AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಕೆಗೆ ಅನುಕಂಪ ತೋರಿಸಿದ್ದೇ ತಪ್ಪಾಯಿತು: ಮದುವೆ ಹಾಲ್​​ನಲ್ಲಿ 120 ಗ್ರಾಂ ಚಿನ್ನಾಭರಣ ಕದ್ದ ಬುರ್ಖಾಧಾರಿ ಕಳ್ಳಿ

ಶಿವಮೊಗ್ಗದಲ್ಲಿ ಮದುವೆ ಸಮಾರಂಭಗಳಲ್ಲಿ ಸರಣಿ ಚಿನ್ನಾಭರಣ ಕಳ್ಳತನ ನಡೆಸುತ್ತಿದ್ದ ಬುರ್ಖಾಧಾರಿ ಕಳ್ಳಿ ರುಕ್ಸಾರ್ ಫಿರ್ದೋಸ್ ಅನ್ನು ತುಂಗಾ ನಗರ ಪೊಲೀಸರು ಬಂಧಿಸಿದ್ದಾರೆ. ಇಲಿಯಾಜ್ ನಗರದ ಶಾದಿ ಮಹಲ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳಿಂದ ಸುಳಿವು ಪಡೆದು ಪೊಲೀಸರು ಕಾರ್ಯಾಚರಣೆ ನಡೆಸಿದ್ದು, 120 ಗ್ರಾಂ ಚಿನ್ನಾಭರಣ (ಸುಮಾರು ₹18 ಲಕ್ಷ ಮೌಲ್ಯದ) ವಶಪಡಿಸಿಕೊಂಡಿದ್ದಾರೆ. ಈ ಬಂಧನದಿಂದ 4 ಪ್ರಮುಖ ಕಳ್ಳತನ ಪ್ರಕರಣಗಳು ಭೇದಿಸಲ್ಪಟ್ಟಿವೆ.

ಈಕೆಗೆ ಅನುಕಂಪ ತೋರಿಸಿದ್ದೇ ತಪ್ಪಾಯಿತು: ಮದುವೆ ಹಾಲ್​​ನಲ್ಲಿ 120 ಗ್ರಾಂ ಚಿನ್ನಾಭರಣ ಕದ್ದ ಬುರ್ಖಾಧಾರಿ ಕಳ್ಳಿ
ಮದುವೆ ಕಳ್ಳತನ
Basavaraj Yaraganavi
| Edited By: |

Updated on:Mar 11, 2026 | 7:50 AM

Share

ಶಿವಮೊಗ್ಗ ಮಾ.11: ನಗರದ ಮದುವೆ ಸಮಾರಂಭಗಳಲ್ಲಿ ಸಂಚಲನ ಮೂಡಿಸಿದ್ದ ಸರಣಿ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ತುಂಗಾ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಬುರ್ಖಾ ಧರಿಸಿ, ವ್ಯಾನಿಟಿ ಬ್ಯಾಗ್ ಹಿಡಿದು ಗಪ್‌ಚುಪ್ ಆಗಿ ಚಿನ್ನಾಭರಣ ಎಗರಿಸುತ್ತಿದ್ದ ಸುಳೆಬೈಲು ನಿವಾಸಿ ರುಕ್ಸಾರ್ ಫಿರ್ದೋಸ್ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗದ ಇಲಿಯಾಜ್ ನಗರದ ಪ್ರಸಿದ್ಧ ‘ಶಾದಿ ಮಹಲ್’ನಲ್ಲಿ ಕಳೆದ ಕೆಲವು ತಿಂಗಳುಗಳಿಂದ ನಿರಂತರವಾಗಿ ಕಳ್ಳತನಗಳು ವರದಿಯಾಗುತ್ತಿದ್ದವು. ಮದುವೆಗೆ ಬಂದವರು ತಮ್ಮ ಆಭರಣಗಳನ್ನು ಬ್ಯಾಗ್‌ನಲ್ಲಿ ಇಡುವುದನ್ನೇ ಸಂಚು ಹೂಡಿ ಕಾಯುತ್ತಿದ್ದ ಈ ಮಹಿಳೆ, ಕ್ಷಣಾರ್ಧದಲ್ಲಿ ಅವುಗಳನ್ನು ಎಗರಿಸಿ ಪರಾರಿಯಾಗುತ್ತಿದ್ದಳು.ಕಳೆದ ಒಂದು ತಿಂಗಳ ಹಿಂದೆ ನಡೆದ ಮದುವೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಹಗಲಿರುಳು ಪರಿಶೀಲಿಸಿದಾಗ, ಆಕೆಯ ಕೈಯಲ್ಲಿದ್ದ ವಿಶಿಷ್ಟವಾದ ವ್ಯಾನಿಟಿ ಬ್ಯಾಗ್ ಕಳ್ಳಿಯನ್ನು ಪತ್ತೆಹಚ್ಚಲು ಪ್ರಮುಖ ಸುಳಿವು ನೀಡಿತು.

ಇನ್ನು ಬಂಧಿತವಾಗಿರುವ ಕಳ್ಳಿ ರುಕ್ಸಾರ್ ಫಿರ್ದೋಸ್ ಒಟ್ಟು 120 ಗ್ರಾಂ ಚಿನ್ನಾಭರಣ ಕದ್ದಿದ್ದಾಳೆ ಎಂದು ಹೇಳಲಾಗಿದೆ. ಒಟ್ಟು ಇದರ ಬೆಲೆ ಅಂದಾಜು 18 ಲಕ್ಷ ರೂ ಇರಬಹುದು ಎಂದು ಅಂದಾಜಿಸಲಾಗಿದೆ. ಈಕೆಯ ಬಂಧನದಿಂದ 4 ಪ್ರಮುಖ ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ. ವಿಚಾರಣೆ ವೇಳೆ ಆಘಾತಕಾರಿ ವಿಷಯವೊಂದು ಬೆಳಕಿಗೆ ಬಂದಿದೆ. ಈ ಹಿಂದೆ ಕೆಲವು ಮದುವೆ ಮನೆಗಳಲ್ಲಿ ಕಳ್ಳತನ ಮಾಡುವಾಗ ಈಕೆ ಸ್ಥಳೀಯರಿಗೆ ಸಿಕ್ಕಿಬಿದ್ದಿದ್ದಳು. ಆದರೆ, ಮಹಿಳೆಯೆಂದು ಅನುಕಂಪ ತೋರಿಸಿದ ಜನರು ವಾರ್ನಿಂಗ್ ಮಾಡಿ ಬಿಟ್ಟು ಕಳಿಸಿದ್ದರು. ಇದನ್ನೇ ಲಾಭವನ್ನಾಗಿ ಮಾಡಿಕೊಂಡ ಈ ಕಿಲಾಡಿ ಕಳ್ಳಿ, ತನ್ನ ಕಳ್ಳತನದ ಕಾಯಕವನ್ನು ಮುಂದುವರಿಸಿ ಐಷಾರಾಮಿ ಜೀವನ ನಡೆಸುತ್ತಿದ್ದಳು. ಕೊನೆಗೂ ತುಂಗಾ ನಗರ ಪೊಲೀಸರ ಚಾಣಾಕ್ಷತನದಿಂದ ಈಕೆಯ ಕಳ್ಳಾಟಕ್ಕೆ ಬ್ರೇಕ್ ಬಿದ್ದಿದೆ.

ಇದನ್ನೂ ಓದಿ: 6 ತಿಂಗಳ ಸ್ಕೆಚ್​​, ಪಕ್ಕಾ ಪ್ಲ್ಯಾನ್​​ ಮಾಡಿ ಕಳ್ಳತನ: 1.8 ಕೆಜಿ ಬಂಗಾರ, ಡೈಮಂಡ್​​ ಕದ್ದವ ಅರೆಸ್ಟ್​

ಮದುವೆ ಮನೆಗೆ ಚಿನ್ನಾಭರಣ ಹಾಕಿಕೊಂಡು ಬರುವ ಜನರನ್ನು ಇವಳು ವಾಚ್ ಮಾಡುತ್ತಿದ್ದಳು. ಅವರು ಚಿನ್ನಾಭರಣ ಬ್ಯಾಗ್ ನಲ್ಲಿ ಇಡುವುದನ್ನು ಗಮನಿಸಿದ ಬಳಿಕ ಅದನ್ನು ಗಪ್ ಚುಪ್ ಆಗಿ ಬುರ್ಖಾ ಹಾಕಿಕೊಂಡು ಬಂದು ಎಗರಿಸಿಕೊಂಡು ಹೋಗುತ್ತಿದ್ದಳು.ಕೆಲವು ಸಂದರ್ಭದಲ್ಲಿ ಇವಳ ಕಳ್ಳತನ ಮಾಡುವಾಗ ಸ್ಥಳೀಯರಿಗೆ ಸಿಕ್ಕಿದ್ದಾಳೆ. ಅಲ್ಲಿರುವ ಜನರು ಮಹಿಳೆ ಅಂತಾ ಅನುಕಂಪ ತೋರಿಸಿ ವಾರ್ನ್ ಮಾಡಿ ಬಿಟ್ಟು ಕಳಿಸಿದ್ದಾರೆ. ಇದರ ಬಳಿಕವೂ ಈ ಕಳ್ಳಿಯ ನಡವಳಿಕೆ ಬದಲು ಆಗಲಿಲ್ಲ. ಮತ್ತೆ ಇದೇ ಕಳ್ಳತನ ಮುಂದುವರೆಸಿದ್ದಳು. ಇತ್ತೀಚೆಗೆ ಮತ್ತೆ ನಾಲ್ಕು ಕಳ್ಳತನ ಪ್ರಕರಣವು ದಾಖಲು ಆಗಿದ್ದವು. ಈ ಕಳ್ಳತನ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದಾಗ ಈ ಕಿಲಾಡಿ ಕಳ್ಳಿಯು ಪೊಲೀಸರ ಬಲೆಗೆ ಬಿದ್ದಿದ್ದಾಳೆ. ಹೀಗೆ ಮಹಿಳೆಯಾಗಿ ಮದುವೆ ಸಮಾರಂಭದಲ್ಲಿ ಎಂಟ್ರಿಕೊಟ್ಟು ಚಿನ್ನಾಭರಣ ಕದ್ದುಕೊಂಡು ಹೋಗುತ್ತಿದ್ದಳು ಎಂದು ಮ್ಯಾರೇಜ್ ಹಾಲ್ ಮಾಲೀಕ ಮಹ್ಮದ್ ಜುಬೇಲ್ ಹೇಳಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:43 am, Wed, 11 March 26

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ