ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಸಿಗದೆ ಎದೆ ನೋವಿನಿಂದ ಬಳಲುತ್ತಿದ್ದ ವೃದ್ಧೆ ಸಾವು ಆರೋಪ

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಇಲ್ಲದಿದ್ದಕ್ಕೆ ಎದೆ ನೋವಿನಿಂದ ಬಳಲುತ್ತಿದ್ದ ವೃದ್ಧೆ ಸಾವನ್ನಪ್ಪಿರುವ ಘಟನೆ ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಸಿಗದೆ ಎದೆ ನೋವಿನಿಂದ ಬಳಲುತ್ತಿದ್ದ ವೃದ್ಧೆ ಸಾವು ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರ ಚಿಕ್ಕಜೋಗಿಹಳ್ಳಿ
Edited By:

Updated on: Nov 06, 2022 | 11:04 PM

ಶಿವಮೊಗ್ಗ: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಇಲ್ಲದಿದ್ದಕ್ಕೆ ಎದೆ ನೋವಿನಿಂದ ಬಳಲುತ್ತಿದ್ದ ವೃದ್ಧೆ ಸಾವನ್ನಪ್ಪಿರುವ ಘಟನೆ ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಹಾಲಮ್ಮ ಕೋಂ ಜಯಪ್ಪ (65) ಮೃತ ವೃದ್ಧೆ. ಹಾಲಮ್ಮಳಿಗೆ ಇಂದು ಸಂಜೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೆ ಚಿಕ್ಕಜೋಗಿಹಳ್ಳಿ 24X7 ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರಲ್ಲಿ ವೈದ್ಯರು, ನರ್ಸ್‌ಗಳು ಇರಲಿಲ್ಲ. ಇದರಿಂದ ಚಿಕಿತ್ಸೆ ಸಿಗದೆ ಹಿನ್ನೆಲೆ ವೃದ್ಧೆ ಸಾವನ್ನಪ್ಪಿದ್ದಾಳೆ ಎಂದು ಕುಟುಂಬಸ್ಥರು ಮತ್ತು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ.

ಈ ಸಂಬಂಧ ಮೃತ ಮಹಿಳೆಯ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಆಸ್ಪತ್ರೆಯ ಎದುರು ಪ್ರತಿಭಟನೆ ಮಾಡುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಅವ್ಯವಸ್ಥೆಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:04 pm, Sun, 6 November 22