Heart Attack: ಶಿವಮೊಗ್ಗ – ಶಾಲೆಗೆ ಹೋಗಲು ರೆಡಿಯಾಗುತ್ತಿದ್ದ 10ನೇ ತರಗತಿಯ ವಿದ್ಯಾರ್ಥಿ ಹೃದಯಾಘಾತದಿಂದ ಸಾವು
ಜಯಂತ್ ಎದ್ದಿನಂತೆ ಬೆಳಗ್ಗೆ ಎದ್ದು ಇಂದು ಶಾಲೆಗೆ ಹೋಗಲು ಮನೆಯಲ್ಲಿ ರೆಡಿಯಾಗುತ್ತಿದ್ದ. ಈ ವೇಳೆ ಎದೆ ನೋವು ಕಾಣಿಸಿಕೊಂಡಿದೆ. ಆಸ್ಪತ್ರೆಯಲ್ಲಿ ವೈದ್ಯರು ಹೃದಯಾಘಾತದಿಂದ ಬಾಲಕ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಶಿವಮೊಗ್ಗ: ಮೂರು-ನಾಲ್ಕು ದಿನದ ಹಿಂದಷ್ಟೇ 12 ವರ್ಷದ ಬಾಲಕ ಹೃದಯಾಘಾತದಿಂದ(Heart Attack) ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಇದೀಗ ಮತ್ತೆ ಅದೇ ರೀತಿ ಮತ್ತೊಬ್ಬ ವಿದ್ಯಾರ್ಥಿ(Students) ಮೃತಪಟ್ಟಿದ್ದಾನೆ. ರಾಜ್ಯದಲ್ಲಿ ಮಕ್ಕಳಲ್ಲಿ, ಯುವಕರಲ್ಲಿ ಹೃದಯಾಘಾತದಿಂದ ನಿಧನರಾಗುತ್ತಿರುವ ಸಂಗತಿಗಳು ಹೆಚ್ಚಾಗಿವೆ. ಹೃದಯಾಘಾತದಿಂದ 10ನೇ ತರಗತಿಯ ವಿದ್ಯಾರ್ಥಿ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ ನಡೆದಿದೆ. 10ನೇ ತರಗತಿ ವಿದ್ಯಾರ್ಥಿ ಜಯಂತ್ ರಜತಾದ್ರಯ್ಯ ಮೃತ ದುರ್ದೈವಿ. ಆನವಟ್ಟಿ ಜೂನಿಯರ್ ಕಾಲೇಜಿನಲ್ಲಿ ಓದುತ್ತಿದ್ದ ಜಯಂತ್ ಬೆಳಗ್ಗೆ ಶಾಲೆಗೆ ತೆರಳುವ ಸಂದರ್ಭದಲ್ಲಿ ಮೃತಪಟ್ಟಿದ್ದಾನೆ.
ಜಯಂತ್ ಎದ್ದಿನಂತೆ ಬೆಳಗ್ಗೆ ಎದ್ದು ಇಂದು ಶಾಲೆಗೆ ಹೋಗಲು ಮನೆಯಲ್ಲಿ ರೆಡಿಯಾಗುತ್ತಿದ್ದ. ಈ ವೇಳೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಜಯಂತ್ನನ್ನು ಎಣ್ಣೆಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಆದ್ರೆ ಅಷ್ಟೊತ್ತಿಗಾಗಲೇ ಜಯಂತ್ ಪ್ರಾಣ ಪಕ್ಷಿ ಹಾರಿ ಹೋಗಿದ್ದು ಹೃದಯಾಘಾತದಿಂದ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಇದನ್ನೂ ಓದಿ: Heart Attack: ಚಳಿಗಾಲದ ಶೀತದಿಂದ ಹೃದಯಾಘಾತವಾಗಬಹುದು? ಇದರ ಆರಂಭಿಕ ಲಕ್ಷಣ ಇಲ್ಲಿದೆ
ಕೊಡಗಿನಲ್ಲಿ ಹೃದಯಾಘಾತದಿಂದ 12 ವರ್ಷದ ಬಾಲಕ ಸಾವು
ಮಡಿಕೇರಿ ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮದಲ್ಲಿ 12 ವರ್ಷದ ಬಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದ. ಕೀರ್ತನ್ (12) ಮೃತ ದುರ್ದೈವಿ.
ಕೂಡುಮಂಗಳೂರು ಗ್ರಾಮದ ಮಂಜಾಚಾರಿ ಪುತ್ರ ಕೀರ್ತನ್ ಕೊಪ್ಪ ಭಾರತ ಮಾತಾ ಶಾಲೆಯಲ್ಲಿ 6 ನೇ ತರಗತಿ ಓದುತ್ತಿದ್ದನು. ಕೀರ್ತನ್ ಶನಿವಾರ ತಡರಾತ್ರಿ ಅನಾರೋಗ್ಯದಿಂದ ಬಳಲಿದ್ದನು, ಇಂದು (ಜ.08) ಆಸ್ಪತ್ರೆ ಕರೆದೊಯ್ಯವ ವೇಳೆ ದಾರಿಮಧ್ಯೆ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.’
ಹೃದಯಾಘಾತಕ್ಕೆ ಕಾರಣ
30ರಷ್ಟು ಹೃದಯಾಘಾತಗಳು 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಸಂಭವಿಸುತ್ತಿದ್ದು, ಯುವಕರು ತಮ್ಮ ಆಯಸ್ಸಿನ 10 ರಿಂದ 15 ವರ್ಷಗಳ ಮುಂಚೆಯೇ ಹೃದಯಾಘಾತಕ್ಕೆ ತುತ್ತಾಗುತ್ತಿದ್ದಾರೆ ಎಂದು ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಕೆಲ ತಿಂಗಳ ಹಿಂದೆ ಸುದ್ದಿಗೋಷ್ಠಿಯೊಂದರಲ್ಲಿ ಹೇಳಿದ್ದರು. ಈ ಕುರಿತು ಖಾಸಗಿ ಸುದ್ದಿ ಸಂಸ್ಥೆ ದಿ ಹಿಂದು ವರದಿ ಮಾಡಿದೆ.
ಯುವಕರಲ್ಲಿ ಹೃದಯಾಘಾತದ ಹೆಚ್ಚಳದ ಅಧ್ಯಯನವನ್ನು ಉಲ್ಲೇಖಿಸಿದ ಡಾ. ಮಂಜುನಾಥ್, ಧೂಮಪಾನಿಗಳಲ್ಲಿ 50 ಪ್ರತಿಶತ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಕುಟುಂಬದ ಇತಿಹಾಸ ಹೊಂದಿರುವ 16 ಪ್ರತಿಶತದಷ್ಟು ಜನರು ಹೃದಯಾಘಾತಕ್ಕೆ ಒಳಗಾಗುತ್ತಾರೆ. ಯಾವುದೇ ಕೆಟ್ಟ ಅಭ್ಯಾಸಗಳು ಮತ್ತು ಕುಟುಂಬದಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಲ್ಲದೆ, ಸುಮಾರು 30 ಪ್ರತಿಶತದಷ್ಟು ಜನರು ಕೆಲಸದ ಒತ್ತಡದಿಂದಾಗಿ ಹೃದಯಾಘಾತಕ್ಕೆ ಒಳಗಾಗುತ್ತಾರೆ.
ಒತ್ತಡದಿಂದ ಹೃದಯಾಘಾತಗಳು ಜೀವನದಲ್ಲಿ ಹೆಚ್ಚಿನ ನಿರೀಕ್ಷೆಗಳು ಮತ್ತು ತ್ವರಿತ ಸಮಯದಲ್ಲಿ ಯಶಸ್ಸನ್ನು ಸಾಧಿಸುವ ಕಾರಣದಿಂದಾಗಿರಬಹುದು. ಶೇ.70ರಷ್ಟು ಹೃದಯಾಘಾತಗಳು ಕೆಟ್ಟ ಜೀವನಶೈಲಿಯಿಂದ ಉಂಟಾದರೆ, ಶೇ.30ರಷ್ಟು ಒತ್ತಡದಿಂದ ಉಂಟಾಗಿದೆ ಎಂದು ವಿವರಿಸಿದರು.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ