ಖಾಸಗಿ ಶಾಲಾ ಬಸ್ ಕೆಳಗೆ ಸಿಲುಕಿ ಎರಡೂವರೆ ವರ್ಷದ ಮಗು ಸಾವು!

ಶಿವಮೊಗ್ಗದಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಅಣ್ಣನನ್ನು ಕರೆತರಲು ಬಂದ 18 ತಿಂಗಳ ಮಗು ಆರ್ಯನ್ ಶಾಲಾ ಬಸ್ ಚಕ್ರಕ್ಕೆ ಸಿಲುಕಿ ದುರಂತ ಸಾವನ್ನಪ್ಪಿದೆ. ಗೋಪಾಲಗೌಡ ಬಡಾವಣೆಯಲ್ಲಿ ನಡೆದ ಈ ಘಟನೆ ತೀವ್ರ ಆಘಾತ ಮೂಡಿಸಿದೆ. ಚಾಲಕನ ನಿರ್ಲಕ್ಷ್ಯದ ಆರೋಪದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಕ್ಕಳ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳು ಎತ್ತಲ್ಪಟ್ಟಿವೆ.

ಖಾಸಗಿ ಶಾಲಾ ಬಸ್ ಕೆಳಗೆ ಸಿಲುಕಿ ಎರಡೂವರೆ ವರ್ಷದ ಮಗು ಸಾವು!
ಸಾಂದರ್ಭಿಕ ಚಿತ್ರ
Image Credit source: google

Updated on: Apr 01, 2026 | 12:06 PM

ಶಿವಮೊಗ್ಗ, ಏಪ್ರಿಲ್ 01: ಜಿಲ್ಲೆಯಲ್ಲಿ ಮನಕಲುಕುವ ಘಟನೆಯೊಂದು ಸಂಭವಿಸಿದೆ. ನಗರದ ಗೋಪಾಲಗೌಡ ಬಡಾವಣೆಯ ಚಂದನ ಪಾರ್ಕ್ ಸಮೀಪ ಮಾರ್ಚ್ 31ರ ಮಧ್ಯಾಹ್ನ ಒಂದೂವರೆ ವರ್ಷದ ಪುಟ್ಟ (Toddler Death) ಮಗು ಶಾಲಾ ಬಸ್ ಚಕ್ರಕ್ಕೆ ಸಿಲುಕಿ ಮೃತಪಟ್ಟಿದೆ. ಮಗು ಶಾಲೆಯಿಂದ ಬಂದ ತನ್ನ ಅಣ್ಣನನ್ನು ಕರೆತರಲು ಪೋಷಕರೊಂದಿಗೆ ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಅಣ್ಣನಿಗಾಗಿ ಕಾಯುತ್ತಿದ್ದ ಮಗು

18 ತಿಂಗಳ ಮಗು ಆರ್ಯನ್, ತನ್ನ ಅಣ್ಣನನ್ನು ಕರೆತರಲು ಪೋಷಕರೊಂದಿಗೆ ಸ್ಥಳಕ್ಕೆ ಬಂದಿದ್ದ. ಖಾಸಗಿ ಶಾಲಾ ಬಸ್‌ನಲ್ಲಿ ಅಣ್ಣನ ಬರುವಿಕೆಗೆ ಕುಟುಂಬದೊಂದಿಗೆ ಆರ್ಯನ್ ಕೂಡ ಕಾಯುತ್ತಿದ್ದ. ಈ ವೇಳೆ ಏಕಾಏಕಿ ರಸ್ತೆಯತ್ತ ಓಡಿದ ಮಗುವನ್ನು ಬಸ್ ಚಾಲಕ ಗಮನಿಸದ ಕಾರಣ ಮಗು ಬಸ್ ಚಕ್ರಕ್ಕೆ ಸಿಲುಕಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ ಮಧ್ಯರಾತ್ರಿ ಸುರಿದ ಮಳೆ ಅಬ್ಬರಕ್ಕೆ ಶಿವಮೊಗ್ಗದಲ್ಲಿ ಮನೆಗೆ ನುಗ್ಗಿದ ನೀರು: ಭಾರಿ ಅವಾಂತರ

ಗಂಭೀರವಾಗಿ ಗಾಯಗೊಂಡ ಮಗುವನ್ನು ತಕ್ಷಣವೇ ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ವೈದ್ಯರು ಪರಿಶೀಲಿಸಿದಾಗ ಮಗು ಮೃತಪಟ್ಟಿರುವುದಾಗಿ ದೃಢಪಡಿಸಿದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನೆ ತಿಳಿದ ಕೂಡಲೇ ಪಶ್ಚಿಮ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಾಲಕನ ನಿರ್ಲಕ್ಷ್ಯವೇ ಕಾರಣವೇ ಎಂಬುದರ ಕುರಿತು ತನಿಖೆ ಮುಂದುವರಿದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us