ಶಿವಮೊಗ್ಗ ಖಾಸಗಿ ಆಸ್ಪತ್ರೆ ಎಡವಟ್ಟು?: ಹರ್ನಿಯಾ ಆಪರೇಷನ್ ಬಳಿಕ ಕೋಮಾಗೆ ಜಾರಿದ ಮಹಿಳೆ

ಶಿವಮೊಗ್ಗದ ಅಮೃತ್ ಆಸ್ಪತ್ರೆಯಲ್ಲಿ ಹರ್ನಿಯಾ ಶಸ್ತ್ರಚಿಕಿತ್ಸೆ ನಂತರ 48 ವರ್ಷದ ದೇವಿ ಬಾಯಿ ಕೋಮಾಗೆ ಜಾರಿದ್ದಾರೆ. ವೈದ್ಯರ 'ಹೈಡೋಸ್' ಔಷಧಿಯೇ ಇದಕ್ಕೆ ಕಾರಣ ಎಂದು ಕುಟುಂಬಸ್ಥರು ವೈದ್ಯಕೀಯ ಲೋಪ ಆರೋಪಿಸಿ ಪ್ರತಿಭಟನೆ ನಡೆಸಿದ್ದಾರೆ. ಆಸ್ಪತ್ರೆ ಈ ಆರೋಪವನ್ನು ನಿರಾಕರಿಸಿದ್ದು, ಶಸ್ತ್ರಚಿಕಿತ್ಸೆಗೂ ಕೋಮಾ ಸ್ಥಿತಿಗೂ ಸಂಬಂಧವಿಲ್ಲ ಎಂದಿದೆ. ರೋಗಿಯ ಸ್ಥಿತಿ ಸುಧಾರಿಸುತ್ತಿದೆ.

ಶಿವಮೊಗ್ಗ ಖಾಸಗಿ ಆಸ್ಪತ್ರೆ ಎಡವಟ್ಟು?: ಹರ್ನಿಯಾ ಆಪರೇಷನ್ ಬಳಿಕ ಕೋಮಾಗೆ ಜಾರಿದ ಮಹಿಳೆ
ಶಿವಮೊಗ್ಗ ಆಸ್ಪತ್ರೆ
Edited By:

Updated on: Mar 25, 2026 | 6:29 PM

ಶಿವಮೊಗ್ಗ, ಮಾ.25: ನಗರದ ನೆಹರು ಕ್ರೀಡಾಂಗಣದ ಪಕ್ಕದಲ್ಲಿರುವ ಅಮೃತ್ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ಲೋಪ ಆಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಹರ್ನಿಯಾ ಶಸ್ತ್ರಚಿಕಿತ್ಸೆಗಾಗಿ ದಾಖಲಾಗಿದ್ದ 48 ವರ್ಷದ ದೇವಿ ಬಾಯಿ ಎಂಬುವರು ಚಿಕಿತ್ಸೆಯ ನಂತರ ಕೋಮಾಗೆ ಜಾರಿದ್ದು, ಇದಕ್ಕೆ ವೈದ್ಯರು ನೀಡಿದ ‘ಹೈಡೋಸ್’ ಔಷಧಿಯೇ ಕಾರಣ ಎಂದು ಕುಟುಂಬಸ್ಥರು ಆಸ್ಪತ್ರೆಗೆ ನುಗ್ಗಿ ಪ್ರತಿಭಟನೆ ನಡೆಸಿದ್ದಾರೆ.

ಮಾದರಿ 11 ರಂದು ದೇವಿ ಬಾಯಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾದರಿ 12 ರ ರಾತ್ರಿ ಹರ್ನಿಯಾ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಶಸ್ತ್ರಚಿಕಿತ್ಸೆಯ ನಂತರ ರೋಗಿಗೆ ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿ ಅವರು ಕೋಮಾಗೆ ಜಾರಿದ್ದಾರೆ ಎಂದು ತಿಳಿದುಬಂದಿದೆ.

ಆಪರೇಷನ್ ಮಾಡುವ ಮೊದಲು ಲವಲವಿಕೆಯಿಂದಿದ್ದ ರೋಗಿ, ವೈದ್ಯರ ಎಡವಟ್ಟಿನಿಂದಾಗಿ ಇಂದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಮೂರ್ನಾಲ್ಕು ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ರೋಗಿಯ ಅಳಿಯ ಕಾಂತರಾಜ್ ಮತ್ತು ಸಂಬಂಧಿ ಉಷಾ ನಾಯ್ಕ್ ಆರೋಪಿಸಿದ್ದಾರೆ. ಘಟನೆ ನಡೆದು 12 ದಿನಗಳಾದರೂ ಆಸ್ಪತ್ರೆಯ ಮುಖ್ಯಸ್ಥರು ಯಾವುದೇ ಜವಾಬ್ದಾರಿ ವಹಿಸಿಲ್ಲ ಎಂಬುದು ಸಂಬಂಧಿಕರ ಆಕ್ರೋಶಕ್ಕೆ ಕಾರಣವಾಗಿದೆ. ಆಸ್ಪತ್ರೆಯ ಧೋರಣೆಯಿಂದ ಬೇಸತ್ತ ರೋಗಿಯ ಸಂಬಂಧಿಕರು ಇಂದು ಅಮೃತ್ ಲೈಫ್ ಲೈನ್ ಆಸ್ಪತ್ರೆಯ ಮುಂಭಾಗ ಜಮಾಯಿಸಿ ವೈದ್ಯರ ವಿರುದ್ಧ ಘೋಷಣೆ ಕೂಗಿ ಗಲಾಟೆ ನಡೆಸಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆ: ಆಲಿಕಲ್ಲು, ಬಿರುಗಾಳಿ ಸಹಿತ ಗುಡುಗು-ಮಿಂಚು ಬರುವ ಸಾಧ್ಯತೆ

ಈ ಆರೋಪವನ್ನು ತಳ್ಳಿಹಾಕಿರುವ ಆಸ್ಪತ್ರೆಯ ಸರ್ಜನ್ ಡಾ. ಧನಂಜಯ್ ಮತ್ತು ಜನರಲ್ ಫಿಸಿಷಿಯನ್ ಡಾ. ಮಧುಸೂಧನ್, ರೋಗಿ ಕೋಮಾಗೆ ಜಾರಿದ್ದಕ್ಕೂ ಹರ್ನಿಯಾ ಆಪರೇಷನ್‌ಗೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.ಸದ್ಯ ರೋಗಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸಲಾಗಿದ್ದು, ರೋಗಿಯ ಸ್ಥಿತಿ ಸುಧಾರಿಸುತ್ತಿದೆ ಎಂದು ವರದಿಯಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us