ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಒಂದೇ ದಿನ 6 ಜನರಿಗೆ ಮಂಗನ ಕಾಯಿಲೆ

| Updated By: ವಿವೇಕ ಬಿರಾದಾರ

Updated on: Feb 13, 2024 | 8:40 AM

ರಾಜ್ಯದ ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ಹೆಚ್ಚುತ್ತಿದ್ದು, ಇದರಿಂದ ಜನರಲ್ಲಿ ಆತಂಕ ಶುರುವಾಗಿದೆ. ತೀರ್ಥಹಳ್ಳಿ ಪಟ್ಟಣದಲ್ಲಿ ಆರು ಜನರಿಗೆ ಮಂಗನ ಕಾಯಿಲೆ ಬಂದಿದೆ. ಸದ್ಯ ಈ ಆರು ಜನರನ್ನು ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ರೋಗಿಗಳ ಸಂಪರ್ಕಕ್ಕೆ ಬಂದ 42 ಜನರ ರಕ್ತ ತಪಾಸಣೆ ಮಾಡಲಾಗಿದೆ.

ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಒಂದೇ ದಿನ 6 ಜನರಿಗೆ ಮಂಗನ ಕಾಯಿಲೆ
ಮಂಗನ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳು
Follow us on

ಶಿವಮೊಗ್ಗ, ಫೆಬ್ರವರಿ 13: ರಾಜ್ಯದ ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ಹೆಚ್ಚುತ್ತಿದ್ದು, ಇದರಿಂದ ಜನರಲ್ಲಿ ಆತಂಕ ಶುರುವಾಗಿದೆ. ತೀರ್ಥಹಳ್ಳಿ (Thirthahalli) ಪಟ್ಟಣದಲ್ಲಿ ಆರು ಜನರಿಗೆ ಮಂಗನ ಕಾಯಿಲೆ (KFD) ಬಂದಿದೆ. ಸದ್ಯ ಈ ಆರು ಜನರನ್ನು ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ (Thirthahalli Taluk Hospital) ದಾಖಲಿಸಲಾಗಿದೆ. ಇನ್ನು ರೋಗಿಗಳ ಸಂಪರ್ಕಕ್ಕೆ ಬಂದ 42 ಜನರ ರಕ್ತ ತಪಾಸಣೆ ಮಾಡಲಾಗಿದೆ. ತಾಲೂಕು ಆಸ್ಪತ್ರೆಗೆ ಜಿಲ್ಲಾ ವೈದ್ಯಾಧಿಕಾರಿ ರಾಜೇಶ್ ಸುರಗಿಹಳ್ಳಿ ಭೇಟಿ ನೀಡಿ, ಪಾಸಿಟಿಟ್ ಬಂದ ಆರು ರೋಗಿಗಳ ಆರೋಗ್ಯ ವಿಚಾರಿಸಿದರು. “ಆತಂಕ ಪಡುವ ಅಗತ್ಯವಿಲ್ಲ. ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಆಸ್ಪತ್ರೆಯಲ್ಲಿ ಮಾಡಲಾಗಿದೆ. ಧೈರ್ಯದಿಂದ ಇರಿ” ಎಂದು ರೋಗಿಗಳಿಗೆ ಧೈರ್ಯ ತುಂಬಿದರು. ಶಿವಮೊಗ್ಗ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 32 ಮಂಗನ ಕಾಯಿಲೆ ಪ್ರಕರಣಗಳು ವರದಿಯಾಗಿದೆ.

ಮಂಗನ ಕಾಯಿಲೆಗೆ 18 ವರ್ಷದ ಯುವತಿ ಸಾವು

ಒಂದು ವಾರದ ಹಿಂದೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಳಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ‌ ಬೊಪ್ಪನಮನೆ ಗ್ರಾಮದಲ್ಲಿ ಮಂಗನ ಕಾಯಿಲೆಯಿಂದ 18 ವರ್ಷದ ಯುವತಿ ಮೃತಪಟ್ಟಿದ್ದರು. ಬೊಪ್ಪನೆಮನೆ ಗ್ರಾಮದ ನಿವಾಸಿ ಅನನ್ಯ ಮೃತ ಯುವತಿ. ಇದು ಮಂಗನ ಕಾಯಿಲೆಗೆ ಮೃತಪಟ್ಟ ಮೊದಲ ಪ್ರಕರಣವಾಗಿದೆ. ಚಳಿ ಜ್ವರದಿಂದ ಬಳಲುತ್ತಿದ್ದ ಯುವತಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೂರು ದಿನ ಚಿಕಿತ್ಸೆ ನೀಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಕೆಎಂಸಿ ಆಸ್ಪತ್ರೆಗೆ ಪೋಷಕರು ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಯುವತಿ ಮೃತಪಟ್ಟಿದ್ದಾಳೆ.

ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಾದ ಮಂಗನ ಕಾಯಿಲೆ; 14 ದಿನಗಳಲ್ಲಿ 37 ಜನರಿಗೆ ಸೋಂಕು, 3 ಮಂಗಗಳ ಸಾವು

ಚಿಕ್ಕಮಗಳೂರಿನಲ್ಲೂ ಹೆಚ್ಚಿಗೆಯಾದ ಮಂಗನ ಕಾಯಿಲೆ ಪ್ರಕರಣ

ಕಳೆದ ಕೆಲವು ದಿನಗಳ ಹಿಂದೆ ಅಂದರೆ ಫೆ.08ರ ವರೆಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಂಬತ್ತು ಜನರು ಮಂಗನ ಕಾಯಿಲೆಯಿಂದ ಬಳಲುತ್ತಿದ್ದರು. ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಒಂಬತ್ತು ಮಂಗನ ಕಾಯಿಲೆ ಪ್ರಕರಣಗಳ ಪೈಕಿ ಓರ್ವ ಸೋಂಕಿತ ಮೃತಪಟ್ಟಿದ್ದರು. ಇನ್ನು ಇಲ್ಲಿ ಪತ್ತೆಯಾದ ಮಂಗನ ಕಾಯಿಲೆ ಪ್ರಕರಣಗಳಲ್ಲಿ ಅತಿ ಹೆಚ್ಚು ಪ್ರಕರಣಗಳು ಒಎಲ್‌ವಿ ಎಸ್ಟೇಟ್ ಭಾಗದಲ್ಲಿ ಪತ್ತೆಯಾಗಿವೆ. ಈ ಒಎಲ್​ವಿ ಎಸ್ಟೇಟ್ ಕೊಪ್ಪ ತಾಲೂಕಿನಲ್ಲಿ ಇದೆ. ಹೀಗಾಗಿ ಆರೋಗ್ಯ ಇಲಾಖೆಯು ತಾಲೂಕಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಕೆಎಫ್​ಡಿ ವಾರ್ಡ್ ತೆರೆದಿದೆ.

ಕೆಎಫ್​ಡಿ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಿನ ಮೂರು ತಾಲೂಕುಗಳಲ್ಲಿ ಆತಂಕ ಸೃಷ್ಟಿಸಿದೆ. ಶಿವಮೊಗ್ಗ-ಉತ್ತರಕನ್ನಡಕ್ಕೆ ಹೊಂದಿಕೊಂಡಿದೆ. ಇದರಿಂದ ಈ ಭಾಗದಲ್ಲೂ ಪ್ರತಿ ವರ್ಷ ಮಂಗನ ಕಾಯಿಲೆ ಸೋಂಕಿನ ಆತಂಕ ಇದ್ದೇ ಇರುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ