
ಶಿವಮೊಗ್ಗ, ಡಿಸೆಂಬರ್ 05: ತಾಯಿ (mother) ಮತ್ತು ಮಗ ಪ್ರತ್ಯೇಕವಾಗಿ ತಮ್ಮ ತಮ್ಮ ಬೆಡ್ರೂಮ್ಗಳಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ನಗರದ ಅಶ್ವತ್ಥ್ ಬಡಾವಣೆಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ತಾಯಿ ಜಯಶ್ರೀ(57) ಮತ್ತು ಮಗ ಆಕಾಶ್(32) ಮೃತರು. ಇಬ್ಬರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಭೇಟಿ ನೀಡಿದ ವಿನೋಬನಗರ ಠಾಣಾ ಪೊಲೀಸರು ಮನೆ ಪರಿಶೀಲನೆ ಮಾಡಿದ್ದಾರೆ.
ಮೃತ ಡಾ. ಜಯಶ್ರೀ ಶಿವಮೊಗ್ಗದಲ್ಲಿ ತಾಯಿ ಮತ್ತು ಪ್ರಸೂತಿ ಆಸ್ಪತ್ರೆ ಹೊಂದಿದ್ದರು. ನಿನ್ನೆ ರಾತ್ರಿ ತಾಯಿ ಮತ್ತು ಮಗನ ಮಧ್ಯೆ ಜಗಳವಾಗಿದೆ. ಬಳಿಕ ಮಗ ಹಾಗೂ ಸೊಸೆ ಹೆಸರಿಗೆ ಆಸ್ತಿ ಬರೆದಿಟ್ಟು ಡಾ. ಜಯಶ್ರೀ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಡೆತ್ನೋಟ್ ಬರೆದಿಟ್ಟು ತಾಯಿ ಮೊದಲು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಳಿಕ ಮಗ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕಳೆದ ಮೂರು ವರ್ಷದ ಹಿಂದೆಯಷ್ಟೇ ಮೃತ ಆಕಾಶ್ನ ಮೊದಲನೇ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದರಿಂದ ಆಘಾತಕ್ಕೆ ಒಳಗಾಗಿದ್ದ.
ಇದನ್ನೂ ಓದಿ: ಸರ್ಕಾರಿ ನೌಕರನೇ ಬೇಕೆಂದು ಮದುವೆ ಆಗುವ ಯುವತಿಯರೇ ಜೋಕೆ: ಪತಿಯ ವರದಕ್ಷಿಣೆ ಟಾರ್ಚರ್ಗೆ ನಾಲೆಗೆ ಹಾರಿದ ಮಹಿಳೆ
ಆಘಾತದಿಂದ ಹೊರಬರಲು ಕಳೆದ ಮೇ ತಿಂಗಳಲ್ಲಿ ಆಕಾಶ್ ಮತ್ತೊಂದು ಮದುವೆಯಾಗಿ ಆರು ತಿಂಗಳಾಗಿತ್ತು. ಹೀಗಿರುವಾಗ ತಾಯಿ ಮಗ ಆತ್ಮಹತ್ಯೆಗೆ ಶರಣಾಗಿದ್ದಾರೆ. ಎರಡನೇ ಪತ್ನಿ ಮನೆಯಲ್ಲಿರುವಾಗಲೇ ಆಕಾಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಲಾರಿ ಹಾಗೂ ಟೆಂಪೋ ನಡುವೆ ಅಪಘಾತ ಸಂಭವಿಸಿ ಟೆಂಪೋ ಚಾಲಕನಿಗೆ ಗಂಭೀರ ಗಾಯಗಳಾಗಿರುವಂತಹ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಪಟ್ಟಣದ ಸಾಯಿಬಾಬ ದೇವಸ್ಥಾನದ ಬಳಿ ನಡೆದಿದೆ. ಅಪಘಾತದಲ್ಲಿ ಟೆಂಪೋ ನಜ್ಜುಗುಜ್ಜಾಗಿದೆ. ಸಿರಗುಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಪತಿ ಮನೆಯವರ ಕಿರುಕುಳಕ್ಕೆ ನವವಿವಾಹಿತೆ ಆತ್ಮಹತ್ಯೆ: ಅಳಿಯನ ನಿಜಬಣ್ಣ ಕಳಚಿದ ಸಂಬಂಧಿ
ಘಟನೆಯಲ್ಲಿ ಟೆಂಪೋ ಹಾಗೂ ಲಾರಿ ಚಾಲಕ ಇಬ್ಬರಿಗೂ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳು ಚಾಲಕರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳಗ್ಗೆ ಕೂಲಿ ಕಾರ್ಮಿಕರನ್ನ ಕರೆತರಲು ಟೆಂಪೋ ಹೊರಟಿತ್ತು. ಈ ವೇಳೆ ಎದುರಿಗೆ ಬಂದ ಲಾರಿ ಡಿಕ್ಕಿ ಹೊಡೆದಿದೆ. ಟೆಂಪೋದಲ್ಲಿ ಕಾರ್ಮಿಕರು ಯಾರು ಇರಲಿಲ್ಲ ಎನ್ನಲಾಗಿದೆ. ಸ್ಥಳಕ್ಕೆ ಸಿರಗುಪ್ಪ ಪೊಲೀಸರು ದೌಡಾಯಿಸಿ ಪರಿಶೀಲನೆ ಮಾಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:39 pm, Fri, 5 December 25