ಪ್ರವಾಸಿಗರ ಗಮನಕ್ಕೆ: ವಿಶ್ವವಿಖ್ಯಾತ ಜೋಗ ಜಲಪಾತ ಎರಡೂವರೆ ತಿಂಗಳು ಬಂದ್!

ವಿಶ್ವವಿಖ್ಯಾತ ಜೋಗ ಜಲಪಾತದ ಕಡೆ ಹೋಗುವವರಿಗೆ ಇದು ಅತ್ಯಂತ ಮುಖ್ಯವಾದ ಮಾಹಿತಿ. ಏಕೆಂದರೆ ಜೋಗ ಜಲಪಾತ ವೀಕ್ಷಣೆಗೆ ನಿರ್ಬಂಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಬರೋಬ್ಬರಿ ಎರಡುವರೆ ತಿಂಗಳು ಜೋಗ ಜಲಪಾತ ವಿಕ್ಷಣೆಗೆ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ. ಹೀಗಾಗಿ ಪ್ರವಾಗರು ಜೋಗಕ್ಕೆ ಹೋಗುವ ಪ್ಲ್ಯಾನ್ ಹಾಕಿದ್ದವರು ಇದನ್ನು ಗಮನಿಸಲೇಬೇಕು. ಹಾಗಾದ್ರೆ, ಜೋಗ ಯಾವಾಗಿನಿಂದ ಬಂದ್? ಕಾರಣವೇನು ಎನ್ನುವ ವಿವರ ಈ ಕೆಳಗಿನಂತಿದೆ.

ಪ್ರವಾಸಿಗರ ಗಮನಕ್ಕೆ: ವಿಶ್ವವಿಖ್ಯಾತ ಜೋಗ ಜಲಪಾತ ಎರಡೂವರೆ ತಿಂಗಳು ಬಂದ್!
ಜೋಗ್ ಫಾಲ್ಸ್
Follow us
Basavaraj Yaraganavi
| Updated By: ರಮೇಶ್ ಬಿ. ಜವಳಗೇರಾ

Updated on: Dec 16, 2024 | 3:14 PM

ಶಿವಮೊಗ್ಗ, (ಡಿಸೆಂಬರ್ 16): ಕರ್ನಾಟಕದ ಪ್ರಮುಖ ಆಕರ್ಷಣೆಯಾದ ಜೋಗ್ ಫಾಲ್ಸ್ ಅಥವಾ ಜೋಗ ಜಲಪಾತ ವೀಕ್ಷಣೆಗೆ ಎರಡೂವರೆ ತಿಂಗಳ ಕಾಲ ನಿರ್ಬಂಧ ಹೇರಲಾಗಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಜನವರಿ 1ರಿಂದ ಮಾರ್ಚ್​ 15ರವರೆಗೆ ನಿರ್ಬಂಧಿಸಲಾಗಿದೆ. ಜೋಗ ಜಲಪಾತದ ಮುಖ್ಯದ್ವಾರದಲ್ಲಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಎರಡೂವರೆ ತಿಂಗಳ ಕಾಲ ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಬರುವ ಮನಮೋಹಕ, ಕಣ್ಮನ ಸೆಳೆಯುವ ಜೋಗ ಜಲಪಾತ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಈಗ ಚಳಿಗಾಲ ಆಗಿದ್ದರಿಂದ ನೋಡಲು ಇನ್ನಷ್ಟು ಖುಷಿ ಕೊಡುತ್ತದೆ. ಹೀಗಾಗಿ ಶೈಕ್ಷಣಿಕ ಪ್ರವಾಸಕ್ಕಾಗಿ ಶಾಲಾ-ಕಾಲೇಜು ಮಕ್ಕಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಜೋಗ ಜಲಪಾತಕ್ಕೆ ಬರುವುದು ಸಾಮಾನ್ಯ.

ಇದನ್ನೂ ಓದಿ: ನಾಲ್ವರು ವಿದ್ಯಾರ್ಥಿಗಳ ಸಾವು ಬೆನ್ನಲ್ಲೇ ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಈಗ ಜಲಪಾತದ ಮುಖ್ಯದ್ವಾರದ ಕಾಮಗಾರಿ ಹಾಗೂ ಪ್ರವಾಸಿಗರಿಗೆ ಬೇಕಾದಂತ ಮೂಲ ಸೌಕರ್ಯದ ಕೆಲಸಗಳನ್ನು ಮಾಡಲಾಗುತ್ತಿದೆ. ಜೋಗ ಜಲಪಾತದ ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜನವರಿ 1ರಿಂದ ಮಾರ್ಚ್ 15ರವರೆಗೆ ಅಂದರೆ ಒಟ್ಟು 74 ದಿನಗಳವರೆಗೆ ಸಾರ್ವಜನಿಕರ ಹಾಗೂ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ.

ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಸಮಸ್ಯೆ ಆಗಬಾರದು ಎಂಬ ಕಾರಣದಿಂದ ಪ್ರವೇಶ ನಿರ್ಬಂಧ ಮಾಡಲಾಗಿದೆ. ಇದಕ್ಕೆ ಜನರು ಹಾಗೂ ಪ್ರವಾಸಿಗರು ಸಹಕರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮನವಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಿಜಯೇಂದ್ರ-ಭೈರೇಗೌಡ ನಡುವೆ ವಾಗ್ವಾದ, ಸ್ಪೀಕರ್ ಯುಟಿ ಖಾದರ್ ಅಸಹಾಯಕ
ವಿಜಯೇಂದ್ರ-ಭೈರೇಗೌಡ ನಡುವೆ ವಾಗ್ವಾದ, ಸ್ಪೀಕರ್ ಯುಟಿ ಖಾದರ್ ಅಸಹಾಯಕ
ಅಧಿಕಾರದಲ್ಲಿರೋದು ಮುಸ್ಲಿಂ ಓಲೈಕೆಯ ಹಿಂದೂ ವಿರೋಧಿ ಸರ್ಕಾರ: ಯತ್ನಾಳ್
ಅಧಿಕಾರದಲ್ಲಿರೋದು ಮುಸ್ಲಿಂ ಓಲೈಕೆಯ ಹಿಂದೂ ವಿರೋಧಿ ಸರ್ಕಾರ: ಯತ್ನಾಳ್
150 ಕೋಟಿ ಆಮಿಷ ಆರೋಪವನ್ನು ಸಿಬಿಐಗೆ ವಹಿಸಲಿ: ವಿಜಯೇಂದ್ರ ಆಗ್ರಹ
150 ಕೋಟಿ ಆಮಿಷ ಆರೋಪವನ್ನು ಸಿಬಿಐಗೆ ವಹಿಸಲಿ: ವಿಜಯೇಂದ್ರ ಆಗ್ರಹ
ಚೌಲಗೆರೆ ಬಳಿ ಹೊಸ ಟೋಲ್​ಗೆ ತೀವ್ರ ವಿರೋಧ, ಹೆದ್ದಾರಿ ತಡೆದು ಪ್ರತಿಭಟನೆ
ಚೌಲಗೆರೆ ಬಳಿ ಹೊಸ ಟೋಲ್​ಗೆ ತೀವ್ರ ವಿರೋಧ, ಹೆದ್ದಾರಿ ತಡೆದು ಪ್ರತಿಭಟನೆ
ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ಸುಳ್ಳು ಆರೋಪ ಮಾಡುತ್ತಿದೆ: ಆರ್ ಅಶೋಕ
ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ಸುಳ್ಳು ಆರೋಪ ಮಾಡುತ್ತಿದೆ: ಆರ್ ಅಶೋಕ
Assembly Session: ಚರ್ಚೆಯಾಗುತ್ತಿವೆ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳು
Assembly Session: ಚರ್ಚೆಯಾಗುತ್ತಿವೆ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳು
ಭಿನ್ನಾಭಿಪ್ರಾಯಗಳನ್ನು ಸಾರ್ವಜನಿಕವಾಗಿ ತೋರ್ಪಡಿಸದ ಸಿಎಂ ಮತ್ತು ಡಿಸಿಎಂ
ಭಿನ್ನಾಭಿಪ್ರಾಯಗಳನ್ನು ಸಾರ್ವಜನಿಕವಾಗಿ ತೋರ್ಪಡಿಸದ ಸಿಎಂ ಮತ್ತು ಡಿಸಿಎಂ
ಮಾಯೋಟ್​ನಲ್ಲಿ ಚಿಡೋ ಚಂಡಮಾರುತದ ಅಬ್ಬರ, ಸಾವಿರಕ್ಕೂ ಅಧಿಕ ಮಂದಿ ಸಾವು
ಮಾಯೋಟ್​ನಲ್ಲಿ ಚಿಡೋ ಚಂಡಮಾರುತದ ಅಬ್ಬರ, ಸಾವಿರಕ್ಕೂ ಅಧಿಕ ಮಂದಿ ಸಾವು
Video: ಪೊಲೀಸ್​ ವಾಹನ ಡಿಕ್ಕಿ ರಭಸಕ್ಕೆ ಗಾಳಿಯಲ್ಲಿ ಹಾರಿ ಬಿದ್ದ ವ್ಯಕ್ತಿ
Video: ಪೊಲೀಸ್​ ವಾಹನ ಡಿಕ್ಕಿ ರಭಸಕ್ಕೆ ಗಾಳಿಯಲ್ಲಿ ಹಾರಿ ಬಿದ್ದ ವ್ಯಕ್ತಿ
ಬೆಂಗಳೂರು: ಇಡೀ ಮೊಬೈಲ್​ ಅಂಗಡಿಯನ್ನೇ ದೋಚಿದ ಖದೀಮರು! ವಿಡಿಯೋ ನೋಡಿ
ಬೆಂಗಳೂರು: ಇಡೀ ಮೊಬೈಲ್​ ಅಂಗಡಿಯನ್ನೇ ದೋಚಿದ ಖದೀಮರು! ವಿಡಿಯೋ ನೋಡಿ