀಸ್ ಬಿಗಿ ಬಂದೋ‌ಬಸ್ತ್ ವ್ಯವಸ್ಥೆ ಮಾಡಲಾಗಿದೆ. ಈ ಕುರಿತು ಮಾಹಿತಿ ನೀಡಿದ ಎಸ್​ಪಿ ನಿಖಿಲ್ , ಮೆರವಣಿಗೆಗಾಗಿ 3 ಸಾವಿರಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ. ಎಸ್ಪಿ ರ್ಯಾಂಕಿಗ್​ನಲ್ಲಿ 5 ಜನರನ್ನು ನೇಮಿಸಲಾಗಿದೆ. ಡಿವೈಎಸ್ಪಿ- 22, ಸಿಪಿಐ -84, ಪಿಎಸ್ಐ ಹಾಗೂ ತರಬೇತಿ ಪಿಎಸ್ಐ ಸೇರಿ -289, ಎಎಸ್​​ಐ-108, ಹೆಚ್​ಸಿ-2134, ಹೋಂ ಗಾರ್ಡ್-600 ಕೆಎಸ್ಆರ್ ಪಿ-12, ಡಿಎಆರ್-10, ಕ್ಯೂಆರ್​ಟಿ-1, ಡಿ ಸ್ಜ್ಯಾಡ್-1, ಆರ್​ಎಎಫ್-2, ಎಸ್​​​​ಆರ್​​ಎಎಫ್​ -1 ಹಾಗೂ 7 ಅಗ್ನಿ ಶಾಮಕದಳ, 4 ಅಂಬ್ಯುಲೆನ್ಸ್, 3,500 ಸಿಸಿ ಕ್ಯಾಮರಾ ಹಾಗೂ 12 ಡ್ರೋನ್​ಗಳನ್ನು ನೇಮಕ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾದ್ಯಂತ 35 ಜನರನ್ನು ಗಡಿಪಾರು ಮಾಡಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ನಗರದ ಶಾಲೆಗಳಿಗೆ ಅರ್ಧ ದಿನ ರಜೆ

ಇನ್ನು ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರದ ಶಾಲೆಗಳಿಗೆ ನಾಳೆ (ಸೆ.25) ರಜೆ ನೀಡಲು ಸೂಚಿಸಲಾಗಿದೆ.  ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಶಿವಮೊಗ್ಗ ನಗರ ಶಾಲಾ ಅವಧಿಯಲ್ಲಿ ಬದಲಾವಣೆ ಮಾಡಲಾಗಿದ್ದು, ನಾಳೆ ಬೆಳಿಗ್ಗೆ 8:30 ರಿಂದ 12:30 ರವರೆಗೆ ಮಾತ್ರ ತರಗತಿಗಳು / ಪರೀಕ್ಷೆಗಳು ನಡೆಯಲಿವೆ. ಇನ್ನುಳಿದಂತೆ ​ಮಧ್ಯಾಹ್ನದ ನಂತರ ಶಿವಮೊಗ್ಗ ನಗರ ವ್ಯಾಪ್ತಿಯ ಶಾಲೆಗಳಿಗೆ ರಜೆ ನೀಡಲು ಮುಖ್ಯ ಶಿಕ್ಷಕರಿಗೆ ಶಾಲಾ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಇನ್ನು ​SSLC ಅರ್ಧವಾರ್ಷಿಕ ಪರೀಕ್ಷೆಗಳು ನಿಗದಿತ ವೇಳಾಪಟ್ಟಿಯಂತೆ ನಡೆಯಲಿವೆ. ​SSLC ಪರೀಕ್ಷೆ ಬೆಳಿಗ್ಗೆ 9:00 ರಿಂದ ಮಧ್ಯಾಹ್ನ 1:30 ರವರೆಗೆ ಯಥಾವತ್ ಆಗಿ ನಡೆಯಲಿವೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಸವರಾಜ್​ ಯರಗಣವಿ
ಬಸವರಾಜ್​ ಯರಗಣವಿ

ಬಸವರಾಜ್ ಯರಗಣವಿಯವರು ಮೂಲತಃ ಧಾರವಾಡ ಜಿಲ್ಲೆಯವರು. ಇವರು ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ವರದಿಗಾರರಾಗಿ 2008ರ ಏಪ್ರಿಲ್ ನಿಂದ ವೃತ್ತಿ ಆರಂಭಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 3 ವರ್ಷ, ನಂತರ ಹಾವೇರಿ ಜಿಲ್ಲೆಯಲ್ಲಿ 3 ವರ್ಷ ವರದಿಗಾರಿಕೆಯ ಕೆಲಸ ನಿರ್ವಹಿಸಿದ್ದಾರೆ. ಸಧ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಟಿವಿ9 ಕನ್ನಡ ಸುದ್ದಿ ವಾಹಿನಿಯ ಹಿರಿಯ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜಿಲ್ಲೆಯ ರಾಜಕೀಯ, ಅಪರಾಧ, ಮಹತ್ವದ ಬೆಳವಣಿಗೆ ಹಾಗೂ ಮಾನವೀಯ ಸುದ್ದಿಗಳನ್ನು ವರದಿ ಮಾಡಿರುವ ಅನುಭವವಿದೆ.

Read More
ಹುಬ್ಬಳ್ಳಿ-ಧಾರವಾಡ ಪೊಲೀಸರ ಬಿಗ್ ಆಪರೇಷನ್
ಹುಬ್ಬಳ್ಳಿ-ಧಾರವಾಡ ಪೊಲೀಸರ ಬಿಗ್ ಆಪರೇಷನ್
'ಎಸ್​​ಐಆರ್​​ ಇಲ್ಲದಿದ್ದರೆ ಅವರಪ್ಪನ ಆಣೆ ಬಿಜೆಪಿ ಗೆಲ್ಲಲ್ಲ'
'ಎಸ್​​ಐಆರ್​​ ಇಲ್ಲದಿದ್ದರೆ ಅವರಪ್ಪನ ಆಣೆ ಬಿಜೆಪಿ ಗೆಲ್ಲಲ್ಲ'
ಬಿಗ್ ಬಾಸ್ ಕನ್ನಡ 13: ಕ್ಯಾಪ್ಟನ್ ಆಗಲು ಯೋಗ್ಯತೆ ಇಲ್ಲದ ಸ್ಪರ್ಧಿಗಳು ಯಾರು?
ಬಿಗ್ ಬಾಸ್ ಕನ್ನಡ 13: ಕ್ಯಾಪ್ಟನ್ ಆಗಲು ಯೋಗ್ಯತೆ ಇಲ್ಲದ ಸ್ಪರ್ಧಿಗಳು ಯಾರು?
ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ನೀರು: ಬರಿದಾಗುತ್ತಿರುವ KRS!
ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ನೀರು: ಬರಿದಾಗುತ್ತಿರುವ KRS!
ಎಳೆದಾಡಿದ ಪೊಲೀಸ್ರು: ಅಂಗಿ ಬಿಚ್ಚಿ ಗಾಯ ತೋರಿಸಿದ ರವಿಕುಮಾರ್
ಎಳೆದಾಡಿದ ಪೊಲೀಸ್ರು: ಅಂಗಿ ಬಿಚ್ಚಿ ಗಾಯ ತೋರಿಸಿದ ರವಿಕುಮಾರ್
ಅಣ್ಣನ ಆರೋಗ್ಯ ವಿಚಾರಿಸಲು ಬೆಂಗಳೂರಿಗೆ ಬಂದ ರಜನೀಕಾಂತ್
ಅಣ್ಣನ ಆರೋಗ್ಯ ವಿಚಾರಿಸಲು ಬೆಂಗಳೂರಿಗೆ ಬಂದ ರಜನೀಕಾಂತ್
ಬಸ್ ದರ ಏರಿಕೆ ಖಂಡಿಸಿ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಬಿಜೆಪಿ ಪ್ರತಿಭಟನೆ
ಬಸ್ ದರ ಏರಿಕೆ ಖಂಡಿಸಿ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಬಿಜೆಪಿ ಪ್ರತಿಭಟನೆ
‘ಎಲ್ಲರೂ ನೋಡಲೇಬೇಕಾದ ಸಿನಿಮಾ’; ರಾಮಾಯಣ ನೋಡಿ ವಿಮರ್ಶೆ ಕೊಟ್ಟ ಫ್ಯಾನ್ಸ್
‘ಎಲ್ಲರೂ ನೋಡಲೇಬೇಕಾದ ಸಿನಿಮಾ’; ರಾಮಾಯಣ ನೋಡಿ ವಿಮರ್ಶೆ ಕೊಟ್ಟ ಫ್ಯಾನ್ಸ್
ಚನ್ನಪಟ್ಟಣ: ಸುಳ್ಳೇರಿ ಗ್ರಾಮದಲ್ಲಿ ಮನೆ ಬಳಿಗೇ ಬರುತ್ತಿದೆ ಚಿರತೆ!
ಚನ್ನಪಟ್ಟಣ: ಸುಳ್ಳೇರಿ ಗ್ರಾಮದಲ್ಲಿ ಮನೆ ಬಳಿಗೇ ಬರುತ್ತಿದೆ ಚಿರತೆ!
ಹಣ ಹಾಕಿದ್ರೆ ದೀಪಾವಳಿ ಹಬ್ಬ ಜೋರಾಗಿ ಮಾಡುತ್ತೇವೆ: ಗೃಹಲಕ್ಷ್ಮೀಯರು
ಹಣ ಹಾಕಿದ್ರೆ ದೀಪಾವಳಿ ಹಬ್ಬ ಜೋರಾಗಿ ಮಾಡುತ್ತೇವೆ: ಗೃಹಲಕ್ಷ್ಮೀಯರು