AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕಲಚೇತನರ ಪಿಂಚಣಿಗೆ ಲಂಚ ಪಡೆದಿದ್ದ ಉಪ ತಹಶೀಲ್ದಾರ್‌ಗೆ 4 ವರ್ಷ ಜೈಲು, 40 ಸಾವಿರ ರೂ. ದಂಡ

ಶಿವಮೊಗ್ಗದಲ್ಲಿ ವಿಕಲಚೇತನ ಪಿಂಚಣಿಗಾಗಿ ಲಂಚ ಸ್ವೀಕರಿಸುತ್ತಿದ್ದ ಉಪ ತಹಶೀಲ್ದಾರ್ ಪುಷ್ಪಲತಾ ಅವರಿಗೆ ಶಿವಮೊಗ್ಗ ನ್ಯಾಯಾಲಯ 4 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 40 ಸಾವಿರ ರೂ. ದಂಡ ವಿಧಿಸಿದೆ. ಲೋಕಾಯುಕ್ತ ಬಲೆಗೆ ಬಿದ್ದಿದ್ದ ಈ ಭ್ರಷ್ಟ ಅಧಿಕಾರಿಗೆ ತೀರ್ಪು ಬಂದಿದೆ. ಭದ್ರಾವತಿಯ ಕಲ್ಲಿಹಾಳ ನಾಡಕಚೇರಿಯಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣ ಇದಾಗಿದ್ದು, ಸಾರ್ವಜನಿಕ ಸೇವಾ ಕ್ಷೇತ್ರದಲ್ಲಿ ಪಾರದರ್ಶಕತೆ ಕಾಪಾಡುವಲ್ಲಿ ಈ ತೀರ್ಪು ಮಹತ್ವದ್ದಾಗಿದೆ.

ವಿಕಲಚೇತನರ ಪಿಂಚಣಿಗೆ ಲಂಚ ಪಡೆದಿದ್ದ ಉಪ ತಹಶೀಲ್ದಾರ್‌ಗೆ 4 ವರ್ಷ ಜೈಲು, 40 ಸಾವಿರ ರೂ. ದಂಡ
ಭದ್ರಾವತಿ ನ್ಯಾಯಾಲಯ ತೀರ್ಪು
Basavaraj Yaraganavi
| Edited By: |

Updated on: Sep 01, 2026 | 8:45 PM

Share

ಶಿವಮೊಗ್ಗ, ಸೆ.1: ವಿಕಲಚೇತನರ ಪಿಂಚಣಿ ಮಂಜೂರು ಮಾಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಉಪ ತಹಶೀಲ್ದಾರ್‌ಗೆ 4 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 40 ಸಾವಿರ ರೂ. ದಂಡ ವಿಧಿಸಿ ಶಿವಮೊಗ್ಗದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕಲ್ಲಿಹಾಳ ನಾಡಕಚೇರಿಯ ಉಪ ತಹಶೀಲ್ದಾರ್ ಪುಷ್ಪಲತಾ ಶಿಕ್ಷೆಗೆ ಒಳಗಾದ ಭ್ರಷ್ಟ ಅಧಿಕಾರಿಯಾಗಿದ್ದಾರೆ.

ಡಿ.ಬಿ.ಹಳ್ಳಿ ನಿವಾಸಿ ಗಿರೀಶ್ ಎಂಬುವವರು ತಮ್ಮ ಹುಟ್ಟು ಮೂಕ ತಂದೆಗೆ ಅಂಗವಿಕಲರ ಪಿಂಚಣಿ ಕೊಡಿಸಲು ಅರ್ಜಿ ಸಲ್ಲಿಸಿದ್ದರು. ಈ ಕೆಲಸ ಮಾಡಿಕೊಡಲು ಉಪ ತಹಶೀಲ್ದಾರ್ ಪುಷ್ಪಲತಾ 10 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 2017 ರ ಸೆಪ್ಟೆಂಬರ್ 21ರಂದು ಗಿರೀಶ್ ಅವರಿಂದ ಮುಂಗಡವಾಗಿ 5 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪುಷ್ಪಲತಾ ಅವರನ್ನು ರೆಡ್‌ಹ್ಯಾಂಡ್‌ ಆಗಿ ವಶಕ್ಕೆ ಪಡೆದಿದ್ದರು.

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಶಿವಮೊಗ್ಗದ 1ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪುಷ್ಪಲತಾಗೆ 4 ವರ್ಷ ಜೈಲು ಶಿಕ್ಷೆ ಮತ್ತು40 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ. ಈ ಪ್ರಕರಣದಲ್ಲಿ ಲೋಕಾಯುಕ್ತ ತನಿಖಾಧಿಕಾರಿ ಹೆಚ್.ಎಸ್. ತಿಪ್ಪೇಸ್ವಾಮಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಿಶೇಷ ಸಾರ್ವಜನಿಕ ಅಭಿಯೋಜಕ ಸುಂದರ್ ರಾಜ್ ವಾದ ಮಂಡಿಸಿದ್ದರು.

ಇದನ್ನೂ ಓದಿ: ಸ್ಯಾಂಡಲ್‌ವುಡ್ ನಟ ‘ದುನಿಯಾ’ ವಿಜಯ್ ಪುತ್ರನ ವಿರುದ್ಧ ಹಲ್ಲೆ ಆರೋಪ: ಸಹಪಾಠಿಯನ್ನು ಕಾರಿನಲ್ಲಿ ಎಳೆದೊಯ್ದು ಥಳಿತ

ಸಿಗರೇಟ್ ಸೇದುವ ಸಣ್ಣ ವಿಚಾರಕ್ಕೆ ಕೊಲೆ: 8 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಸಿಗರೇಟ್ ಸೇದುವ ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ೮ ಜನ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ಒಟ್ಟು 3.90 ಲಕ್ಷ ರೂ. ದಂಡ ವಿಧಿಸಿ ಬೆಂಗಳೂರಿನ ೫೯ನೇ ಸಿಸಿಹೆಚ್ (CCH) ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ. ವೆಂಕಟೇಶ್, ವಿಜಯ್, ವಿನೋದ್, ಝೆರಾಲ್ಡ್, ಆರೋಗ್ಯರಾಜ್, ಜೇಮ್ಸ್ ಕುಮಾರ್, ಕಿರಣ್ ಹಾಗೂ ವಿಕ್ರಮ್ ಜೀವಾವಧಿ ಶಿಕ್ಷೆಗೆ ಒಳಗಾದ ಅಪರಾಧಿಗಳಾಗಿದ್ದಾರೆ.

2017 ರಲ್ಲಿ ಬೆಂಗಳೂರಿನ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿನಗರದಲ್ಲಿ ಹರೀಶ್ ಎಂಬ ಯುವಕನ ಕೊಲೆಯಾಗಿತ್ತು. ಸಿಗರೇಟ್ ಸೇದುವ ವಿಚಾರಕ್ಕೆ ಹರೀಶ್ ಹಾಗೂ ಆರೋಪಿಗಳ ನಡುವೆ ಗಲಾಟೆ ಸಂಭವಿಸಿತ್ತು. ಬಳಿಕ ಆರೋಪಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹರೀಶ್‌ನನ್ನು ಹತ್ಯೆ ಮಾಡಿದ್ದರು. ಘಟನೆಗೆ ಸಂಬಂಧಿಸಿದಂತೆ ಅಶೋಕನಗರ ಪೊಲೀಸರು ತನಿಖೆ ನಡೆಸಿ ಮೂವರು ಅಪ್ರಾಪ್ತರು ಸೇರಿದಂತೆ ಒಟ್ಟು ೧೧ ಮಂದಿ ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us