ಶಿವಮೊಗ್ಗ: ಮಕ್ಕಳಾಗಿಲ್ಲ ಎಂದು ಕಿರುಕುಳ; ಮನನೊಂದ ಮಹಿಳೆ ಆತ್ಮಹತ್ಯೆಗೆ ಶರಣು

ಶಿವಮೊಗ್ಗದ (Shivamogga) ಗಾಡಿಕೊಪ್ಪದ ಮನೆಯೊಂದರಲ್ಲಿ ಮಕ್ಕಳಾಗಿಲ್ಲ ಎಂಬ ಕಿರುಕುಳಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಈ ಹಿನ್ನಲೆ ಪತಿ ಅಭಿಷೇಕ್ ಹಾಗೂ ಮನೆಯವರಿಂದ ಕಿರುಕುಳ ಆರೋಪ ಕೇಳಿಬಂದಿದ್ದು, ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಶಿವಮೊಗ್ಗ: ಮಕ್ಕಳಾಗಿಲ್ಲ ಎಂದು ಕಿರುಕುಳ; ಮನನೊಂದ ಮಹಿಳೆ ಆತ್ಮಹತ್ಯೆಗೆ ಶರಣು
ಶಿವಮೊಗ್ಗದಲ್ಲಿ ಮಕ್ಕಳಾಗಿಲ್ಲ ಎಂದು ಗಂಡನಿಂದ ಕಿರುಕುಳ; ಮನನೊಂದ ಮಹಿಳೆ ಆತ್ಮಹತ್ಯೆಗೆ ಶರಣು
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Mar 30, 2024 | 4:46 PM

ಶಿವಮೊಗ್ಗ, ಮಾ.30: ಮಕ್ಕಳಾಗಿಲ್ಲ ಎಂಬ ಕಿರುಕುಳಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ (Shivamogga) ಗಾಡಿಕೊಪ್ಪದ ಮನೆಯೊಂದರಲ್ಲಿ ನಡೆದಿದೆ. ಅಶ್ವಿನಿ(31) ನೇಣಿಗೆ ಶರಣಾದ ಮಹಿಳೆ. ಇವರು ಮದುವೆಯಾಗಿ 5 ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಈ ಹಿನ್ನಲೆ ಪತಿ ಅಭಿಷೇಕ್ ಹಾಗೂ ಮನೆಯವರಿಂದ ಕಿರುಕುಳ ಆರೋಪ ಕೇಳಿಬಂದಿದೆ. ಇದರಿಂದ ನೇಣು ಬಿಗಿದುಕೊಂಡು ಮಹಿಳೆ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕಾಫಿ ಡೇ ಬಳಿಯ ಹೆದ್ದಾರಿ ಪಕ್ಕದಲ್ಲಿ ಲಾರಿ ನಿಲ್ಲಿಸಿ ಡ್ರೈವರ್​ ಆತ್ಮಹತ್ಯೆ

ಕೋಲಾರ: ಕಾಫಿ ಡೇ ಬಳಿಯ ಹೆದ್ದಾರಿ ಪಕ್ಕದಲ್ಲಿ ಲಾರಿ ನಿಲ್ಲಿಸಿ ಡ್ರೈವರ್​ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ತಾಲೂಕಿನ ನರಸಾಪುರ ಕಾಫಿ ಡೇ ಬಳಿ ನಡೆದಿದೆ. ಶ್ರೀನಿವಾಸಪುರದ ಮಂಜುನಾಥ್​​ ಆತ್ಮಹತ್ಯೆಗೆ ಶರಣಾದ ಡ್ರೈವರ್​​, ಮೃತ ಮಂಜುನಾಥ್​ ಓಡಿಸುತ್ತಿದ್ದ ಲಾರಿ ಮಾಲೀಕ ನೆಲಮಂಗಲದವರಾಗಿದ್ದು, ವೇಮಗಲ್​​ ಠಾಣೆ ಪೊಲೀಸರು ಆತ್ಮಹತ್ಯೆಗೆ ನಿಖರ ಮಾಹಿತಿ ಕಲೆಹಾಕುತ್ತಿದ್ದಾರೆ.

ಇದನ್ನೂ ಓದಿ:ಮಗುವಿನೊಂದಿಗೆ ನೇತ್ರಾವತಿ ನದಿಗೆ ಹಾರಿದ ತಾಯಿ, ಉಡುಪಿಯಲ್ಲಿ ಮಹಿಳಾ ಪೇದೆ ಆತ್ಮಹತ್ಯೆ

ಹೃದಯಾಘಾತದಿಂದ ಕರ್ತವ್ಯನಿರತ ಯೋಧ ಸಾವು

ಕೋಲಾರ: ಕರ್ತವ್ಯದಲ್ಲಿದ್ದಾಗಲೇ ಯೋಧ ಹೃದಯಾಘಾತದಿಂದ ಕೊನೆಯುಸಿರೆಳೆದಿರುವ ಘಟನೆ ನಿನ್ನೆ(ಮಾ.29) ರಾತ್ರಿ ಜಮ್ಮು-ಕಾಶ್ಮೀರದ ಶಿಲಾನ್​ನಲ್ಲಿ ನಡೆದಿದೆ. ಅಮರನಾಥ್ (55) ಹೃದಯಾಘಾತದಿಂದ ಮೃತಪಟ್ಟ ಯೋಧ, ಇವರು ಕೋಲಾರ ನಗರದ ಗಲ್ ಪೇಟೆ ನಿವಾಸಿಯಾಗಿದ್ದು, ಕಳೆದ 30 ವರ್ಷಗಳಿಂದ ಲೆಫ್ಟಿನೆಂಟ್ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಇನ್ನು ಇವರು ಹಲವು ವರ್ಷಗಳ ಹಿಂದೆಯೇ ದೇಹವನ್ನು ವೀರ ಯೋಧರಿಗಾಗಿ ದಾನ ಮಾಡಿದ್ದಾರೆ. ಜೊತೆಗೆ ಕೋಲಾರ ಜಯ ನಗರದಲ್ಲಿ ನಿರ್ಮಾಣ ಮಾಡಲಾದ ಯೋಧರ ಸ್ಮಾರಕಕ್ಕೆ ಕಾರ್ಗಿಲ್ ಯುದ್ದ ಭೂಮಿಯಿಂದ ಮಣ್ಣನ್ನ ತಂದಿದ್ದರು. ಭಾರತಾಂಭೆ ಅಪ್ಪಟ ಅಭಿಮಾನಿಯಾಗಿ, ದೇಶ ಕಾಯುವ ಜೊತೆಗೆ ಹಲವು ಸಮಾಜ ಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದ ಯೋಧ, ಅಮರನಾಥ್ ಅವರು ಸಾವನ್ನಪ್ಪಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:42 pm, Sat, 30 March 24

ತಾಜಾ ಸುದ್ದಿ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ