ಶಿವಮೊಗ್ಗ: ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು
Shivamogga News: ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿರುವಂತಹ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಜೋಗ ಬಳಿ ನಡೆದಿದೆ. ಕೃಷಿ ಅಧಿಕಾರಿ ಕೆ.ಟಿ.ಕುಮಾರ್, ಖಾಸಗಿ ಕಂಪನಿ ಉದ್ಯೋಗಿ ಅರುಣ್ ಮೃತರು. ಕುಟುಂಬಸ್ಥರ ಜೊತೆಗೆ ಜೋಗ ಜಲಪಾತ ವೀಕ್ಷಣೆಗೆ ಆಗಮಿಸಿದ್ದ ಘಟನೆ ಸಂಭವಿಸಿದೆ.
ಶಿವಮೊಗ್ಗ, ಸೆಪ್ಟೆಂಬರ್ 24: ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿರುವಂತಹ (Death) ಘಟನೆ ಜಿಲ್ಲೆಯ ಸಾಗರ ತಾಲೂಕಿನ ಜೋಗ ಬಳಿ ನಡೆದಿದೆ. ಕೃಷಿ ಅಧಿಕಾರಿ ಕೆ.ಟಿ.ಕುಮಾರ್, ಖಾಸಗಿ ಕಂಪನಿ ಉದ್ಯೋಗಿ ಅರುಣ್ ಮೃತರು. ಕುಟುಂಬಸ್ಥರ ಜೊತೆಗೆ ಜೋಗ ಜಲಪಾತ ವೀಕ್ಷಣೆಗೆ ಆಗಮಿಸಿದ್ದ ಘಟನೆ ಸಂಭವಿಸಿದೆ. ಸಾಗರ ತಾಲೂಕು ಸರ್ಕಾರಿ ಆಸ್ಪತ್ರೆಗೆ ಇಬ್ಬರ ಮೃತದೇಹ ರವಾನೆ ಮಾಡಲಾಗಿದ್ದು, ಘಟನಾ ಸ್ಥಳಕ್ಕೆ ಕಾರ್ಗಲ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ
ರಾಯಚೂರು: ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಗಾಂಧಿನಗರ ಗ್ರಾಮದಲ್ಲಿ ನಡೆದಿದೆ. ದುರ್ಗಪ್ಪ ವೀರಾಪುರ(42) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಗಾಂಧಿ ನಗರ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರಾಗಿದ್ದರು.
ಇದನ್ನೂ ಓದಿ: ಬೆಂಗಳೂರು: ಶ್ವಾನದ ಜೊತೆ ಅಸಹಜ ಲೈಂಗಿಕ ಕ್ರಿಯೆ, ಆರೋಪಿ ಬಂಧನ
ಸಾವಿಗೂ ಮುನ್ನ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. “ನನ್ನಿಂದ ಯಾರಿಗಾದರೂ ತೊಂದರೆ ಆಗಿದ್ರೆ ಕ್ಷಮಿಸಿ ಬಿಡಿ” “ನನ್ನ ಮಕ್ಕಳಿಗೆ ನಾನು ನೋವು ಮಾಡಿದ್ದೇನೆ” “I miss You”ಎಂದು ಬರೆದು ಆತ್ಮಹತ್ಯೆಗೆ ಶರಣಾಗಿದ್ದಾರೆ. ತುರ್ವಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ-ಓರ್ವ ಸ್ಥಳದಲ್ಲೇ ಸಾವು
ಹಾಸನ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರಿಗೆ ಗಂಭೀರ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಶೆಟ್ಟಿಹಳ್ಳಿ ಗ್ರಾಮದ ಸಮೀಪ ನಡೆದಿದೆ. ಬೆಂಗಳೂರು ಮೂಲದ ಧೀರಜ್ (18) ಮೃತ ಯುವಕ.
ಇದನ್ನೂ ಓದಿ: ಬೆಂಗಳೂರು: ಆಂಟಿ ಎಂದ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಮಹಿಳೆ
ಕಾರಿನಲ್ಲಿದ್ದ ಜಗದೀಶ್, ನಳಿನಾಕ್ಷಿ, ದುಷ್ಯಂತ್‌ಗೆ ಗಂಭೀರ ಗಾಯಗಳಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.