Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದೆ ಪ್ರಜ್ಞಾ ಸಿಂಗ್‌ ವಿರುದ್ಧ ದೂರು ನೀಡಿದ್ದ ತಹಸೀನ್ ಪೂನಾವಾಲಾರಿಗೆ ನೋಟಿಸ್, ವಿಚಾರಣೆಗೆ ಕರೆದ ಶಿವಮೊಗ್ಗ ಪೊಲೀಸ್

ಭೋಪಾಲ್‌ನ ಬಿಜೆಪಿ ಸಂಸದೆ ಸಾದಿ ಪ್ರಜ್ಞಾ ಸಿಂಗ್ ಶಿವಮೊಗ್ಗದ ಎನ್​ಇಎಸ್ ಮೈದಾನದಲ್ಲಿ ಡಿ. 25 ರಂದು ಪ್ರಚೋದನಕಾರಿ ಭಾಷಣ ಮಾಡಿದ್ದರು. ಪ್ರಜ್ಞಾ ಸಿಂಗ್‌ ವಿರುದ್ಧ ದೂರು ನೀಡಿದ್ದ ಉದ್ಯಮಿ ತಹಸೀನ್ ಪೂನಾವಾಲಾ ಅವರಿಗೆ ಇ-ಮೇಲ್ ಮೂಲಕ ನೋಟಿಸ್ ಜಾರಿಯಾಗಿದೆ.

ಸಂಸದೆ ಪ್ರಜ್ಞಾ ಸಿಂಗ್‌ ವಿರುದ್ಧ ದೂರು ನೀಡಿದ್ದ ತಹಸೀನ್ ಪೂನಾವಾಲಾರಿಗೆ ನೋಟಿಸ್, ವಿಚಾರಣೆಗೆ ಕರೆದ ಶಿವಮೊಗ್ಗ ಪೊಲೀಸ್
ಪ್ರಜ್ಞಾ ಸಿಂಗ್ ಠಾಕೂರ್
Follow us
TV9 Web
| Updated By: ಆಯೇಷಾ ಬಾನು

Updated on:Dec 28, 2022 | 7:07 AM

ಶಿವಮೊಗ್ಗ: ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್‌(Pragya Singh Thakur)  ವಿರುದ್ಧ ದೂರು ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಆಗಮಿಸುವಂತೆ ಶಿವಮೊಗ್ಗ ಕೋಟೆ ಠಾಣೆ ಪೊಲೀಸರು(Shimoga Kote Police Station) ತಹಸೀನ್‌ಗೆ ನೋಟಿಸ್‌ ನೀಡಿದ್ದಾರೆ. ಪ್ರಜ್ಞಾ ಸಿಂಗ್‌ ವಿರುದ್ಧ ದೂರು ನೀಡಿದ್ದ ಉದ್ಯಮಿ ತಹಸೀನ್ ಪೂನಾವಾಲಾ(Tehseen Poonawalla) ಅವರಿಗೆ ಇ-ಮೇಲ್ ಮೂಲಕ ನೋಟಿಸ್ ಜಾರಿಯಾಗಿದ್ದು ಈ ಬಗ್ಗೆ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಘಟನೆ ಹಿನ್ನೆಲೆ

ಭೋಪಾಲ್‌ನ ಬಿಜೆಪಿ ಸಂಸದೆ ಸಾದಿ ಪ್ರಜ್ಞಾ ಸಿಂಗ್ ಶಿವಮೊಗ್ಗದ ಎನ್​ಇಎಸ್ ಮೈದಾನದಲ್ಲಿ ಡಿ. 25 ರಂದು ಪ್ರಚೋದನಕಾರಿ ಭಾಷಣ ಮಾಡಿದ್ದರು. ಸ್ವಯಂ ರಕ್ಷಣೆಗೆ ಮನೆಯಲ್ಲಿರುವ ಹರಿತಾದ ಚಾಕು ಬಳಿಕೆ ಮಾಡಲು ಕರೆ ಕೊಟ್ಟು, ಲವ್ ಜಿಹಾದ್ ವಿರುದ್ದ ಕಠಿಣ ಶಬ್ದಗಳಲ್ಲಿ ಟೀಕೆ ಮಾಡಿದ್ದರು. ಈ ರೀತಿ ಶಿವಮೊಗ್ಗದಲ್ಲಿ ಪ್ರಚೋಧನಾರಿ ಭಾಷಣ ಮಾಡಿದ ಸಂಸದೆ ವಿರುದ್ಧ ದೂರು ದಾಖಲು ಮಾಡುವಂತೆ ನವ ದೆಹಲಿ ಮೂಲದ ಉದ್ಯಮಿ ತಹಸೀನ್ ಪೂನಾವಾಲಾ ಟ್ವಿಟರ್ ಮೂಲಕ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಅವರಿಗೆ ಮನವಿ ನೀಡಿದ್ದರು.

ದೆಹಲಿ ಮೂಲದ ತೆಹಸೀನ್ ಪೂನಾವಾಲಾ ಎಂಬುವವರು ಟ್ವಿಟರ್ ಮೂಲಕ ದೂರು ನೀಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ಅವರಗೆ ಟ್ವಿಟ್ ಅನ್ನು ಟ್ಯಾಗ್ ಮಾಡಿದ್ದರು. ಶಿವಮೊಗ್ಗದಲ್ಲಿ ನಡೆದ ಶೋಭಾಯಾತ್ರೆಯ ಬಳಿಕ ಹಿಂದೂ ಜಾಗರಣಾ ವೇದಿಕೆಯು ಆಯೋಜಿಸಿದ್ದ ರಾಜ್ಯ ಮಟ್ಟದ ಮೂರನೆ ತ್ರೈಮಾಸಿಕ ವಾರ್ಷಿಕ ಸಮ್ಮೇಳನದಲ್ಲಿ ಸುಮಾರು 40 ರಿಂದ 45 ನಿಮಿಷ ಮಾತನಾಡಿದ್ದ ಸಾಧ್ವಿ ಪ್ರಜ್ಞಾ ಸಿಂಗ್‌, ನಮ್ಮ ಹೆಣ್ಣು ಮಕ್ಕಳು ಲವ್ ಜಿಹಾದ್‌ಗೆ ಬಲಿಯಾಗಬಾರದು. ಲವ್ ಜಿಹಾದ್ ಮಾಡುವವರಿಗೆ ತಕ್ಕ ಉತ್ತರ ನೀಡಬೇಕು. ಹೆಣ್ಣುಮಕ್ಕಳ ರಕ್ಷಣೆ ಮಾಡಬೇಕು. ಇದಕ್ಕಾಗಿ ಪ್ರತಿ ಮನೆಯಲ್ಲೂ ಶಸ್ತ್ರ ಇರಬೇಕು. ಮನೆಯಲ್ಲಿ ತರಕಾರಿ ಕೊಯ್ಯುವ ಚಾಕು ಕೂಡ ಹರಿತವಾಗಿ ಇಡಬೇಕೆಂದು ಕರೆ ಕೊಟ್ಟಿದ್ದರು.

ಇದನ್ನೂ ಓದಿ: ರಾಜಕೀಯಕ್ಕಾಗಿ ಗಡಿಯಾಚೆ ಸಮಸ್ಯೆ ಸೃಷ್ಟಿ, ಶೀಘ್ರವೇ ವಿಶ್ವ ಕನ್ನಡ ಸಮ್ಮೇಳನ: ಸಿಎಂ ಬೊಮ್ಮಾಯಿ

ಲವ್ ಜಿಹಾದ್ ವಿರುದ್ದ ಆಕ್ರೋಶ ಹೊರ ಹಾಕಿದ್ದ ಸಾಧ್ವಿ ಪ್ರಜ್ಞಾ ಸಿಂಗ್‌

ನಮ್ಮ ಹೆಣ್ಣು ಮಕ್ಕಳು ಲವ್ ಜಿಹಾದ್‌ಗೆ ಬಲಿಯಾಗಬಾರದು. ಲವ್ ಜಿಹಾದ್ ಮಾಡುವವರಿಗೆ ತಕ್ಕ ಉತ್ತರ ನೀಡಬೇಕು. ಹೆಣ್ಣುಮಕ್ಕಳ ರಕ್ಷಣೆ ಮಾಡಬೇಕು. ಇದಕ್ಕಾಗಿ ಪ್ರತಿ ಮನೆಯಲ್ಲೂ ಶಸ್ತ್ರ ಇರಬೇಕು. ಮನೆಯಲ್ಲಿ ತರಕಾರಿ ಕೊಯ್ಯುವ ಚಾಕು ಕೂಡ ಹರಿತವಾಗಿ ಇಡಬೇಕು. ಹೆಣ್ಣುಮಕ್ಕಳನ್ನು ತಿರುಗಾಡುವ ಆಟಂ ಬಾಂಬ್ ಮಾಡಬೇಕು. ಯಾರಾದರೂ ಅವರ ಶೀಲಕ್ಕೆ ಕೈ ಹಾಕಿದರೆ ಅಲ್ಲೇ ಉತ್ತರ ಕೊಡಬೇಕು. ನಮ್ಮ ಹೆಣ್ಣು ಮಕ್ಕಳು ಲವ್ ಜಿಹಾದ್‌ಗೆ ಬಲಿ ಆಗಬಾರದು. ಅದಕ್ಕೆ ತಕ್ಕ ಉತ್ತರ ನಾವು ಕೊಡಬೇಕು. ದೇಶದ ರಕ್ಷಣೆಗೆ ನಾವೆಲ್ಲ ಸದಾ ಬದ್ಧರಾಗಿರಬೇಕು. ಇನ್ನು ಮುಂದೆ ಯಾವುದೇ ಲವ್ ಜಿಹಾದ್, ಅತ್ಯಾಚಾರ, ಅನಾಚಾರವಾಗಲು ನಾವು ಬಿಡಬಾರದು. ಪ್ರತಿ ಮನೆಯಲ್ಲಿ ಶಸ್ತ್ರ ಇಟ್ಟುಕೊಳ್ಳಬೇಕು. ಅದಕ್ಕೆ ಅಗತ್ಯ ಲೈಸೆನ್ಸ್ ಪಡೆದುಕೊಂಡು ಇಟ್ಟಿಕೊಳ್ಳುವ ಮೂಲಕ ಸ್ವಯಂ ಮತ್ತು ಆತ್ಮರಕ್ಷಣೆಗೆ ಆಯುಧಗಳನ್ನು ಇಟ್ಟುಕೊಂಡರೇ ಯಾವುದೇ ತಪ್ಪಿಲ್ಲ ಎಂದಿದ್ದರು.

ನಾನು ಸಂಸದೆ, ಹಿಂದುಗಳ ಪರವಾಗಿ ಮಾತನಾಡುತ್ತೇನೆ, ಹಿಂದುಗಳ ರಕ್ಷಣೆಗಾಗಿ ಹೋರಾಡುತ್ತಿದ್ದೇನೆ. ಜೀವವಿರುವವರೆಗೂ ಸನಾತನ ರಕ್ಷಣೆಗೆ ಬದ್ಧ. ಇದಕ್ಕಾಗಿ ಜೀವ ಬೆದರಿಕೆಗಳು ಬರುತ್ತಲೇ ಇವೆ. ಬೆದರಿಕೆ ಹಾಕುವವರು ಒಮ್ಮೆ ನನ್ನ ಮುಂದೆ ಬರಲಿ, ಅವರಿಗೆ ಪ್ರಜ್ಞಾ ಸಿಂಗ್‌ ಏನೆಂದು ತೋರಿಸುತ್ತೇನೆ. ನಾರಿಶಕ್ತಿ ಏನೆಂದು ತೋರಿಸುತ್ತೇನೆ. ನಾವು ಹೆದರುವುದಿಲ್ಲ, ಹೆದರಿಸುತ್ತೇವೆ. ಈಗ ಸಾಯುವ ಸಮಯವಲ್ಲ, ಸಾಯಿಸುವ ಸಮಯ ಎಂದು ಮಲೆನಾಡಿನ ಹೆಬ್ಗಾಗಿಲು ಶಿವಮೊಗ್ಗದಲ್ಲಿ ಸಂಸದೆ ಪ್ರಜ್ಞಾ ಸಿಂಗ್‌ ಠಾಕೂರ್ ಘರ್ಜಿಸಿದ್ದರು.

ಕರ್ನಾಟಕದಲ್ಲಿ ಚುನಾವಣೆಗೆ ಕೆಲವು ತಿಂಗಳು ಬಾಕಿಯಿದೆ. ಈ ನಡುವೆ ಪ್ರಜ್ಞಾ ಸಿಂಗ್‌ ಶಿವಮೊಗ್ಗದಂತಹ ಕೋಮು ಸೂಕ್ಷ್ಮ ಸ್ಥಳದಲ್ಲಿ ಮಾಡಿರುವ ಭಾಷಣದ ವಿಡಿಯೋಗಳೂ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಈ ಹಿನ್ನಲೆಯಲ್ಲಿ ಸಂಸದೆ ಪ್ರಚೋಧನಕಾರಿಕಾರಿ ಮಾತನಾಡಿದ್ದಕ್ಕೆ ಅವರ ವಿರುದ್ಧ ಈಗ ದೂರುಗಳು ಬರಲು ಶುರುವಾಗಿವೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:07 am, Wed, 28 December 22

Daily Devotional: ಬ್ರಹ್ಮ ಮುಹೂರ್ತದ ಮಹತ್ವ ತಿಳಿಯಿರಿ
Daily Devotional: ಬ್ರಹ್ಮ ಮುಹೂರ್ತದ ಮಹತ್ವ ತಿಳಿಯಿರಿ
Daily horoscope: ವೃಷಭ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದೆ
Daily horoscope: ವೃಷಭ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದೆ
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?