AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕಾರಿಪುರ ಬಳಿ ಓಮ್ನಿ, ಬೈಕ್ ಮುಖಾಮುಖಿ ಡಿಕ್ಕಿ: ಹಸೆಮಣೆ ಏರಬೇಕಿದ್ದ ಜೋಡಿ ದುರ್ಮರಣ

ಆಗಸ್ಟ್​ನಲ್ಲಿ ನಿಶ್ಚಿತಾರ್ಥವಾಗಿದ್ದ ಶಿಕಾರಿಪುರ ತಾಲೂಕಿನ ಮಟ್ಟಿಕೋಟೆ ಗ್ರಾಮದ ರೇಖಾ ಹಾಗೂ ಗಂಗೊಳ್ಳಿ ಗ್ರಾಮದ ಬಸವನಗೌಡ ದ್ಯಾಮನಗೌಡ್ರ ಎಂಬವರು ಅಂಬಾರಗೊಪ್ಪ ಕ್ರಾಸ್​ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅಸುನೀಗಿದ್ದಾರೆ. ಇವರ ಮದುವೆ ಡಿಸೆಂಬರ್​​ನಲ್ಲಿ ನಿಗದಿಯಾಗಿತ್ತು. ದುರದೃಷ್ಟವಶಾತ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಯುವ ಜೋಡಿಯ ಸಾವಿನಿಂದ ಕುಟುಂಬದವರು ಶೋಕದಲ್ಲಿ ಮುಳುಗುವಂತಾಗಿದೆ.

ಶಿಕಾರಿಪುರ ಬಳಿ ಓಮ್ನಿ, ಬೈಕ್ ಮುಖಾಮುಖಿ ಡಿಕ್ಕಿ: ಹಸೆಮಣೆ ಏರಬೇಕಿದ್ದ ಜೋಡಿ ದುರ್ಮರಣ
ದ್ಯಾಮನಗೌಡ್ರ ಮತ್ತು ರೇಖಾ
Basavaraj Yaraganavi
| Edited By: |

Updated on: Sep 11, 2025 | 10:45 AM

Share

ಶಿವಮೊಗ್ಗ, ಸೆಪ್ಟೆಂಬರ್ 11: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಕ್ರಾಸ್​ನಲ್ಲಿ ಓಮ್ನಿ ಹಾಗೂಬೈಕ್ ಮುಖಾಮುಖಿ ಡಿಕ್ಕಿಯಾಗಿ ಹಸೆಮಣೆ ಏರಬೇಕಿದ್ದ ಜೋಡಿಯೊಂದು ದುರ್ಮರಣ ಹೊಂದಿದೆ. ಶಿಕಾರಿಪುರ ತಾಲೂಕಿನ ಮಟ್ಟಿಕೋಟೆ ಗ್ರಾಮದ ರೇಖಾ (20) ಮತ್ತು ಗಂಗೊಳ್ಳಿ ಗ್ರಾಮದ ಬಸವನಗೌಡ ದ್ಯಾಮನಗೌಡ್ರ (25) ಮೃತ ದುರ್ದೈವಿಗಳು. ಆಗಸ್ಟ್ ತಿಂಗಳು ರೇಖಾ, ಬಸವನಗೌಡ ನಿಶ್ಚಿತಾರ್ಥವಾಗಿತ್ತು. ಮಳೆಯ ಕಾರಣಕ್ಕೆ ಮದುವೆಯನ್ನು ಮುಂದೂಡಿದ್ದ 2 ಕುಟುಂಬಸ್ಥರು, ಡಿಸೆಂಬರ್​​ನಲ್ಲಿ ಇಬ್ಬರ ಮದುವೆಗೆ ದಿನಾಂಕ ನಿಗದಿ ಮಾಡಿದ್ದರು. ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಸೆಮಣೆ ಏರಬೇಕಿದ್ದ ಯುವತಿ ಅಪಘಾತದಲ್ಲಿ ಸಾವು

ಇನ್ನೇನು 15 ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯುವತಿ ಕವಿತಾ (26) ಶಿವಮೊಗ್ಗಹೊರವಲಯದ ದುಮ್ಮಳ್ಳಿ ಕ್ರಾಸ್ ಸಕ್ಕರೆ ಫ್ಯಾಕ್ಟರಿ ಬಳಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಸೆಪ್ಟೆಂಬರ್ 8 ರಂದು ಸಂಭವಿಸಿತ್ತು. ಅದರ ಕಹಿ ನೆನಪು ಮಾಸುವ ಮುನ್ನವೇ ಜೋಡಿಯೊಂದು ಇದೀಗ ರಸ್ತೆ ಅಪಘಾತಕ್ಕೆ ಬಲಿಯಾಗಿದೆ.

ಇದನ್ನೂ ಓದಿ: 15 ದಿನದಲ್ಲಿ ಹಸೆಮಣೆ ಏರಬೇಕಾಗಿದ್ದ ಯುವತಿ ದುರಂತ ಸಾವು, ಫೋಟೋ ಶೂಟ್​ಗೆ​ ಹೋಗಬೇಕಿದ್ದವಳು ಮಸಣಕ್ಕೆ

ಮದುವೆ ಇರುವ ಕಾರಣ ಕಚೇರಿಯಲ್ಲಿ ಸಹೋದ್ಯೋಗಿಗಳಿಗೆ ‘ಕೆಲಸದ ಕೊನೆಯ ದಿನ’ ಎಂದು ಹೇಳಿ ಹೊರಟಿದ್ದ ಯುವತಿಯ ಬದುಕೇ ಅಪಘಾತದಿಂದ ಕೊನೆಯಾಗುವಂತಾಗಿತ್ತು. ಸಹೋದರನೊಂದಿಗೆ ಯುವತಿ ಬೈಕ್​ನಲ್ಲಿ ಹೋಗುತ್ತಿದ್ದಾಗ ಇನ್ನೊಂದು ಬೈಕ್‌ನಲ್ಲಿ ಮಿತಿಮೀರಿದ ಲಗೇಜ್‌ ತುಂಬಿಕೊಂಡ ವ್ಯಕ್ತಿ ಇವರು ಹೋಗುತ್ತಿದ್ದ ಬೈಕ್‌ಗೆ ತಾಗಿಸಿದ್ದ. ಇದರಿಂದ ಬೈಕ್ ಪಲ್ಟಿಯಾಗಿ ಯುವತಿಯ ಸಹೋದರ ಫುಟ್‌ಪಾತ್‌ ಮೇಲೆ ಬಿದ್ದರೆ, ಆಕೆ ರಸ್ತೆಗೆ ಬಿದ್ದಿದ್ದಳು. ಈ ವೇಳೆ, ಹಿಂದೆ ಇದ್ದ ಸಿಟಿ ಬಸ್‌ ಆಕೆಯ ಮೇಲೆ ಹರಿದಿತ್ತು. ಪರಿಣಾಮ ಕವಿತಾ ಸ್ಥಳದಲ್ಲೇ ಸಾವಿಗೀಡಾಗಿದ್ದಳು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ