AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga News: ಶಿವಮೊಗ್ಗ ಶಂಕಿತ ಉಗ್ರರಿಂದ ರಾಷ್ಟ್ರಧ್ವಜ ದಹನ, ಬಾಂಬ್ ತಯಾರಿ ಶಂಕೆ; ಎಸ್​ಪಿ ಲಕ್ಷ್ಮೀ ಪ್ರಸಾದ್

ಪ್ರೇಮ್​ಸಿಂಗ್ ಹತ್ಯೆ ಪ್ರಕರಣದಲ್ಲಿ ಜಬೀ ಬಂಧನವಾಗಿತ್ತು. ಜಬೀ ವಿಚಾರಣೆ ಮಾಡಿದಾಗ ಶಾರಿಕ್ ವಿಚಾರ ಬೆಳಕಿಗೆ ಬಂತು ಎಂದು ಎಸ್​ಪಿ ಹೇಳಿದ್ದಾರೆ.

Shivamogga News: ಶಿವಮೊಗ್ಗ ಶಂಕಿತ ಉಗ್ರರಿಂದ ರಾಷ್ಟ್ರಧ್ವಜ ದಹನ, ಬಾಂಬ್ ತಯಾರಿ ಶಂಕೆ; ಎಸ್​ಪಿ ಲಕ್ಷ್ಮೀ ಪ್ರಸಾದ್
ಶಂಕಿತ ಉಗ್ರರಿಂದ ವಶಪಡಿಸಿಕೊಂಡಿರುವ ಬಾಂಬ್ ತಯಾರಿ ಸಾಮಗ್ರಿಗಳು
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Sep 23, 2022 | 12:44 PM

Share

ಶಿವಮೊಗ್ಗ: ನಗರ ಪೊಲೀಸರು ಇತ್ತೀಚೆಗೆ ಬಂಧಿಸಿದ್ದ ಶಂಕಿತ ಉಗ್ರರಿಂದ ಬಾಂಬ್ ತಯಾರಿಗೆ ಬೇಕಿರುವ ಕಚ್ಚಾ ಸಾಮಗ್ರಿಗಳೂ ಸೇರಿದಂತೆ ಹಲವು ಮಹತ್ವದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಶಂಕಿತ ಉಗ್ರರ ಬಂಧನ ಕುರಿತು ಮಾಧ್ಯಮಗೋಷ್ಠಿಯಲ್ಲಿ ವಿವರ ನೀಡಿದ ಅವರು, ಪ್ರೇಮ್​ಸಿಂಗ್ ಹತ್ಯೆ ಪ್ರಕರಣದಲ್ಲಿ ಜಬೀ ಬಂಧನವಾಗಿತ್ತು. ಜಬೀ ವಿಚಾರಣೆ ಮಾಡಿದಾಗ ಶಾರಿಕ್ ವಿಚಾರ ಬೆಳಕಿಗೆ ಬಂತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ. ಈವರೆಗೆ 11 ಸ್ಥಳಗಳಲ್ಲಿ ದಾಳಿ ಮಾಡಿ ಹಲವು ವಸ್ತುಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಬಂಧಿತರಿಂದ 14 ಮೊಬೈಲ್‌ ಮತ್ತು 1 ಡಾಂಗಲ್ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.

ಬಂಧಿತರಿಂದ ಎರಡು ಲ್ಯಾಪ್‌ಟಾಪ್‌, ಒಂದು ಪೆನ್‌ಡ್ರೈವ್ ಹಾಗೂ ಇತರ ಎಲೆಕ್ಟ್ರಾನಿಕ್ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಸ್ಫೋಟದ ಸ್ಥಳದಲ್ಲಿ ಬಾಂಬ್‌ನ ಅವಶೇಷಗಳು ಪತ್ತೆಯಾಗಿವೆ. ಆಗಸ್ಟ್​​ ತಿಂಗಳಲ್ಲಿ ರಾಷ್ಟ್ರಧ್ವಜ ಸುಟ್ಟಿರುವ ಮಾಹಿತಿಯೂ ಲಭ್ಯವಾಗಿದೆ. ಬಂಧಿತರಿಂದ ಬಾಂಬ್ ತಯಾರಿಸಲು ಬೇಕಾದ ಸಾಮಗ್ರಿಗಳನ್ನೂ ವಶಪಡಿಸಿಕೊಂಡಿದ್ದೇವೆ ಎಂದು ತಿಳಿಸಿದರು.

ಬಂಧಿತರ ಮೂವರೂ ಆರೋಪಿಗಳು ಇಸ್ಲಾಮಿಕ್ ಸ್ಟೇಟ್ ಸಿದ್ಧಾಂತಕ್ಕೆ ಬದ್ಧರಾಗಿದ್ದರು. ನಮಗೆ ಬ್ರಿಟೀಷರಿಂದ ಮಾತ್ರ ಸ್ವಾತಂತ್ರ್ಯ ಸಿಕ್ಕಿದೆ. ನೈಜ ಸ್ವಾತಂತ್ರ್ಯ ಇಲ್ಲ. ಇಸ್ಲಾಮಿಕ್ ಸ್ಟೇಟ್ ನಿರ್ಮಾಣ, ಷರಿಯಾ ಕಾನೂನುಗಳಿಂದ ಮಾತ್ರ ಸ್ವಾತಂತ್ರ್ಯ ಸಾರ್ಥಕವಾಗುತ್ತದೆ ಎಂಬ ಅಭಿಪ್ರಾಯಕ್ಕೆ ಬಂಧಿದ್ದರು. ಪ್ರಾಯೋಗಿಕವಾಗಿ ಬಾಂಬ್ ಸ್ಫೋಟಿಸಿದ್ದ ಆರೋಪಿಗಳು ನೈಜ ಬಾಂಬ್​ ಸ್ಫೋಟಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಕ್ರಿಪ್ಟೊ ಕರೆನ್ಸಿ ಮೂಲಕ ವಹಿವಾಟು ನಡೆಸಿದ್ದ ಮಾಹಿತಿಯೂ ಲಭ್ಯವಾಗಿದೆ ಎಂದು ಎಸ್​ಪಿ ತಿಳಿಸಿದರು.

Shivamogga-SP-Details

ಶಿವಮೊಗ್ಗದ ಎಸ್​ಪಿ ನೀಡಿರುವ ಮಾಹಿತಿ

ತನಿಖೆಯಲ್ಲಿ ಬೆಳಕಿಗೆ ಬಂದಿರುವ ಮುಖ್ಯಾಂಶಗಳು

  1. ಪಿಯುಸಿ ಓದುತ್ತಿರುವಾಗಲೇ ಸೈಯದ್ ಯಾಸಿನ್​ಗೆ ಮಾಜ್ ಮುನೀರ್ ಅಹ್ಮದ್​ ಎಂಬಾತನ ಪರಿಚಯವಾಗಿತ್ತು. ಅವನ ಮುಖಾಂತರ ಶಾರೀಖ್ ಪರಿಚಯವಾಯಿತು. ಶಾರೀಖ್ ಮುಸ್ಲಿಂ ಮೂಲಭೂತವಾದದ ಬಗ್ಗೆ ಸದಾ ಮಾತನಾಡುತ್ತಿದ್ದ. ಅಂಥದ್ದೇ ಫೈಲ್​ಗಳನ್ನು ಹಂಚಿಕೊಳ್ಳುತ್ತಿದ್ದ.
  2. ಐಸಿಸ್ (ಇಸ್ಲಾಮಿಕ್ ಸ್ಟೇಟ್) ಮಾದರಿಯಲ್ಲಿ ಭಯೋತ್ಪಾದಕ ಕೃತ್ಯ ಮುಂದುವರಿಸಲು ಆರೋಪಿಗಳು ಯೋಚಿಸಿದ್ದರು. ಕಾಫೀರರ (ಇಸ್ಲಾಂ ಧರ್ಮಕ್ಕೆ ಸೇರದವರು) ವಿರುದ್ಧ ಜಿಹಾದ್ ನಡೆಸಲು ಇವರು ಸಿದ್ಧತೆ ಮಾಡಿಕೊಳ್ಳುತ್ತಿದ್ದರು.
  3. ಐಸಿಸ್​ನ ಅಧಿಕೃತ ಅಲ್​-ಹಯಾತ್ ಟೆಲಿಗ್ರಾಮ್ ಚಾನೆಲ್​ಗೆ ಸದಸ್ಯರಾಗಿದ್ದರು.
  4. ಶಾರೀಖ್ ಹಂಚಿಕೊಂಡಿದ್ದ ಫೈಲ್​ಗಳಲ್ಲಿದ್ದ ಬಾಂಬ್ ತಯಾರಿಸುವ ವಿವರ ಅಭ್ಯಾಸ ಮಾಡಿದ್ದ ಇತರರು ಅದಕ್ಕೆ ಬೇಕಿರುವ ಟೈಮರ್, ರಿಲೆ, ಸರ್ಕೀಟ್​ಗಳನ್ನು ಅಮೆಜಾನ್ ಮೂಲಕ ಖರೀದಿಸಿದ್ದರು. ಇತರ ಅಗತ್ಯ ವಸ್ತುಗಳನ್ನು ಶಿವಮೊಗ್ಗದ ಸ್ಥಳೀಯ ವರ್ತಕರಿಂದ ಖರೀದಿಸಿದ್ದರು.
  5. ರಾಷ್ಟ್ರಧ್ವಜವನ್ನು ಸುಟ್ಟು, ಅದನ್ನು ವಿಡಿಯೊ ಮಾಡಿಕೊಂಡಿದ್ದಾರೆ. ಕೆಮ್ಮನ ಗುಂಡಿಯಲ್ಲಿ ಪ್ರಾಯೋಗಿಕವಾಗಿ ಬಾಂಬ್ ಸ್ಫೋಟ ನಡೆಸಿದ್ದರು.

Published On - 12:44 pm, Fri, 23 September 22

ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ