ಡಿಪೋ ಮ್ಯಾನೇಜರ್ ಕಿರುಕುಳ: ನೇಣಿಗೆ ಕೊರಳೊಡ್ಡಿದ KSRTC ಚಾಲಕ, ಬಸ್ನಲ್ಲೇ ಶವ ರವಾನೆ
ಶಿವಮೊಗ್ಗದ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದ ಮನೆಯೊಂದರಲ್ಲಿ ಕೆಎಸ್ಆರ್ಟಿಸಿ ಡ್ರೈವರ್ ನೇಣಿಗೆ ಶರಣಾಗಿದ್ದಾರೆ. ಕಳೆದ ಸೋಮವಾರದಂದು ಘಟನೆ ನಡೆದಿದ್ದು, ತಡವಾಗಿ ಘಟನೆ ಬಂದಿದೆ. ಕಳೆದ ಒಂದೂವರೆ ತಿಂಗಳಿಂದ ಕರ್ತವ್ಯಕ್ಕೆ ಹಾಜರಾಗಲು ಅವಕಾಶ ಸಿಗದೆ ಮನನೊಂದು ನೇಣು ಹಾಕಿಕೊಂಡಿದ್ದಾರೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ, ಜನವರಿ 08: ಕೆಎಸ್ಆರ್ಟಿಸಿ ಬಸ್ ಚಾಲಕ (KSRTC Driver) ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದಲ್ಲಿ ನಡೆದಿದೆ. ನಾಗಪ್ಪ (54) ಆತ್ಮಹತ್ಯೆ ಮಾಡಿಕೊಂಡ ಬಸ್ ಚಾಲಕ. ಡ್ಯೂಟಿ ನೀಡದೇ ಡಿಪೋ ಮ್ಯಾನೇಜರ್ ಕಿರುಕುಳ ನೀಡಿದ್ದ ಆರೋಪ ಕೇಳಿಬಂದಿದೆ. ಸದ್ಯ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡ್ಯೂಟಿ ನೀಡಿದೆ ಡಿಪೋ ಮ್ಯಾನೇಜರ್ ಕಿರುಕುಳ
ಮೃತ ಕೆಎಸ್ಆರ್ಟಿಸಿ ಬಸ್ ಚಾಲಕ ನಾಗಪ್ಪ, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಬಳಿಯ ತ್ಯಾಗರ್ತಿ ಗ್ರಾಮದಲ್ಲಿ ವಾಸವಿದ್ದರು. ನಾಗಪ್ಪ ಅವರಿಗೆ ಕಳೆದ ಒಂದೂವರೆ ತಿಂಗಳಿಂದ ಡಿಪೋ ಮ್ಯಾನೇಜರ್ ಡ್ಯೂಟಿ ನೀಡಿರಲಿಲ್ಲ. ಮೂರ್ನಾಲ್ಕು ಬಾರಿ ಡ್ಯೂಟಿ ಸಿಗದೇ ಮನೆಗೆ ವಾಪಸ್ ಕೂಡ ಬಂದಿದ್ದರು.
ಇದನ್ನೂ ಓದಿ: ಪ್ರತ್ಯೇಕ ಘಟನೆ: ರಸ್ತೆ ಬದಿ ನಿಲ್ಲಿಸಿದ್ದ ಕಾರಿನಲ್ಲಿ ವ್ಯಕ್ತಿಯ ಶವ ಪತ್ತೆ, 16ನೇ ಮಹಡಿಯಿಂದ ಬಿದ್ದು ಟೆಕ್ಕಿ ಸಾವು
ಡ್ಯೂಟಿ ಸಿಗದ ಕಾರಣ ನಾಗಪ್ಪ ಸಾಕಷ್ಟು ಮನನೊಂದಿದ್ದರು. ಹೀಗಾಗಿ ಕಳೆದ ಸೋಮವಾರ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೆಗ್ಗಾನ್ ಆಸ್ಪತ್ರೆಯಲ್ಲಿ ನಾಲ್ಕು ದಿನದ ಬಳಿಕ ಕೊನೆಯುಸಿರೆಳೆದಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ನಾಗಪ್ಪ ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಇನ್ನು ಕೆಎಸ್ಆರ್ಟಿಸಿ ನೌಕರರು ಚಾಲಕ ನಾಗಪ್ಪನ ಅಂತಿಮ ದರ್ಶನ ಪಡೆದುಕೊಂಡರು. ಅಷ್ಟೇ ಅಲ್ಲದೆ ಮೃತದೇಹವನ್ನ ಕೆಎಸ್ಆರ್ಟಿಸಿ ಬಸ್ನಲ್ಲೇ ತೆಗೆದುಕೊಂಡು ಹೋದರು.
ಪ್ರೀತಿಸುವಂತೆ ದುಂಬಾಲು ಬಿದ್ದ ಯುವಕ: ಆತ್ಮಹತ್ಯೆ ಮಾಡಿಕೊಂಡ ಅಪ್ರಾಪ್ತೆ
ನೇಣು ಬಿಗಿದುಕೊಂಡು ಅಪ್ರಾಪ್ತ ಯುವತಿ (17) ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದಲ್ಲಿ ನಡೆದಿದೆ. ತನ್ನನ್ನು ಪ್ರೀತಿಸುವಂತೆ ದುಂಬಾಲು ಬಿದ್ದಿದ್ದ ಯುವಕನ ಕಿರುಕುಳಕ್ಕೆ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಮಗಳಿಗೆ ಟಾರ್ಚರ್ ಕೊಡ್ತಿದ್ದ ಅಳಿಯನಿಗೆ ಚಟ್ಟ ಕಟ್ಟಿದ ಮಾವ: ರಾಡ್ನಿಂದ ಹೊಡೆದು ಕೊಲೆ
ಅಪ್ರಾಪ್ತೆಯನ್ನು ಪ್ರೀತಿಸುವಂತೆ ದೇಬೂರು ಗ್ರಾಮದ ಆದಿತ್ಯ ಎಂಬಾತ ದುಂಬಾಲು ಬಿದ್ದಿದ್ದ ಎನ್ನಲಾಗಿದೆ. ಆದಿತ್ಯ ನೀಡುತ್ತಿದ್ದ ಕಿರುಕುಳದ ಬಗ್ಗೆ ಅಪ್ರಾಪ್ತೆ ಪೋಷಕರಿಗೆ ತಿಳಿಸಿದ್ದಳು. ಈ ಬಗ್ಗೆ ಅಪ್ರಾಪ್ತೆ ತಂದೆಯಿಂದ ಆದಿತ್ಯಗೆ ಬುದ್ಧ ಮಾತು ಹೇಳಲಾಗಿತ್ತು. ಹೀಗಿದ್ದರೂ ಆದಿತ್ಯ ವರ್ತನೆ ಬದಲಿಸಿಕೊಂಡಿರಲಿಲ್ಲ. ಹೀಗಾಗಿ ಮನನೊಂದು ಅಪ್ರಾಪ್ತೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಪ್ರಕರಣ ಸಂಬಂಧ ಆದಿತ್ಯ ವಿರುದ್ಧ ಯುವತಿ ತಂದೆ ದೂರು ನೀಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.