ಮಾತ್ರೆಗಳನ್ನು ನೀಡಿದ್ದಕ್ಕೆ ಸಿಟ್ಟಾಗಿ ಶಿವಮೊಗ್ಗ ಎಂಎಲ್​ಸಿ ಹೆಸರಿನಲ್ಲಿ ವೈದ್ಯರಿಗೆ ವಿಷಪೂರಿತ ಸ್ವೀಟ್ಸ್​ ಕಳುಹಿಸಿದ್ದ ಮಾನಸಿಕ ರೋಗಿ ಅರೆಸ್ಟ್​​

ಶಿವಮೊಗ್ಗದಲ್ಲಿ ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಹೆಸರಿನಲ್ಲಿ ವಿಷಪೂರಿತ ಸ್ವೀಟ್​ ಬಾಕ್ಸ್​ಗಳನ್ನು ಕಳುಹಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸೌಹಾರ್ದ ಪಟೇಲ್ ಬಂಧಿತ ಆರೋಪಿ. ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಸೌಹಾರ್ದ ಪಟೇಲ್ ವೈಯಕ್ತಿಕ ದ್ವೇಷದಿಂದ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಆರೋಪಿ ಸೌಹಾರ್ದ ಪಟೇಲ್​ ನ್ಯಾಯಾಂಗ ಬಂಧನದಲ್ಲಿದ್ದಾನೆ.

ಮಾತ್ರೆಗಳನ್ನು ನೀಡಿದ್ದಕ್ಕೆ ಸಿಟ್ಟಾಗಿ ಶಿವಮೊಗ್ಗ ಎಂಎಲ್​ಸಿ ಹೆಸರಿನಲ್ಲಿ ವೈದ್ಯರಿಗೆ ವಿಷಪೂರಿತ ಸ್ವೀಟ್ಸ್​ ಕಳುಹಿಸಿದ್ದ ಮಾನಸಿಕ ರೋಗಿ ಅರೆಸ್ಟ್​​
ಸೌಹಾರ್ದ ಪಟೇಲ್
Follow us
Basavaraj Yaraganavi
| Updated By: ವಿವೇಕ ಬಿರಾದಾರ

Updated on:Jan 06, 2025 | 11:39 AM

ಶಿವಮೊಗ್ಗ, ಜನವರಿ 06: ವಿಧಾನಪರಿಷತ್​ ಸದಸ್ಯ ಡಾ. ಧನಂಜಯ ಸರ್ಜಿ (Dhananjaya Sarji) ಹೆಸರಿನಲ್ಲಿ ನಗರದ ಮೂವರು ಗಣ್ಯ ವ್ಯಕ್ತಿಗಳಿಗೆ ವಿಷಪೂರಿತ ಸ್ವೀಟ್ ಬಾಕ್ಸ್​ಗಳನ್ನು (Sweet Box) ಡಿಟಿಡಿಸಿ ಕೋರಿಯರ್​ ಮೂಲಕ ಕಳುಹಿಸಿದ್ದ ಆರೋಪಿಯನ್ನು ಶಿವಮೊಗ್ಗದ ಕೋಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸೌಹಾರ್ದ ಪಟೇಲ್ ಬಂಧಿತ ಆರೋಪಿ. ಮಾನಸಿಕ ರೋಗಿಯಾಗಿರುವ ಸೌಹಾರ್ದ ಪಟೇಲ್​ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ‌ಈ ಕೃತ್ಯವೆಸಗಿದ್ದಾನೆ ಎಂದು ತಿಳಿದುಬಂದಿದೆ. ಸದ್ಯ ಆರೋಪಿ ಸೌಹಾರ್ದ ಪಟೇಲ್ ನ್ಯಾಯಾಂಗ ಬಂಧನದಲ್ಲಿದ್ದಾನೆ.

ಭದ್ರಾವತಿ ನಿವಾಸಿಯಾಗಿರುವ ಆರೋಪಿ ಸೌಹಾರ್ದ ಪಟೇಲ್ ಧನಂಜಯ್​ ಸರ್ಜಿ ಹೆಸರಿನಲ್ಲಿ ಶಿವಮೊಗ್ಗ ನಗರ ನಿವಾಸಿಗಳಾದ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ನಾಗರಾಜ್, ವೈದ್ಯರಾದ ಅರವಿಂದ್ ಮತ್ತು ಕೆ ಎಸ್ ಪವಿತ್ರಾ ಅವರಿಗೆ ವಿಷಪೂರಿತ ಸ್ವೀಟ್​ ಬಾಕ್ಸ್​ ಕಳುಹಿಸಿದ್ದನು.

ಮಾತ್ರೆ ಪುಡಿ ಮಾಡಿ ಸ್ವೀಟ್​ನಲ್ಲಿ ಮಿಶ್ರಣ ಮಾಡಿದ್ದ ಸೌಹಾರ್ದ ಪಟೇಲ್​

ಸೌಹಾರ್ದ ಪಟೇಲ್ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಕಾನೂನು ಮಹಾವಿದ್ಯಾಲಯದಲ್ಲಿ ಪದವಿ ಪಡೆದಿದ್ದಾನೆ. ಸೌಹಾರ್ದ ಪಟೇಲ್ ಎಲ್​ಎಲ್​ಬಿ ಓದುವಾಗ ತನ್ನದೇ ಕಾಲೇಜಿನ ಓರ್ವ ಯುವತಿಯನ್ನು ಪ್ರೀತಿಸುತ್ತಿದ್ದನು. ಈ ವಿಚಾರ ತಿಳಿದ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ನಾಗರಾಜ್ ಯುವತಿಯನ್ನು ಸೌಹಾರ್ದ ಪಟೇಲ್​ನಿಂದ ದೂರ ಮಾಡಿದ್ದರು.

ಇದರಿಂದ ಸೌಹಾರ್ದ​​ ಪಟೇಲ್​ ಡಿಪ್ರೆಶನ್​ಗೆ ಹೋಗಿದ್ದನು. ಹೀಗಾಗಿ, ಸೌಹಾರ್ದ ಪಟೇಲ್​ಗೆ ಮಾನಸಿಕ ರೋಗ ತಜ್ಞರಾದ ಅರವಿಂದ್ ಮತ್ತು ಕೆಎಸ್ ಪವಿತ್ರಾ ಬಳಿ ಚಿಕಿತ್ಸೆ ಪಡೆಯುತ್ತಿದ್ದನು. ಮಾನಸಿಕ ರೋಗಿಯಾಗಿದ್ದ ಹಿನ್ನೆಲೆ ಸೌಹಾರ್ದ ಪಟೇಲ್​ನನ್ನು ತೊರೆದು ಆತನ ತಂದೆ-ತಾಯಿ ಬೇರೆಡೆ ವಾಸಿಸುತ್ತಿದ್ದರು.

ಇದನ್ನೂ ಓದಿ: ಎಂಎಲ್​ಸಿ ಧನಂಜಯ ಹೆಸರಿನಲ್ಲಿ ವಿಷಪೂರಿತ ಸ್ವೀಟ್​ ಬಾಕ್ಸ್​​ ಹಂಚಿಕೆ

ಮಾತ್ರೆಗಳ ಮೇಲೆ ಮಾತ್ರೆಗಳನ್ನು ಕೊಟ್ಟು ತನ್ನನ್ನು ರೋಗಿಯನ್ನಾಗಿಸಿದ ವೈದ್ಯರ ಮೇಲೆ ಸೌಹಾರ್ದ ಪಟೇಲ್ ಸಿಟ್ಟಾಗಿದ್ದನು. ಇದೇ ಸಿಟ್ಟಿನಲ್ಲಿ ಮಾತ್ರೆಗಳನ್ನು ಪುಡಿಮಾಡಿ ಸ್ವೀಟ್​ನಲ್ಲಿ ಮಿಶ್ರಣ ಮಾಡಿ ಎಂಎಲ್​ಸಿ ಧನಂಜಯ ಸರ್ಜಿ ಹೆಸರಿನಲ್ಲಿ ಕೋರಿಯರ್ ಮೂಲಕ​ ಕಳುಹಿಸಿದ್ದನು ಎಂದು ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ.

ಏನಿದು ಘಟನೆ?

ಹೊಸವರ್ಷಕ್ಕೆ ಶುಭಾಶಯ ಕೋರುವ ನೆಪದಲ್ಲಿ ವಿಧಾನಪರಿಷತ್​ ಸದಸ್ಯ ಡಾ. ಧನಂಜಯ ಸರ್ಜಿ ಹೆಸರಿನಲ್ಲಿ ನಗರದ ಮೂವರು ಗಣ್ಯ ವ್ಯಕ್ತಿಗಳಿಗೆ ವಿಷಪೂರಿತ ಸ್ವೀಟ್ ಬಾಕ್ಸ್​ಗಳನ್ನು ಕೋರಿಯರ್​ ಮೂಲಕ ಕಳುಹಿಸಲಾಗಿತ್ತು.

ಸ್ವೀಟ್​​ ಅನ್ನು ಒಬ್ಬರು ಇದನ್ನು ಬಾಯಲ್ಲಿ ಹಾಕಿಕೊಂಡ ತಕ್ಷಣ ಕಹಿ ಅಂಶ ಪತ್ತೆಯಾಗಿದೆ. ಕೂಡಲೇ ಪ್ರಕರಣ ಬೆಳಕಿಗೆ ಬಂದಿದ್ದು, ದೊಡ್ಡ ಗಂಡಾಂತರ ತಪ್ಪಿದಂತಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಎಂಎಲ್​ಸಿ ಧನಂಜಯ ಸರ್ಜಿ ಅವರು ಸ್ವೀಟ್​​ ಅನ್ನು ಲ್ಯಾಬ್​ಗೆ ರವಾನೆ ಮಾಡಿದ್ದಾರೆ. ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಯವರಿಗೆ ದೂರು ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:20 am, Mon, 6 January 25

ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು