AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೆತ್​ನೋಟ್ ಬರೆದಿಟ್ಟು ತಾಯಿ ಆತ್ಮಹತ್ಯೆ: 6 ತಿಂಗಳ ಹಿಂದಷ್ಟೇ 2ನೇ ಮದ್ವೆಯಾಗಿದ್ದ ಮಗ ಸಹ ಸಾವು

ಶಿವಮೊಗ್ಗದ ಅಶ್ವತ್ಥ್ ಬಡಾವಣೆಯ ಮನೆಯೊಂದರಲ್ಲಿ ನೇಣು ಬಿಗಿದುಕೊಂಡು ತಾಯಿ ಮತ್ತು ಮಗ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಡೆತ್​ನೋಟ್ ಬರೆದಿಟ್ಟು ಮೊದಲಿಗೆ ತಾಯಿ ಆತ್ಮಹತ್ಯೆಗೆ ಶರಣಾಗಿದ್ದು, ಅದನ್ನು ನೋಡಿ ಮಗ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ವಿನೋಬನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಡೆತ್​ನೋಟ್ ಬರೆದಿಟ್ಟು ತಾಯಿ ಆತ್ಮಹತ್ಯೆ: 6 ತಿಂಗಳ ಹಿಂದಷ್ಟೇ 2ನೇ ಮದ್ವೆಯಾಗಿದ್ದ ಮಗ ಸಹ ಸಾವು
ಮೃತ ತಾಯಿ, ಮಗ
Basavaraj Yaraganavi
| Edited By: |

Updated on:Dec 05, 2025 | 5:52 PM

Share

ಶಿವಮೊಗ್ಗ, ಡಿಸೆಂಬರ್ 05: ತಾಯಿ (mother) ಮತ್ತು ಮಗ ಪ್ರತ್ಯೇಕವಾಗಿ ತಮ್ಮ ತಮ್ಮ ಬೆಡ್​​ರೂಮ್​​​ಗಳಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ನಗರದ ಅಶ್ವತ್ಥ್ ಬಡಾವಣೆಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ತಾಯಿ ಜಯಶ್ರೀ(57) ಮತ್ತು ಮಗ ಆಕಾಶ್(32) ಮೃತರು. ಇಬ್ಬರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಭೇಟಿ ನೀಡಿದ ವಿನೋಬನಗರ ಠಾಣಾ ಪೊಲೀಸರು ಮನೆ ಪರಿಶೀಲನೆ ಮಾಡಿದ್ದಾರೆ.

ಮೃತ ಡಾ. ಜಯಶ್ರೀ ಶಿವಮೊಗ್ಗದಲ್ಲಿ ತಾಯಿ ಮತ್ತು ಪ್ರಸೂತಿ ಆಸ್ಪತ್ರೆ ಹೊಂದಿದ್ದರು. ನಿನ್ನೆ ರಾತ್ರಿ ತಾಯಿ ಮತ್ತು ಮಗನ ಮಧ್ಯೆ ಜಗಳವಾಗಿದೆ. ಬಳಿಕ ಮಗ ಹಾಗೂ ಸೊಸೆ ಹೆಸರಿಗೆ ಆಸ್ತಿ ಬರೆದಿಟ್ಟು ಡಾ. ಜಯಶ್ರೀ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೂರು ವರ್ಷದ ಹಿಂದಷ್ಟೇ ಸೊಸೆ ಆತ್ಮಹತ್ಯೆ

ಡೆತ್​​ನೋಟ್ ಬರೆದಿಟ್ಟು ತಾಯಿ ಮೊದಲು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಳಿಕ ಮಗ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕಳೆದ ಮೂರು ವರ್ಷದ ಹಿಂದೆಯಷ್ಟೇ ಮೃತ ಆಕಾಶ್​​ನ ಮೊದಲನೇ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದರಿಂದ ಆಘಾತಕ್ಕೆ ಒಳಗಾಗಿದ್ದ.

ಇದನ್ನೂ ಓದಿ: ಸರ್ಕಾರಿ ನೌಕರನೇ ಬೇಕೆಂದು ಮದುವೆ ಆಗುವ ಯುವತಿಯರೇ ಜೋಕೆ: ಪತಿಯ ವರದಕ್ಷಿಣೆ ಟಾರ್ಚರ್​​ಗೆ ನಾಲೆಗೆ ಹಾರಿದ ಮಹಿಳೆ

ಆಘಾತದಿಂದ ಹೊರಬರಲು ಕಳೆದ ಮೇ ತಿಂಗಳಲ್ಲಿ ಆಕಾಶ್​ ಮತ್ತೊಂದು ಮದುವೆಯಾಗಿ ಆರು ತಿಂಗಳಾಗಿತ್ತು. ಹೀಗಿರುವಾಗ ತಾಯಿ ಮಗ ಆತ್ಮಹತ್ಯೆಗೆ ಶರಣಾಗಿದ್ದಾರೆ. ಎರಡನೇ ಪತ್ನಿ ಮನೆಯಲ್ಲಿರುವಾಗಲೇ ಆಕಾಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಟೆಂಪೋಗೆ ಡಿಕ್ಕಿ ಹೊಡೆದ ಲಾರಿ: ಚಾಲಕರಿಬ್ಬರಿಗೂ ಗಂಭೀರ ಗಾಯ

ಲಾರಿ ಹಾಗೂ ಟೆಂಪೋ ನಡುವೆ ಅಪಘಾತ ಸಂಭವಿಸಿ ಟೆಂಪೋ ಚಾಲಕನಿಗೆ ಗಂಭೀರ ಗಾಯಗಳಾಗಿರುವಂತಹ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಪಟ್ಟಣದ ಸಾಯಿಬಾಬ ದೇವಸ್ಥಾನದ ಬಳಿ ನಡೆದಿದೆ. ಅಪಘಾತದಲ್ಲಿ ಟೆಂಪೋ ನಜ್ಜುಗುಜ್ಜಾಗಿದೆ. ಸಿರಗುಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪತಿ ಮನೆಯವರ ಕಿರುಕುಳಕ್ಕೆ ನವವಿವಾಹಿತೆ ಆತ್ಮಹತ್ಯೆ: ಅಳಿಯನ ನಿಜಬಣ್ಣ ಕಳಚಿದ ಸಂಬಂಧಿ

ಘಟನೆಯಲ್ಲಿ ಟೆಂಪೋ ಹಾಗೂ ಲಾರಿ ಚಾಲಕ ಇಬ್ಬರಿಗೂ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳು ಚಾಲಕರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳಗ್ಗೆ ಕೂಲಿ ಕಾರ್ಮಿಕರನ್ನ ಕರೆತರಲು ಟೆಂಪೋ ಹೊರಟಿತ್ತು. ಈ ವೇಳೆ ಎದುರಿಗೆ ಬಂದ ಲಾರಿ ಡಿಕ್ಕಿ ಹೊಡೆದಿದೆ. ಟೆಂಪೋದಲ್ಲಿ ಕಾರ್ಮಿಕರು ಯಾರು ಇರಲಿಲ್ಲ ಎನ್ನಲಾಗಿದೆ. ಸ್ಥಳಕ್ಕೆ ಸಿರಗುಪ್ಪ ಪೊಲೀಸರು ದೌಡಾಯಿಸಿ ಪರಿಶೀಲನೆ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 5:39 pm, Fri, 5 December 25

Follow Us
Basavaraj Yaraganavi
Basavaraj Yaraganavi
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?