Shivamogga: ಮೊರಾರ್ಜಿ ವಸತಿ ಶಾಲೆಯಲ್ಲಿ ಊಟ ಮಾಡಿದ 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

| Updated By: Rakesh Nayak Manchi

Updated on: Jan 16, 2023 | 11:04 PM

ಊಟ ಮಾಡಿದ ನಂತರ ವಾಂತಿ, ಬೇಧಿಯಾಗಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಶಿವಮೊಗ್ಗ ತಾಲೂಕಿನ ಗೊಂದಿಚಟ್ನಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.

Shivamogga: ಮೊರಾರ್ಜಿ ವಸತಿ ಶಾಲೆಯಲ್ಲಿ ಊಟ ಮಾಡಿದ 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಊಟ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಶಿವಮೊಗ್ಗದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು
Follow us on

ಶಿವಮೊಗ್ಗ: ತಾಲೂಕಿನ ಗೊಂದಿಚಟ್ನಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ (Morarji Residential School) ವಿದ್ಯಾರ್ಥಿಗಳು ಊಟ ಸೇವನೆ ಮಾಡಿದ ನಂತರ ಅಸ್ವಸ್ಥಗೊಂಡ ಘಟನೆ ಇಂದು ನಡೆದಿದೆ. ಊಟದ ಬಳಿಕ ವಿದ್ಯಾರ್ಥಿಗಳಲ್ಲಿ ವಾಂತಿ, ಬೇಧಿ ಕಾಣಿಸಿಕೊಂಡಿದ್ದು, 80 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ವಿದ್ಯಾರ್ಥಿಗಳನ್ನು ಮೆಗ್ಗಾನ್ ಆಸ್ಪತ್ರೆಗೆ (McGann Hospital) ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಶಿವಮೊಗ್ಗದ ತಾಲೂಕಿನ ಗೊಂದಿಚಟ್ನಹಳ್ಳಿಯ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಇವತ್ತು ಮಧ್ಯಾಹ್ನದ ನಂತರ ಒಬ್ಬರ ಬಳಿಕ ಇನ್ನೊಬ್ಬರು ಅಸ್ವಸ್ಥರಾಗಿದ್ಧಾರೆ. ಹೀಗೆ ಒಟ್ಟು 80 ಮಕ್ಕಳು ಅಸ್ವಸ್ಥರಾಗಿರುವ ಬಗ್ಗೆ ವರದಿಯಾಗಿದೆ. ಅಸ್ವಸ್ಥರಾದ ಮಕ್ಕಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐದಕ್ಕೂ ಹೆಚ್ಚು ವೈದ್ಯರು ಹಾಗು ಸಿಬ್ಬಂದಿ ಮಕ್ಕಳ ಆರೋಗ್ಯ ತಪಾಸಣೆಯನ್ನು ನಡೆಸುತ್ತಿದ್ಧಾರೆ.

ಇದನ್ನೂ ಓದಿ: Bull Race: ಹೋರಿ ಬೆದರಿಸುವ ಸ್ಪರ್ಧೆ ವೇಳೆ ಹೋರಿ ತಿವಿದು ಶಿವಮೊಗ್ಗದಲ್ಲಿ ಇಬ್ಬರ ಸಾವು

ಸುಮಾರು 500 ಮಕ್ಕಳನ್ನು ಹೊಂದಿರುವ ವಸತಿ ಶಾಲೆಯಲ್ಲಿ ಮಕ್ಕಳು ಊಟವಾದ ಕ್ರಮೇಣ ಅಸ್ವಸ್ಥರಾಗಿದ್ದಾರೆ. ಮಕ್ಕಳಲ್ಲಿ ವಾಂತಿ ಸಮಸ್ಯೆ ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ. ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದು, ಮಕ್ಕಳ ಆರೋಗ್ಯದ ಬಗ್ಗೆ ಗಮನವಹಿಸಿದ್ಧಾರೆ. ಶಾಲೆಯ ಶಿಕ್ಷಕವೃಂದ ಮೆಗ್ಗಾನ್​ನಲ್ಲಿ ಮೊಕ್ಕಾಂ ಹೂಡಿದು ಮಕ್ಕಳ ತಪಾಸಣೆಯಲ್ಲಿ ನೆರವಾಗುತ್ತಿದ್ದಾರೆ.

ಮಧ್ಯಾಹ್ನ ಚಪಾತಿ ಮತ್ತು ಅನ್ನ ಸಾಂಬರು ಊಟದ ಬಳಿಕ ವಿದ್ಯಾರ್ಥಿಗಳಲ್ಲಿ ವಾಂತಿ ಬೇಧಿ ಶುರುವಾಗಿದೆ. ವಾಂತಿ ಬೇಧಿಗೆ ಕಲುಷಿತ ನೀರು ಅಥವಾ ಊಟದ ಸಮಸ್ಯೆ ಇರುವ ಸಾಧ್ಯತೆ ಇದೆ. ಆದರೆ ಘಟನೆಗೆ ನೈಜ ಕಾರಣ ತನಿಖೆ ಪೂರ್ಣಗೊಂಡ ನಂತರವಷ್ಟೇ ತಿಳಿದುಬರಲಿದೆ.

ಸಂಜೆಯ ನಂತರ ಕಾಣಿಸಿಕೊಂಡ ಹೊಟ್ಟೆ ನೋವು 

ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿ ದಿವ್ಯಶ್ರೀ ಮಾತನಾಡಿದ್ದು, ಮಧ್ಯಾಹ್ನ ಚಪಾತಿ- ಪಲ್ಯ, ಅನ್ನ ಸಾಂಬಾರು ಊಟ ಮಾಡಿದ್ದೇವು. ಸಂಜೆಯ ನಂತರ ನನಗೆ ಹೊಟ್ಟೆ ನೋವು ಪ್ರಾರಂಭವಾಗಿದೆ. ಕೆಲವರಿಗೆ ಮಧ್ಯಾಹ್ನದ ನಂತರ ಶುರುವಾಗಿತ್ತು. ಏಕೆ ಹೀಗಾಗಿದೆ ಗೊತ್ತಿಲ್ಲ. ತುಂಬಾ ಜನರಿಗೆ ಸಮಸ್ಯೆಯಾಗಿದೆ ಎಂದ ಹೇಳಿದ್ದಾಳೆ.

ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕ

ಸುಮಾರು 80 ಮಕ್ಕಳು ಅಸ್ವಸ್ಥಗೊಂಡಿದ್ದು, ಈ ಪೈಕಿ 65 ವಿದ್ಯಾರ್ಥಿಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೆಗ್ಗಾನ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ಶ್ರೀಧರ್​ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲೇ 15 ವಿದ್ಯಾರ್ಥಿಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಆಸ್ಪತ್ರೆಗೆ ಭೇಟಿ ನೀಡಿದ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕ ಅಶೋಕ್ ನಾಯ್ಕ್ ಅವರು ವಿದ್ಯಾರ್ಥಿಗಳು ಆರೋಗ್ಯ ವಿಚಾರಿಸಿದರು.

ಶಾಲೆಯ 500 ಮಕ್ಕಳಲ್ಲಿ 80 ಮಕ್ಕಳು ಮಾತ್ರ ಅಸ್ವಸ್ಥರಾಗಿದ್ದಾರೆ. ಮೇಲ್ನೋಟಕ್ಕೆ ನೀರಿನಿಂದ ತೊಂದರೆ ಆಗಿರುವ ಸಾಧ್ಯತೆ ಇದೆ. ಮಧ್ಯಾಹ್ನದ ಆಹಾರ, ನೀರು ಮತ್ತು ವಾಂತಿಯ ಸ್ಯಾಂಪಲ್ ಪಡೆದಿದ್ದಾರೆ. ನಾಳೆ ಬೆಳಿಗ್ಗೆ ಕಾರಣ ಗೊತ್ತಾಗಲಿದೆ. ಎಲ್ಲಾ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಯಾವುದೇ ಆತಂಕ ಪಡುವ ಅಗತ್ಯ ಇಲ್ಲ ಎಂದ ಶಾಸಕ ಅಶೋಕ್ ನಾಯ್ಕ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:57 pm, Mon, 16 January 23