ನಾವು ಸಾಯಬೇಕು, ಇಲ್ಲ ಅವರು ಸಾಯಬೇಕು: ಶಿವಮೊಗ್ಗ ಗಲಾಟೆಯಲ್ಲಿ ಪೊಲೀಸ್ ಇನ್ಸ್​ಪೆಕ್ಟರ್​ಗೆ​ ಅವಾಜ್​ ಹಾಕಿದ್ದವ ಅರೆಸ್ಟ್

Shivamogga Riots: ಶಿವಮೊಗ್ಗದ ರಾಗಿಗುಡ್ಡದಲ್ಲಿ ಭಾನುವಾರ ಟಿಪ್ಪುವಿನ ಕಟೌಟ್ ವಿಚಾರವಾಗಿ ಶುರುವಾದ ವಿವಾದ ಸಂಜೆಯಾಗುತ್ತಲೇ ವಿಕೋಪಕ್ಕೆ ತಿರುಗಿತ್ತು. ಈದ್ ಮಿಲಾದ್ ಮೆರವಣಿ ನಡೆದ ವೇಳೆ ನಡೆದ ಕಲ್ಲು ತೂರಾಟ ಸಂದರ್ಭದಲ್ಲಿ ಪೊಲೀಸ್​ ಇನ್ಸ್​ಪೆಕ್ಟರ್​ಗೆ ಅವಾಜ್​ ಹಾಕಿದ್ದವನ್ನು ಇದೀಗ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ನಾವು ಸಾಯಬೇಕು, ಇಲ್ಲ ಅವರು ಸಾಯಬೇಕು: ಶಿವಮೊಗ್ಗ ಗಲಾಟೆಯಲ್ಲಿ ಪೊಲೀಸ್ ಇನ್ಸ್​ಪೆಕ್ಟರ್​ಗೆ​ ಅವಾಜ್​ ಹಾಕಿದ್ದವ ಅರೆಸ್ಟ್
ಶಿವಮೊಗ್ಗ ಗಲಾಟೆ
Follow us
Basavaraj Yaraganavi
| Updated By: ರಮೇಶ್ ಬಿ. ಜವಳಗೇರಾ

Updated on:Oct 03, 2023 | 3:32 PM

ಶಿವಮೊಗ್ಗ, (ಅಕ್ಟೋಬರ್ 03): ಶಿವಮೊಗ್ಗದ ರಾಗಿಗುಡ್ಡದಲ್ಲಿ (ಅಕ್ಟೋಬರ್ 01) ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ (Shivamogga Riots) ನಡೆದಿದ್ದು, ಬಳಿಕ ಅದು ವಿಕೋಪಕ್ಕೆ ತಿರುಗಿತ್ತು. ಗಲಾಟೆ ಸಂದರ್ಭದಲ್ಲಿ ಅವಾಜ್ ಹಾಕಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಸಂದರ್ಭದಲ್ಲಿ ಬಂಧಿತ ವ್ಯಕ್ತಿ ಸಲೀಂ, ಒಂದು ನಾವು ಸಾಯಬೇಕು, ಇಲ್ಲದಿದ್ದರೆ ಅವರು ಸಾಯಬೇಕು. ನಾವು ಸಾಬ್ರು ಹೇಗೆ ಎಂದು ಗೊತ್ತಲ್ಲ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಹರೀಶ್ ಪಟೇಲ್​ಗೆ ಅವಾಜ್ ಹಾಕಿದ್ದ. ಇದೀಗ ಸಲೀಂನನ್ನು ಪೊಲೀಸರು ಹುಡುಕಿ ಬಂಧಿಸಿದ್ದಾರೆ.

ಈದ್ ಮಿಲಾದ್ (Eid Milad) ಮೆರವಣಿಗೆ ವೇಳೆ ಜಿಲ್ಲೆಯ ರಾಗಿಗುಡ್ಡದಲ್ಲಿ (Ragigudda) ಹಿಂದೂಗಳ ಮನೆಗಳನ್ನು ಗುರಿಯಾಗಿಸಿಕೊಂಡು ಕಲ್ಲು ತೂರಾಟ ನಡೆಸಲಾಗಿತ್ತು. ಈ ಪ್ರಕರಣ ಸಂಬಂಧ 24 ಜನರ ವಿರುದ್ಧ FIR ದಾಖಲಾಗಿದೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಈದ್​ ಮಿಲಾದ್​ ಗಲಾಟೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಊಹಾಪೋಹ ಹರಡುವವರ ವಿರುದ್ಧ ಕಠಿಣ ಕ್ರಮ; ಎಸ್ಪಿ

ಪ್ರಕರಣ ಸಂಬಂಧ ಎಂಟು ಜನರು ತಲೆಮರೆಸಿಕೊಂಡಿದ್ದಾರೆ. 60 ಮಂದಿಯನ್ನು ವಿಚಾರಣೆ ಮಾಡಲಾಗಿದೆ ಎಂದು ಹೇಳಿದ ಮಿಥುನ್ ಕುಮಾರ್, ವಿಡಿಯೋ, ಫೋಟೋ ಆಧರಿಸಿ ಆರೋಪಿಗಳನ್ನು ಬಂಧಿಸಲಾಗುತ್ತಿದೆ. ಕಲ್ಲು ತೂರಾಟ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:30 pm, Tue, 3 October 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್