ಶಿವಮೊಗ್ಗದಲ್ಲಿಅನೈತಿಕ ಚಟುವಟಿಕೆ ನಡೆಸುತ್ತಿದ್ದ ಲಾಡ್ಜ್​ ಮೇಲೆ ರೇಡ್; ಕಾಲೇಜು ವಿದ್ಯಾರ್ಥಿಗಳೂ ಪತ್ತೆ!

ಶಿವಮೊಗ್ಗ(Shivamogga)ದ ಕೆ‌.ಆರ್.ಪುರಂ ರಸ್ತೆಯಲ್ಲಿರುವ ಬ್ಲೂ ಕ್ರಿಸ್ಟಲ್ ಲಾಡ್ಜ್​ ಮೇಲೆ ಪೊಲೀಸರು ರೇಡ್ ಮಾಡಿದ್ದು, ದಾಳಿ ವೇಳೆ ಲಾಡ್ಜ್(Lodge) ಕೊಠಡಿಯಲ್ಲಿ ಕಾಲೇಜು ವಿದ್ಯಾರ್ಥಿಗಳು(College students) ಪತ್ತೆಯಾಗಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಇಬ್ಬರೂ ವಿದ್ಯಾರ್ಥಿಗಳೆಂಬ ಅಂಶ ಬೆಳಕಿಗೆ ಬಂದಿದೆ.

ಶಿವಮೊಗ್ಗದಲ್ಲಿಅನೈತಿಕ ಚಟುವಟಿಕೆ ನಡೆಸುತ್ತಿದ್ದ ಲಾಡ್ಜ್​ ಮೇಲೆ ರೇಡ್; ಕಾಲೇಜು ವಿದ್ಯಾರ್ಥಿಗಳೂ ಪತ್ತೆ!
ಶಿವಮೊಗ್ಗ
Follow us
Basavaraj Yaraganavi
| Updated By: ಕಿರಣ್ ಹನುಮಂತ್​ ಮಾದಾರ್

Updated on:Dec 02, 2023 | 8:22 PM

ಶಿವಮೊಗ್ಗ, ಡಿ.02: ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಶಿವಮೊಗ್ಗ(Shivamogga)ದ ಕೆ‌.ಆರ್.ಪುರಂ ರಸ್ತೆಯಲ್ಲಿರುವ ಬ್ಲೂ ಕ್ರಿಸ್ಟಲ್ ಲಾಡ್ಜ್​ ಮೇಲೆ ಪೊಲೀಸರು ರೇಡ್ ಮಾಡಿದ್ದು, ದಾಳಿ ವೇಳೆ ಲಾಡ್ಜ್(Lodge) ಕೊಠಡಿಯಲ್ಲಿ ಕಾಲೇಜು ವಿದ್ಯಾರ್ಥಿಗಳು(College students) ಪತ್ತೆಯಾಗಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಇಬ್ಬರೂ ವಿದ್ಯಾರ್ಥಿಗಳೆಂಬ ಅಂಶ ಬೆಳಕಿಗೆ ಬಂದಿದೆ. ಅನೇಕ ಯುವಕ, ಯುವತಿಯರು ಲಾಡ್ಜ್​ಗೆ ಬಂದು ಹೋಗುವುದನ್ನು ಸ್ಥಳೀಯರು ಮೊಬೈಲ್​ನಲ್ಲಿ ಸೆರೆ ಹಿಡಿದು ಮಾಹಿತಿ ನೀಡಿದ್ದರು. ಇನ್ನು ವಿದ್ಯಾರ್ಥಿಗಳು ಪರಸ್ಪರ ಒಪ್ಪಿಗೆ ಮೇರೆಗೆ ಲಾಡ್ಜ್​ಗೆ ಬಂದಿದ್ದರಂತೆ. ಹೀಗಾಗಿ ಲಾಡ್ಜ್​ ಪರವಾನಗಿ ರದ್ದುಪಡಿಸುವಂತೆ ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದರು.

ಚಾಮುಂಡಿ ಬೆಟ್ಟದಲ್ಲಿ ಕಾನೂನುಬಾಹಿರ ಚಟುವಟಿಕೆಗೆ ಅರಣ್ಯ ಇಲಾಖೆ ಬ್ರೇಕ್​

ಮೈಸೂರು: ಮೈಸೂರಿನ‌ ಚಾಮುಂಡಿ ಬೆಟ್ಟಕ್ಕೆ ದೇಶದ ನಾನಾ ಮೂಲೆಗಳಿಂದ ಬರುತ್ತಾರೆ.‌ ಆದರೆ, ಅನೇಕ ಪ್ರವಾಸಿಗರು ಇಲ್ಲಿ ಬಹಳ ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಾರೆ. ಇದಕ್ಕೆ ಅರಣ್ಯ ಇಲಾಖೆ ಬ್ರೇಕ್ ಹಾಕಿದ್ದು, ಕಾನೂನುಬಾಹಿರ ಚಟುವಟಿಕೆ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಲು ಶುರು ಮಾಡಿದೆ. ಐತಿಹಾಸಿಕ ಚಾಮುಂಡಿ ಬೆಟ್ಟ, ಈ ಧಾರ್ಮಿಕ ಸ್ಥಳ ಮೀಸಲು ಅರಣ್ಯ ಪ್ರದೇಶಕ್ಕೆ ಒಳಪಡುತ್ತೆ. ಇದು ಸಾಕಷ್ಟು ವನ್ಯಜೀವಿಗಳಿಗೆ ಆಶ್ರಯದ ತಾಣವಾಗಿದೆ. ‌ಆದ್ರೆ, ಇತ್ತೀಚಿಗೆ ಬೆಟ್ಟದಲ್ಲಿ ಅಕ್ರಮ ಚಟುವಟಿಕೆ ನಡೆಯುವುದು ಹಾಗೂ ಕಸವನ್ನ ಎಲ್ಲೆಂದರಲ್ಲಿ ಬಿಸಾಡುವ ಅನೈತಿಕ ಪ್ರಸಂಗಗಳು ಹೆಚ್ಚಾಗಿವೆ.

ಇದನ್ನೂ ಓದಿ:ನಗರಸಭೆ ನಿರ್ಲಕ್ಷ್ಯದಿಂದ ಅನೈತಿಕ ಚಟುವಟಿಕೆಗಳ ತಾಣವಾದ ರಾಮನಗರದ ಹೃದಯಭಾಗದಲ್ಲಿನ ಮಹಾತ್ಮಗಾಂಧಿ ಪಾರ್ಕ್​​

ಇದಕ್ಕೆ ಕಡಿವಾಣ ಹಾಕಲು ಅರಣ್ಯ ಇಲಾಖೆ ಈಗಾಗಲೇ ಮುಂದಾಗಿದ್ದು, ಕಾನೂನು ಬಾಹಿರ ಚಟುವಟಿಕೆ ಮಾಡಿದವರ ವಿರುದ್ಧ ಬರೋಬ್ಬರಿ 290 ಪ್ರಕರಣಗಳನ್ನು ದಾಖಲು ಮಾಡಿಕೊಂಡಿದೆ.‌ ಇದರಲ್ಲಿ 140 ಪ್ರಕರಣಗಳಿಗೆ ಶೂನ್ಯ ದಂಡ ವಿಧಿಸಲಾಗಿದೆ. ಮೊದಲಿಗೆ ಶೂನ್ಯದಂಡ ರಶೀದಿ ನೀಡಿ ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗಿದೆ. ಬಳಿಕ ನಿಯಮ ಉಲ್ಲಂಘನೆ ಮಾಡಿದವರಿಗೆ ದಂಡ ಹಾಕಿ ಬರೋಬ್ಬರಿ 1,07,500 ರೂ ವಸೂಲಿ ಮಾಡಲಾಗಿದೆ.  ಇದರಲ್ಲಿ ಬೆಟ್ಟಕ್ಕೆ ಹೋಗುವ ಮಧ್ಯದಲ್ಲಿ ವಾಹನ ನಿಲ್ಲಿಸಿಕೊಂಡು ಅಡ್ಡಾಡುತ್ತಿದ್ದ 62 ಪ್ರಕರಣದಿಂದ 62 ಸಾವಿರ ರೂ, ಅನಧಿಕೃತ ಅರಣ್ಯ ಪ್ರವೇಶ ಪ್ರಕರಣಗಳಲ್ಲಿ 88 ಪ್ರಕರಣ ಪತ್ತೆ ಮಾಡಿ 44 ಸಾವಿರ ರೂ., ಬೆಟ್ಟದಲ್ಲಿ ತ್ಯಾಜ್ಯ ಬಿಸಾಡಿರುವ ಒಂದು ಪ್ರಕರಣದಲ್ಲಿ 500 ರೂ. ಹಾಗೂ ಅನುಚಿತ ವರ್ತನೆ ಹಾಗೂ ವನ್ಯಜೀವಿಗಳಿಗೆ ಹಾನಿ ಮಾಡಿದ ಒಂದು ಕೇಸಿನಲ್ಲಿ ಒಂದು ಸಾವಿರ ರೂ. ದಂಡವನ್ನು ವಿಧಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:09 pm, Sat, 2 December 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ