AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನರ್ವಸತಿ ಕೇಂದ್ರಕ್ಕೆ ದಾಖಲಾಗಿದ್ದ ಯುವತಿ ಅನುಮಾನಾಸ್ಪದ ಸಾವು: ಮಗಳು ಗುಣಮುಖಳಾಗ್ತಾಳೆಂಬ ಆಸೆಯಲ್ಲಿದ್ದ ಪೋಷಕರಿಗೆ ಆಘಾತ

ಶಿವಮೊಗ್ಗದ ಪುನರ್ವಸತಿ ಕೇಂದ್ರದಲ್ಲಿ ದಾಖಲಾಗಿದ್ದ 17 ವರ್ಷದ ಯುವತಿಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಮಾನಸಿಕ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯಲು ದಾಖಲಾಗಿದ್ದ ಮಗಳು ಗುಣಮುಖಳಾಗಿ ಮರಳುವ ನಿರೀಕ್ಷೆಯಲ್ಲಿದ್ದ ಕುಟುಂಬಕ್ಕೆ ಘಟನೆ ಆಘಾತ ತಂದಿದೆ. ಪುನರ್ವಸತಿ ಕೇಂದ್ರದ ನಿರ್ಲಕ್ಷ್ಯ, ಅನುಮಾನಾಸ್ಪದ ಸಾವಿನ ಕುರಿತು ಕುಟುಂಬಸ್ಥರು ಆರೋಪಿಸಿದ್ದು, ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುನರ್ವಸತಿ ಕೇಂದ್ರಕ್ಕೆ ದಾಖಲಾಗಿದ್ದ ಯುವತಿ ಅನುಮಾನಾಸ್ಪದ ಸಾವು: ಮಗಳು ಗುಣಮುಖಳಾಗ್ತಾಳೆಂಬ ಆಸೆಯಲ್ಲಿದ್ದ ಪೋಷಕರಿಗೆ ಆಘಾತ
ಮೃತ ಯುವತಿImage Credit source: Tv9 Kannada
Basavaraj Yaraganavi
| Edited By: |

Updated on:May 08, 2026 | 5:16 PM

Share

ಶಿವಮೊಗ್ಗ, ಮೇ 08: ನಗರದ ಪ್ರಸಿದ್ಧ ಮಾನಸಿಕ ಸಾಮಾಜಿಕ ಪುನರ್ವಸತಿ ಕೇಂದ್ರಕ್ಕೆ ಚಿಕಿತ್ಸೆಗೆಂದು ದಾಖಲಾಗಿದ್ದ ಯುವತಿ ಒಂದೇ ದಿನಕ್ಕೆ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿಕಾರಿಪುರದ ಈಸೂರಿನ ನಿವಾಸಿ ನೇಹಾ (17) ಮೃತ ಯುವತಿಯಾಗಿದ್ದು, ಮಗಳ ಹುಷಾರಾಗಿ ಮನೆಗೆ ಬರುತ್ತಾಳೆಂಬ ನಿರೀಕ್ಷೆಯಲ್ಲಿದ್ದ ಕುಟುಂಬಕ್ಕೀಗ ಆಘಾತ ಉಂಟಾಗಿದೆ. ಯುವತಿಯ ಸಾವಿನ ಹಿಂದೆ ನೂರೆಂಟು ಅನುಮಾನಗಳು ಹುಟ್ಟಿಕೊಂಡಿದ್ದು, ಈ ಬಗ್ಗೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

8 ತಿಂಗಳ ಹಿಂದೆ ಕಾಲೇಜಿಗೆ ಹೋಗುವಾಗ ಹಾವು ನೋಡಿ ನೇಹಾ ಬೆಚ್ಚಿಬಿದ್ದಿದ್ದಳು. ಓದುವ ವಿಚಾರದಲ್ಲಿಯೂ ಮಂಕಾಗಿದ್ದ ಈಕೆ ಒಮ್ಮೆ ಬ್ಲೇಡ್​​ನಿಂದ ಕೈ ಸಹ ಕೊಯ್ದುಕೊಂಡಿದ್ದಳು. ಈ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಕೂಡ  ಬರೆದಿರಲಿಲ್ಲ. 3 ದಿನಗಳ ಹಿಂದೆಯೂ ಯುವತಿಯನ್ನು ಖಾಸಗಿ ನರ್ಸಿಂಗ್ ಹೋಂಗೆ ಕರೆತಂದು ಚಿಕಿತ್ಸೆ ಕೊಡಿಸಲಾಗಿತ್ತು. ಈ ನಡುವೆ ಶಿವಮೊಗ್ಗದ ಮಾನಸಧಾರ ಮಾನಸಿಕ ಸಾಮಾಜಿಕ ಪುನರ್ವಸತಿ ಕೇಂದ್ರದದವರು ನೇಹಾಳನ್ನು ಬೇಸಿಗೆ ಶಿಬಿರಕ್ಕೆ ಸೇರಿಸಿದರೆ ಗುಣಮುಖರಾಗುತ್ತಾಳೆ ಎಂದಿದ್ದರಂತೆ. ಹೀಗಾಗಿ ಮೊನ್ನೆ ಮಧ್ಯಾಹ್ನ 3 ಗಂಟೆಗೆ ಪುನರ್ ವಸತಿ ಕೇಂದ್ರಕ್ಕೆ ನೇಹಾಳನ್ನ ಕರೆತಂದು ಪೋಷಕರು ಸೇರಿಸಿದ್ದರು. ಆದರೆ ನಿನ್ನೆ ಮಧ್ಯಾಹ್ನದ ಹೊತ್ತಿಗೆ ಪುನರ್ವಸತಿ ಕೇಂದ್ರದ ಕಡೆಯಿಂದ ನೇಹಾ ಪೋಷಕರಿಗೆ ಸಾವರ್ ಲೈನ್ ರಸ್ತೆಯಲ್ಲಿರುವ ಖಾಸಗಿ ನರ್ಸಿಂಗ್​​ ಹೋಂಗೆ ಬನ್ನಿ. ನೇಹಾ ಮತ್ತೆ ಕೈ ಕೊಯ್ದುಕೊಂಡಿದ್ದಾಳೆ ಎಂಬ ಮಾಹಿತಿ ಬಂದಿದೆ. ಕುಟುಂಬ ನರ್ಸಿಂಗ್ ಹೋಂಗೆ ಬಂದ ವೇಳೆ ಆಕೆ ಮೃತಳಾಗಿರುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಬಿಜೆಪಿ ಮುಖಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ; ಸೊರಬ ಪುರಸಭೆ ಮಾಜಿ ಅಧ್ಯಕ್ಷ ಅರೆಸ್ಟ್!

ಸಂಪೂರ್ಣ ಜವಾಬ್ದಾರಿ ನಮ್ಮದೇ ಎಂದು ಪುನರ್ ವಸತಿ ಕೇಂದ್ರಕ್ಕೆ ಸೇರಿಸಿಕೊಂಡಿದ್ದ ವೈದ್ಯರು ಇಂತಹ ಘಟನೆ ನಡೆದ್ರೂ ಪೊಲೀಸರಿಗೆ ಮಾಹಿತಿ ನೀಡದೇ ಖಾಸಗಿ ಆಸ್ಪತ್ರೆಗೆ ಆಕೆಯನ್ನು ಕರೆತಂದಿದ್ದಾರೆ. ಬೇಸಿಗೆ ಶಿಬಿರದಲ್ಲಿ ಸಮಾನ ಮನಸ್ಕರರೊಂದಿಗೆ ನೇಹಾಳನ್ನ ಬಿಡಲಾಗುವುದು ಎಂದಿದ್ದ ಆಸ್ಪತ್ರೆಯವರು ಮಾನಸಿಕ ರೋಗಿಗಳ ಜೊತೆ ಆಕೆಯನ್ನು ಬಿಟ್ಟಿದ್ದಾರೆ ಎಂದು ಕುಟುಂಬಸ್ಥರು ದೂರಿದ್ದಾರೆ. ಅಲ್ಲದೆ ಪುನರ್​​ ವಸತಿ ಕೇಂದ್ರದ ಕೊಠಡಿಯಲ್ಲಿಯೇ ನೇಹಾ ವೇಲ್​​ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಗಂಭೀರ ಆರೋಪ ಮಾಡಿದ್ದಾರೆ. ಒಟ್ಟಿನಲ್ಲಿ ಪುನರ್ ವಸತಿ ಕೇಂದ್ರಕ್ಕೆ ಸೇರಿದ ಒಂದೇ ದಿನದಲ್ಲಿ ನೇಹಾ ಪ್ರಾಣಬಿಟ್ಟಿರೋದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 5:14 pm, Fri, 8 May 26

Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!