ಶಿವಮೊಗ್ಗ, (ಅಕ್ಟೋಬರ್ 03): ಶಿವಮೊಗ್ಗದ ರಾಗಿಗುಡ್ಡದಲ್ಲಿ (ಅಕ್ಟೋಬರ್ 01) ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ (Shivamogga Riots) ನಡೆದಿದ್ದು, ಬಳಿಕ ಅದು ವಿಕೋಪಕ್ಕೆ ತಿರುಗಿತ್ತು. ಗಲಾಟೆ ಸಂದರ್ಭದಲ್ಲಿ ಅವಾಜ್ ಹಾಕಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಸಂದರ್ಭದಲ್ಲಿ ಬಂಧಿತ ವ್ಯಕ್ತಿ ಸಲೀಂ, ಒಂದು ನಾವು ಸಾಯಬೇಕು, ಇಲ್ಲದಿದ್ದರೆ ಅವರು ಸಾಯಬೇಕು. ನಾವು ಸಾಬ್ರು ಹೇಗೆ ಎಂದು ಗೊತ್ತಲ್ಲ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಹರೀಶ್ ಪಟೇಲ್ಗೆ ಅವಾಜ್ ಹಾಕಿದ್ದ. ಇದೀಗ ಸಲೀಂನನ್ನು ಪೊಲೀಸರು ಹುಡುಕಿ ಬಂಧಿಸಿದ್ದಾರೆ.
ಈದ್ ಮಿಲಾದ್ (Eid Milad) ಮೆರವಣಿಗೆ ವೇಳೆ ಜಿಲ್ಲೆಯ ರಾಗಿಗುಡ್ಡದಲ್ಲಿ (Ragigudda) ಹಿಂದೂಗಳ ಮನೆಗಳನ್ನು ಗುರಿಯಾಗಿಸಿಕೊಂಡು ಕಲ್ಲು ತೂರಾಟ ನಡೆಸಲಾಗಿತ್ತು. ಈ ಪ್ರಕರಣ ಸಂಬಂಧ 24 ಜನರ ವಿರುದ್ಧ FIR ದಾಖಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಹೇಳಿದ್ದಾರೆ.
ಪ್ರಕರಣ ಸಂಬಂಧ ಎಂಟು ಜನರು ತಲೆಮರೆಸಿಕೊಂಡಿದ್ದಾರೆ. 60 ಮಂದಿಯನ್ನು ವಿಚಾರಣೆ ಮಾಡಲಾಗಿದೆ ಎಂದು ಹೇಳಿದ ಮಿಥುನ್ ಕುಮಾರ್, ವಿಡಿಯೋ, ಫೋಟೋ ಆಧರಿಸಿ ಆರೋಪಿಗಳನ್ನು ಬಂಧಿಸಲಾಗುತ್ತಿದೆ. ಕಲ್ಲು ತೂರಾಟ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:30 pm, Tue, 3 October 23